ಸರ್ಕಾರ ಮಾತುಕತೆಗೆ ಸದಾ ಸಿದ್ದವಿದೆ; ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸವದಿ ಮನವಿ

Team Udayavani, Dec 12, 2020, 8:55 PM IST

laxamana

ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದು, ಮುಷ್ಕರ ನಡೆಯುವಂತಾಗಿರುವುದು ಮತ್ತು ಬಸ್ಸುಗಳಿಗೆ ಕಲ್ಲು ತೂರಾಟ ಹಾಗೂ ಹಾನಿಗೊಳಿಸುವಿಕೆಯಂತಹ ಅಹಿತಕರ ಘಟನೆ ನಡೆದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ.  ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ.

ಕೋವಿಡ್ ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮತ್ತೊಮ್ಮೆ ನಾನು ಭರವಸೆ ನೀಡಿದ್ದೇನೆ.  ಇನ್ನು ಸಿಬ್ಬಂದಿಗಳ ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ನಮ್ಮ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಲು ಸದಾ ಸಿದ್ಧವಿದೆ.  ಆದ್ದರಿಂದ ಕೋಟ್ಯಂತರ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಈ ಮುಷ್ಕರವನ್ನು ಕೈಬಿಟ್ಟು ತಮ್ಮ ಕರ್ತವ್ಯಕ್ಕೆ ವಾಪಸಾಗಬೇಕೆಂದು ನಾನು ನಮ್ಮ ಸಾರಿಗೆ ಸಂಸ್ಥೆಗಳ ಎಲ್ಲಾ ನೌಕರ ಬಾಂಧವರಲ್ಲಿ ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ: ಅಧಿಕಾರಿಗಳ ಮನವಿ ಯತ್ನ ವಿಫಲ

ನಮ್ಮ ಸಾರಿಗೆ ಸಂಸ್ಥೆಗಳ ಯಾವುದೇ ಒಕ್ಕೂಟಕ್ಕೆ ಸೇರಿಲ್ಲದವರು ಏಕಾಏಕಿಯಾಗಿ ಯಾವುದೇ ಮುನ್ಸೂಚನೆ ನೀಡದೇ ಬಸ್ ಸಂಚಾರ ಸ್ಥಗಿತಗೊಳ್ಳುವಂತೆ ಮುಷ್ಕರಕ್ಕೆ ಕರೆಕೊಟ್ಟಿರುವುದು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಬಂದ ಕೆಲವು ಸಿಬ್ಬಂದಿಗಳಿಗೆ ತೊಂದರೆ ನೀಡಿರುವುದು ಹಾಗೂ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯಾಗುವಂತೆ ವರ್ತಿಸಿರುವುದು ದುರದೃಷ್ಟಕರವಾಗಿದೆ.

ಇಂತಹ ಬೆಳವಣಿಗೆಗಳಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ದೊಡ್ಡ ಹಾನಿಯಾಗುವುದಲ್ಲದೇ ಸಾರ್ವಜನಿಕರಿಗೆ ಅನವಶ್ಯಕವಾಗಿ ತೊಂದರೆ ಉಂಟಾಗುವುದಕ್ಕೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಾರಿಗೆ ಮಿತ್ರರು ಸರ್ಕಾರದೊಂದಿಗೆ ಪರಸ್ಪರ ಸಹಕಾರದೊಂದಿಗೆ ತಮ್ಮ ದೈನಂದಿನ ಕರ್ತವ್ಯ ಮುಂದುವರೆಸಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.

ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ.  ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೂ ಸಹ ಸಾರಿಗೆ ಇಲಾಖೆಯ ಎಲ್ಲಾ ನೌಕರರ ಬೇಡಿಕೆಗಳ ಬಗ್ಗೆ ಉದಾರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ.  ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುವುದಕ್ಕೆ ಸದಾ ಸ್ವಾಗತವಿದೆ ಎಂದು ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಡಿ.14ರಂದು ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ: ವರದಿ

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.