ಬಸ್ ಚಾಲಕನನ್ನು ಕಲ್ಲಿನಿಂದ ಹೊಡೆದು ಕೊಂದ ಘಟನೆ ನನ್ನನ್ನು ದಿಗ್ಭ್ರಾಂತನನ್ನಾಗಿಸಿದೆ: HDK
Team Udayavani, Apr 17, 2021, 11:51 AM IST
ಬೆಂಗಳೂರು: ಮುಷ್ಕರ ಲೆಕ್ಕಿಸದೇ, ಜನರ ಸೇವೆಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ಚಾಲಕ ನಬಿ ರಸೂಲ್ ಆವಟಿ ಅವರನ್ನು ಜಮಖಂಡಿಯಲ್ಲಿ ಕಲ್ಲಿನಿಂದ ಹೊಡೆದು ಕೊಂದ ಘಟನೆ ನನ್ನನು ದಿಗ್ಭ್ರಾಂತನನ್ನಾಗಿಸಿದೆ. ಪ್ರತಿಭಟನೆ ಎತ್ತ ಸಾಗುತ್ತಿದೆ? ಸರ್ಕಾರ ಏನು ಮಾಡುತ್ತಿದೆ ? ಎಂಬ ಪ್ರಶ್ನೆಗಳು ನನ್ನನ್ನು ತೀವ್ರವಾಗಿ ಕಾಡಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
ಜಮಖಂಡಿಯ ಈ ದುರ್ಘಟನೆ ಯಾವ ಸಂದೇಶ ನೀಡುತ್ತಿದೆ ಎಂಬುದರತ್ತ ಸರ್ಕಾರ ಗಂಭೀರವಾಗಿ ಯೋಚಿಸಲಿ. ಅನಿವಾರ್ಯ ಸಂದರ್ಭದಲ್ಲಿ ಜನರಿಗೆ ಸೇವೆ ನೀಡಲು ಇನ್ನು ಮುಂದೆ ಯಾವ ನೌಕರ ಮುಂದೆ ಬರುತ್ತಾನೆ ಎಂಬುದರ ಚಿಂತನೆ ಮಾಡಲಿ. ಮುಷ್ಕರವನ್ನು ಹಿಂಸಾತ್ಮಕ ಹಂತಕ್ಕೆ ಬೆಳೆಯಲು ಬಿಟ್ಟ ಸರ್ಕಾರದ ನಡೆಯಲ್ಲಿ ಬೇಜವಾಬ್ದಾರಿತನ ಸ್ಪಷ್ಟವಾಗಿ ಕಾಣಿಸುತ್ತಿದೆ.
ಇದನ್ನೂ ಓದಿ: ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು
ಜಮಖಂಡಿ ದುರ್ಘಟನೆಯಲ್ಲಿ ಮೃತಪಟ್ಟ ಚಾಲಕ ನಬಿ ರಸೂಲ್ ಸರ್ಕಾರದ ಕರೆಗೆ ಓಗೊಟ್ಟು ಕರ್ತವ್ಯಕ್ಕೆ ಬಂದಿದ್ದವರು. ಹೀಗಾಗಿ ಅವರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಪರಿಹಾರ ಒದಗಿಸಬೇಕು. ಕೃತ್ಯವೆಸಗಿದವರಿಗೆ ಶಿಕ್ಷೆ ಕೊಡಿಸಬೇಕು. ನೌಕರರ ಬೇಡಿಕೆ ಒಂದು ಕಡೆ ಇರಲಿ. ಅದಕ್ಕೂ ಮೊದಲು ನೌಕರರಲ್ಲು ಈಗ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿಸುವ ಅಗತ್ಯವಿದೆ ಎಂದು ಈ ವೇಳೆ ಆಗ್ರಹಿಸಿದರು.
ಬಸ್ ಗಳ ಮೇಲೆ ದಾಳಿ ನಡೆಯುತ್ತಿರುವ ಪ್ರಸಂಗಗಳನ್ನು ಗಮನಿಸಿದ್ದೇನೆ. ಅಂಥವರನ್ನು ಕೂಡಲೇ ಬಂಧಿಸಬೇಕು. ನೌಕರರು ಈ ಕೃತ್ಯ ಮಾಡಿರಲಾರರು. ನೌಕರರ ಹೋರಾಟ ಸರ್ಕಾರದ ವಿರುದ್ಧವೇ ಹೊರತು, ಅನ್ನ ನೀಡುವ ಬಸ್ ಗಳ ವಿರುದ್ಧ ಅಲ್ಲ ಎಂಬ ನಂಬಿಕೆ ನನಗಿದೆ. ಮುಷ್ಕರ ಹಿಂಸೆ ರೂಪ ಪಡೆಯಬಾರದು. ಇಲ್ಲಿ ಯಾರ ಹಟವೂ ಗೆಲ್ಲದಿರಲಿ. ನಾಗರಿಕರಿಗೆ ಹಿತವಾಗಲಿ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಕೋವಿಡ್-19 ಸೋಂಕು ದೃಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.