ಲೈಂಗಿಕ ದೌರ್ಜನ್ಯ: ಅಪ್ರಾಪ್ತೆಯ ಗರ್ಭಪಾತಕ್ಕೆ ಹೈಕೋರ್ಟ್‌ ನಕಾರ 


Team Udayavani, Sep 1, 2017, 10:21 AM IST

01-STATE-11.jpg

ಬೆಂಗಳೂರು: ತನ್ನ ಮೇಲಾದ ಲೈಂಗಿಕ ದೌರ್ಜನ್ಯದಿಂದಾಗಿ ಧರಿಸಿರುವ ಗರ್ಭವನ್ನು ತೆಗೆಯುವಂತೆ ವೈದ್ಯರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅಪ್ರಾಪ್ತ ಸಂತ್ರಸ್ತೆ ಸಲ್ಲಿಸಿದ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಗರ್ಭಪಾತ ಮಾಡಿಸಿದರೆ ತಾಯಿಯ ಜೀವಕ್ಕೆ ಅಪಾಯವಿದೆ
ಎಂಬ ವೈದ್ಯಕೀಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮದುವೆ ಆಗುವುದಾಗಿ ಪುಸಲಾಯಿಸಿ ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಘಟನೆ ಬಳಿಕ ಮಕ್ಕಳ ಕಲ್ಯಾಣ ಸಮಿತಿ ಮೂಲಕ ಬಾಲಕಿಯರ ಪೋಷಣಾ ಮಂದಿರಕ್ಕೆ ಸೇರಿಸಲಾಗಿತ್ತು. ಕೆಲ ದಿನಗಳ ಬಳಿಕ ಗರ್ಭ ಧರಿಸಿರುವುದು ಗೊತ್ತಾಯಿತು. ಆಗ ಆಕೆಯನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿದ ಮಕ್ಕಳ ಕಲ್ಯಾಣ ಸಮಿತಿ, ಗರ್ಭಪಾತ ಮಾಡಿಸುವಂತೆ ವೈದ್ಯರಿಗೆ ಕೋರಿಕೆ ಸಲ್ಲಿಸಿತ್ತು. ಆದರೆ, ಈಗಾಗಲೇ ಗರ್ಭ ನಿಂತು 20 ವಾರ ಆಗಿದೆ. ಇಂತಹ ಸಂದರ್ಭದಲ್ಲಿ ಗರ್ಭಪಾತ ಮಾಡಿದರೆ ಜೀವಕ್ಕೆ ಅಪಾಯ. ಹಾಗಾಗಿ, ಗರ್ಭಪಾತ ಸಾಧ್ಯವಿಲ್ಲ ಎಂದು ವೈದ್ಯರು ಶಿಫಾರಸ್ಸು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೊರೆ ಹೋದ ಸಂತ್ರಸ್ತೆ, ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಳು. ಈ ಬಗ್ಗೆ ಎಂ.ಎಸ್‌. ರಾಮಯ್ಯ ಆಸ್ಪತ್ರೆಯ ವೈದ್ಯರಿಂದ ವೈದ್ಯಕೀಯ ಅಭಿಪ್ರಾಯ ಪಡೆದುಕೊಳ್ಳುವಂತೆ ಹೈಕೋರ್ಟ್‌ ಸರ್ಕಾರಿ ವಕೀಲರಿಗೆ ಸೂಚನೆ ನೀಡಿತ್ತು. ಈ ಮಧ್ಯೆ, ಸಂತ್ರಸ್ತೆಯ ಹೇಳಿಕೆ ಆಧರಿಸಿ ಗರ್ಭಪಾತ  ಮಾಡಿಸಬಹುದು ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದರಾದರೂ, ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿದ್ದರು.

ಅಂತಿಮವಾಗಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಗರ್ಭಪಾತ ಮಾಡಿಸಿದರೆ ಯುವತಿಯ ಜೀವಕ್ಕೆ ಅಪಾಯವಿದೆ ಎಂಬ ವೈದ್ಯಕೀಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆಕೆಯ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿತು. 

ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಿರುವುದರಿಂದ ಗರ್ಭಪಾತ ಮಾಡಿ ಭ್ರೂಣವನ್ನು ಸಂರಕ್ಷಿಸಿಡಬೇಕು ಎಂದು ಸಂತ್ರಸ್ತೆ ಮಾಡಿದ್ದ ಮನವಿಗೆ “ಗರ್ಭಪಾತಕ್ಕೆ ಅವಕಾಶ ಇಲ್ಲದಿರುವಾಗ ಭ್ರೂಣವನ್ನು ಸಂರಕ್ಷಿಸಿಡುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ಹೇಳಿತು. ಆರೋಪಿ ಯುವಕನ ವಿರುದ್ಧ ಐಪಿಸಿ ಸೆಕ್ಷನ್‌ 376 ಹಾಗೂ ಪೋಸ್ಕೋ ಕಾಯ್ದೆಯ ಸೆಕ್ಷನ್‌ 4ರಡಿ ಪ್ರಕರಣ ದಾಖಲಾಗಿದ್ದು, ಸದ್ಯ ಆತ ಜೈಲಿನಲ್ಲಿದ್ದಾನೆ.

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.