ಸಿದ್ದರಾಮಯ್ಯಗೆ ಬಯಸಿದ ಮನೆ ನೀಡಿದ ಸರ್ಕಾರ
Team Udayavani, Oct 27, 2019, 3:05 AM IST
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸರ್ಕಾರ ಕಡೆಗೂ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡಿದೆ. ಸಿದ್ದರಾಮಯ್ಯ ಅವರು ಬಯಸಿದಂತೆ ಕುಮಾರಕೃಪಾ ಪೂರ್ವದಲ್ಲಿರುವ ಪ್ಲಾಟ್ ನಂಬರ್ 1ನ್ನು ನೀಡಿದೆ. ಈಗಾಗಲೇ ವಾಸವಿರುವ ಕಾವೇರಿ ನಿವಾಸವನ್ನು ತಮಗೆ ನೀಡುವಂತೆ ಸಿದ್ದರಾಮಯ್ಯ ನವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು.
ಆದರೆ, ಕಾವೇರಿ ನಿವಾಸವನ್ನು ಮುಖ್ಯಮಂತ್ರಿಗೆ ಹಂಚಿಕೆ ಮಾಡಿದ್ದರಿಂದ ಆ ನಿವಾಸವನ್ನು ತೆರವುಗೊಳಿಸುವಂತೆ ಸೂಚಿಸಿ, ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್-2ನ್ನು ಹಂಚಿಕೆ ಮಾಡಲಾಗಿತ್ತು. ಆ ನಿವಾಸಕ್ಕೆ ತೆರಳಲು ಹಿಂದೇಟು ಹಾಕಿದ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಂಚಿಕೆ ಮಾಡಿದ್ದ ಕುಮಾರಕೃಪಾ ಪೂರ್ವದಲ್ಲಿರುವ ಮನೆಯನ್ನು ತಮಗೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಅವರ ಮನವಿಯಂತೆ ಅವರು ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ವಾಸವಾಗಿದ್ದ ಕುಮಾರಕೃಪಾ ಪೂರ್ವ ಭಾಗದ ಮನೆಯನ್ನೇ ನೀಡಲಾಗಿದೆ. ಈ ನಿವಾಸದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಾಸವಿದ್ದರು. ಹೀಗಾಗಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್-2 ಮನೆಯನ್ನು ಹಂಚಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.