ಲೋಕಸಭೆ ಚುನಾವಣೆಯೇ ಪ್ರವಾಸದ ಪ್ರಮುಖ ಅಜೆಂಡಾ
Team Udayavani, Aug 8, 2017, 9:33 AM IST
ಬೆಂಗಳೂರು: ಮುಂದಿನ ವರ್ಷ ರಾಜ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದ್ದರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ರಾಜ್ಯ ಪ್ರವಾಸ 2019ರ ಲೋಕಸಭೆ ಚುನಾವಣೆಯತ್ತಲೇ ಕೇಂದ್ರೀಕೃತವಾಗಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿದ 11 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸಿ 2019ರ ಚುನಾವಣೆಯಲ್ಲಿ ಅವುಗಳ ಪೈಕಿಯೂ ಕೆಲವು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಅಮಿತ್ ಶಾ ವಿಶೇಷ ಗಮನಹರಿಸಿದ್ದಾರೆ.
ಅಮಿತ್ ಶಾ ಪ್ರವಾಸದ ವೇಳಾಪಟ್ಟಿಯಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಅನೇಕ ಕಾರ್ಯ ಕ್ರಮಗಳಿವೆಯಾದರೂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಅಜೆಂಡಾ ಇಲ್ಲ. ಶಾ ಅವರು ಪ್ರವಾಸದ ವೇಳೆ ಪಕ್ಷದ ಪದಾಧಿಕಾರಿಗಳು, ವಿವಿಧ ಘಟಕಗಳ ಸಭೆ ಜತೆಗೆ ಶಾಸಕರು
ಮತ್ತು ಸಂಸದರೊಂದಿಗೂ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲೇ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲಾಗುತ್ತದೆ. ಆದರೆ, ಲೋಕಸಭೆ ಚುನಾವಣೆ ವಿಚಾರದಲ್ಲಿ ಮಾತ್ರ ವಿಶೇಷ ಗಮನ ಹರಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಈ ಪೈಕಿ 17 ಕ್ಷೇತ್ರಗಳಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಹೀಗಾಗಿ ಸೋಲು ಅನುಭವಿಸಿರುವ 11 ಕ್ಷೇತ್ರಗಳತ್ತ ಗಮನಹರಿಸಲಿರುವ ಶಾ, ಆ ನಿಟ್ಟಿನಲ್ಲಿ ತಮ್ಮ ಪ್ರವಾಸದ ಕೊನೆಯ ದಿನ (ಆ. 14) ಈ 11 ಕ್ಷೇತ್ರಗಳ ಪ್ರಮುಖರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ.
ಎಸ್‌ಸಿ, ಎಸ್ಟಿ, ಓಬಿಸಿ ಸಂಘಟನೆಗೆ ಆದ್ಯತೆ: ಮಿನಿ ಲೋಕಸಭೆ ಚುನಾವಣೆ ಎಂದೇ ಹೇಳಲಾಗುತ್ತಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚೆಗೆ ಬಿಜೆಪಿ ಅತ್ಯಧಿಕ ಸ್ಥಾನಗಳೊಂದಿಗೆ ಬಹುಮತಕ್ಕೆ ಬರಲು ಕಾರಣವಾಗಿದ್ದು ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದವರ ಮತಗಳು ಪಕ್ಷದ ಪರ ಧ್ರುವೀಕರಣಗೊಂಡಿರುವುದು. ಇದೇ ಮಾದರಿಯನ್ನು ಕರ್ನಾಟಕಕ್ಕೂ ಅಳವಡಿಸಿಕೊಳ್ಳಲು ಮುಂದಾಗಿರುವ ಅಮಿತ್ ಶಾ, ತಮ್ಮ ರಾಜ್ಯ ಭೇಟಿ ಸಂದರ್ಭದಲ್ಲಿ ಈ ಸಮುದಾಯದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಲಿದ್ದಾರೆ.
ಉತ್ತರಪ್ರದೇಶದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದವರ ಮತಗಳು ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳತ್ತ ಇತ್ತು. ರಾಜ್ಯದಲ್ಲಿ ಈ ಸಮುದಾಯದ ಬಹುತೇಕ ಮತಗಳು ಕಾಂಗ್ರೆಸ್‌ನತ್ತ ವಾಲಿವೆ. ಉತ್ತರ ಪ್ರದೇಶದಲ್ಲಿ ಈ ಸಮುದಾಯದ ಮತಗಳನ್ನು ಎಸ್ಪಿ ಮತ್ತು ಬಿಎಸ್ಪಿಯಿಂದ ದೂರ ಮಾಡಿ ಬಿಜೆಪಿಯತ್ತ ಸೆಳೆದು ಕೊಂಡಂತೆ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಯತ್ತ ಸೆಳೆಯಲು ಶಾ ಮುಂದಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.