ಯೋಗೀಶಗೌಡ ಹತ್ಯೆ; ಸುಪಾರಿ ಹಂತಕರ ಸೆರೆ
Team Udayavani, Mar 2, 2020, 3:05 AM IST
ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸುಪಾರಿ ಹಂತಕರನ್ನು ಬಂ ಧಿಸುವಲ್ಲಿ ಸಿಬಿಐ ಯಶಸ್ವಿಯಾಗಿದೆ. ಬಂಧಿತ ಆರು ಮಂದಿ ಬೆಂಗಳೂರು ಹಾಗೂ ತಮಿಳುನಾಡು ಮೂಲದವರು ಎನ್ನಲಾಗಿದ್ದು, ಅವರನ್ನು ಭಾನುವಾರ ಪ್ರಧಾನ ಜೆಎಂಎಫ್‌ಸಿ ನ್ಯಾಯಾಧೀಶೆ ವಿಜಯಲಕ್ಷ್ಮೀ ಘಾಣಾಪುರ ಮುಂದೆ ಹಾಜರುಪಡಿಸಲಾಗಿತ್ತು.
ಸದ್ಯ ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ನ್ಯಾಯಾಧಿಧೀಶರು ಸೂಚಿಸಿದರು. ಈ ಮೊದಲು ಕೊಲೆ ಆರೋಪದಡಿ ಬಂಧಿತರಾದ ಆರು ಮಂದಿ ಆರೋಪಿಗಳು ಈ ಹಂತಕರಿಗೆ ಸುಪಾರಿ ನೀಡಿದ ಬಗ್ಗೆ ಸಿಬಿಐ ತನಿಖೆ ವೇಳೆ ಬಯಲಿಗೆ ಬಂದಿದೆ. ಸುಪಾರಿ ಪಡೆದ ನೈಜ ಆರೋಪಿಗಳು ಯೋಗೀಶಗೌಡ ಗೌಡರ ಕೊಲೆ ಮಾಡಿ ಸಿನಿಮೀಯ ರೀತಿಯಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗಿದ್ದರು.
ಸುಪಾರಿ ನೀಡಿದ ಆರೋಪಿಯೊಬ್ಬ ಸಿಬಿಐ ತನಿಖೆಗೆ ರಾಜ್ಯ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಬಂಧನದ ಭೀತಿಯಿಂದ ಆರೋಪಿಗಳು ತಮಿಳುನಾಡಿಗೆ ಪರಾರಿಯಾಗಲು ಯತ್ನಿಸಿದ್ದರು. ಅಷ್ಟರಲ್ಲೇ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಬಂಧಿ ಸಿದ್ದಾರೆ. ಈಗ ನೈಜ ಆರೋಪಿಗಳು ಸಿಬಿಐ ಬಲೆಗೆ ಬಿದ್ದಿರುವುದರಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.