ಎಲ್ಲ ಜಿಲ್ಲೆಗಳಲ್ಲಿ ಚುರುಕಾಗಲಿ ಆಡಳಿತ ಯಂತ್ರ; ಜಿಲ್ಲಾ ಉಸ್ತುವಾರಿ ಸಚಿವರ ಗೈರಿನದ್ದೇ ಚಿಂತೆ

ಜಿಲ್ಲೆಗಳಲ್ಲಿ ತ್ತೈಮಾಸಿಕ ಕೆಡಿಪಿ ಸಭೆಗಳೇ ಮರೀಚಿಕೆ

Team Udayavani, May 11, 2022, 6:25 AM IST

CMಎಲ್ಲ ಜಿಲ್ಲೆಗಳಲ್ಲಿ ಚುರುಕಾಗಲಿ ಆಡಳಿತ ಯಂತ್ರ; ಜಿಲ್ಲಾ ಉಸ್ತುವಾರಿ ಸಚಿವರ ಗೈರಿನದ್ದೇ ಚಿಂತೆ

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ತ್ವರಿತ ಅನುಷ್ಠಾನದ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ಯಂತ್ರವನ್ನು ಚುರುಕುಗೊಳಿಸುತ್ತಿದ್ದು, ಇದೇ ಮಾದರಿಯ ಕಾರ್ಯನಿರ್ವಹಣೆ ಜಿಲ್ಲಾಮಟ್ಟದಲ್ಲೂ ನಡೆಯಬೇಕಿದೆ.

ಪ್ರಮುಖ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮುಖ್ಯಮಂತ್ರಿ ಸರಣಿ ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ, “ಉದಯವಾಣಿ’ ರಿಯಾಲಿಟಿ ಚೆಕ್‌ ನಡೆಸಿದ್ದು, ತಳಮಟ್ಟದಲ್ಲಿನ ಗೋಜಲು-ಗೊಂದಲಗಳನ್ನು ಪಟ್ಟಿ ಮಾಡುವುದರ ಜತೆಗೆ, ಜಿಲ್ಲಾ ಉಸ್ತುವಾರಿ ಸಚಿವರು ಎಷ್ಟರ ಮಟ್ಟಿಗೆ ಕಾರ್ಯತತ್ಪರರಾಗಿದ್ದಾರೆ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿತು.

ಬಜೆಟ್‌ ಅನಂತರ ಬಹುತೇಕ ಜಿಲ್ಲೆಗಳಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯದಿರುವುದು ಹಾಗೂ ಕೆಲವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ಭೇಟಿಯೇ ಅಪರೂಪವಾಗಿರುವುದು ಕಂಡುಬಂದಿದೆ. ಇದಕ್ಕೆ ಜಿಲ್ಲೆಗಳಲ್ಲಿ ಕೇಳಿ ಬರುವ ಆರೋಪ ಮಾತ್ರ ಗಮನಾರ್ಹವಾಗಿದೆ. ಆಯಾ ಜಿಲ್ಲೆಗಳ ಸಚಿವರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದರೆ ಸರಿ ಹೋಗಬಹುದು ಎಂದೂ ಸ್ಥಳೀಯರು ಹೇಳುತ್ತಾರೆ.

ಪೂರಕವಲ್ಲ; ಮಾರಕ
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಹಗ್ಗಜಗ್ಗಾಟವಾಗಿದ್ದರಿಂದ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿರುವ ಸಚಿವರಿಗೆ ತವರಿನ ಜಿಲ್ಲೆಗಳನ್ನು ಬಿಟ್ಟು, ಬೇರೆ ಬೇರೆ ಜಿಲ್ಲೆಗಳನ್ನು ನೀಡಲಾಗಿದೆ. ಇದು ಪ್ರಗತಿಗೆ ಪೂರಕವಾಗುವುದರ ಬದಲಿಗೆ ಮಾರಕವಾದಂತಾಗಿದೆ.

ಕೆಡಿಪಿ ಸಭೆಗಳೇ ಆಗಿಲ್ಲ
ಜಿಲ್ಲಾಮಟ್ಟದಲ್ಲಿ ಯೋಜನೆಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದರೆ, ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ಸಭೆಯಾಗಬೇಕು. ಈ ಪ್ರಗತಿ ಪರಿಶೀಲನೆಗಳ ಹೊಣೆ ಹೊರುವವರೇ ಜಿಲ್ಲಾ ಉಸ್ತುವಾರಿ ಸಚಿವರು. ಆದರೆ, ಎಷ್ಟೋ ಜಿಲ್ಲೆಗಳಿಗೆ ಸರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹೋಗದೇ ಇರುವುದರಿಂದ ಕೆಡಿಪಿ ಸಭೆಗಳು ಕಾಲ ಕಾಲಕ್ಕೆ ಆಗುತ್ತಿಲ್ಲ ಎಂಬ ಆರೋಪಗಳಿವೆ. ಅಂದರೆ, ಕಲಬುರಗಿ, ಬೀದರ್‌, ಶಿವಮೊಗ್ಗ, ವಿಜಯಪುರ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಫೆಬ್ರವರಿಯಲ್ಲಿ ಕೆಡಿಪಿ ಸಭೆ ನಡೆದಿವೆಯಾದರೂ, ಬಜೆಟ್‌ ಅನಂತರದಲ್ಲಿ ಸಭೆಗಳು ನಡೆದಿಲ್ಲ.

ಶಾಸಕರೇ ಹೊಣೆ ಹೊರಲಿ
ಬಜೆಟ್‌ ಅನುಷ್ಠಾನ ಸಂಬಂಧ ಈಗ ಇನ್ನೊಂದು ಸಮಸ್ಯೆಯೂ ಇದೆ. ಈಗಾಗಲೇ ಜಿ.ಪಂ.ಗಳ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಚುನಾವಣೆ ನಡೆಯಬೇಕಾಗಿದೆ. ಆದರೆ, ಇನ್ನೂ ಮೀಸಲಾತಿ ಸೇರಿದಂತೆ ಇತರ ಗೊಂದಲಗಳಿಂದ ಚುನಾವಣೆ ನಡೆದಿಲ್ಲ. ಹೀಗಾಗಿ, ಬಜೆಟ್‌ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ ಎಂಬ ದೂರುಗಳಿವೆ. ಆದರೆ, ಜಿಲ್ಲಾ ಪಂಚಾಯತ್‌ ಇಲ್ಲದೇ ಇರುವುದರಿಂದ ಜಿಲ್ಲೆಗಳಲ್ಲಿರುವ ತಾಲೂಕುಗಳ ಶಾಸಕರೇ ಪ್ರಗತಿ ಕಾರ್ಯದ ಹೊಣೆ ಹೊರಬಹುದಾಗಿದೆ. ನಿಜವಾಗಿಯೂ ಬಜೆಟ್‌ನಲ್ಲಿನ ಕಾರ್ಯಕ್ರಮಗಳ ಅನುಷ್ಠಾನವಾಗಬೇಕಾದರೆ ಅವರು ಕೈಜೋಡಿಸಲೇಬೇಕು. ತಮ್ಮ ಕ್ಷೇತ್ರಗಳ ವ್ಯಾಪ್ತಿಗೆ ಸರಕಾರದಿಂದ ಘೋಷಣೆಯಾಗಿರುವ ಯೋಜನೆಗಳ ಮಾಹಿತಿ ಪಡೆದು, ಅವುಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಬೇಕಾಗಿದೆ.

ಹೆಚ್ಚುವರಿ ಏಕೆ?
ಸದ್ಯ ಮೂರ್ನಾಲ್ಕು ಸಚಿವರು ತಲಾ ಎರಡು ಜಿಲ್ಲೆಗಳ ಉಸ್ತುವಾರಿ ಹೊತ್ತಿದ್ದಾರೆ. ಸದ್ಯ ಅವರ ಇಲಾಖೆ ಕಾರ್ಯಗಳ ಜತೆಗೆ, ಎರಡೆರಡು ಜಿಲ್ಲೆಗಳ ಪ್ರಗತಿಯನ್ನೂ ನೋಡಿಕೊಳ್ಳಬೇಕಾಗಿದೆ. ಇದಕ್ಕಿಂತ ಈಗ ಇರುವ ಸಚಿವರನ್ನೇ ಬಳಸಿಕೊಂಡು ಎಲ್ಲರಿಗೂ ತಲಾ ಒಂದೊಂದು ಜಿಲ್ಲೆಗಳ ಉಸ್ತುವಾರಿ ನೀಡುವುದು ಸೂಕ್ತ.

ದಕ್ಷಿಣ ಕನ್ನಡ ಉತ್ತಮ
ಜಿಲ್ಲಾಮಟ್ಟದಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಬಂದರೆ, ಮೈಸೂರು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಉತ್ತಮ ಸ್ಥಿತಿಯಲ್ಲಿವೆ. ಮೈಸೂರಿನಲ್ಲಿ ಕೆಡಿಪಿ ಸಭೆಗಳಿಗಿಂತ, ಸ್ವತಃ ಸಚಿವರೇ ಎಲ್ಲ ಯೋಜನೆಗಳ ಉಸ್ತುವಾರಿ ವಹಿಸಿಕೊಂಡು ಆಗಾಗ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ, ಅಲ್ಲಿನ ಸಚಿವರು ಕೆಡಿಪಿ ಸಭೆ ಜತೆಗೆ, ಗ್ರಾ.ಪಂ. ಮಟ್ಟದಿಂದ ಹಿಡಿದು, ತಾಲೂಕು ಮಟ್ಟದವರೆಗೂ ಅಧಿಕಾರಿಗಳ ಸಭೆ ನಡೆಸಿ ಕಡತ ವಿಲೇವಾರಿ ಮಾಡುತ್ತಿದ್ದಾರೆ. ಹಾಗೆಯೇ, ಕಾಲ ಕಾಲಕ್ಕೆ ಯೋಜನೆಗಳ ಮಾಹಿತಿ ಪಡೆಯುತ್ತಿದ್ದಾರೆ. ಈಶ್ವರಪ್ಪ ಅವರ ರಾಜೀನಾಮೆ ಬಳಿಕ ಚಿಕ್ಕಮಗಳೂರಿಗೆ ಉಸ್ತುವಾರಿಗಳೇ ಇಲ್ಲವಾಗಿದೆ.

ಸ್ಥಳೀಯರೇ ಉಸ್ತುವಾರಿಗಳಾಗಲಿ
ಮೊದಲೇ ಹೇಳಿದಂತೆ ಜಿಲ್ಲೆಗಳಿಗೆ ಅಲ್ಲಿಯ ಸಚಿವರನ್ನೇ ಉಸ್ತುವಾರಿ ಮಾಡಿದರೆ ಉತ್ತಮ ಎಂಬ ಮಾತುಗಳಿವೆ. ಅಲ್ಲದೆ, ಕೆಲವು ಸಚಿವರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಆಯಾ ಜಿಲ್ಲೆಗಳ ಸಚಿವರಿಗೇ ಉಸ್ತುವಾರಿ ನೀಡಿದರೆ, ಅವರಿಗೆ ಸರಿಯಾದ ರೀತಿಯಲ್ಲಿ ಸಮಸ್ಯೆಗಳ ಅರಿವಿರುತ್ತದೆ. ಹಾಗೆಯೇ, ತಮ್ಮ ಜಿಲ್ಲೆಗೆ ಬೇಕಾದ ಯೋಜನೆಗಳೇನು? ಅವುಗಳು ಯಾವ ಹಂತದಲ್ಲಿವೆ ಎಂಬ ಮಾಹಿತಿಯೂ ಇರುತ್ತದೆ. ಅಲ್ಲದೆ, ತಮ್ಮ ಜಿಲ್ಲೆಗಾಗಿ ಅವರು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

 

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Raichur: ಕಾಂಗ್ರೆಸ್ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ

Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿಕೆಶಿ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.