ಮತ್ತೆ ಶುರುವಾಗಿದೆ ನಂಬರ್ ಜಿಜ್ಞಾಸೆ
Team Udayavani, Jul 25, 2019, 3:03 AM IST
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಆದರೆ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೂ ತಾಂತ್ರಿಕ ಕಾರಣಗಳು ಅಡ್ಡಿಯಾಗುವ ಸಾಧ್ಯತೆ ಇದೆ. ರಾಜೀನಾಮೆ ಸಲ್ಲಿಸಿರುವ ಹದಿನೈದು ಶಾಸಕರ ರಾಜೀನಾಮೆ ಅಂಗೀಕಾರವಾಗದೇ ಇರುವುದರಿಂದ ರಾಜ್ಯ ವಿಧಾನಸಭೆಯ 225 ಸಂಖ್ಯಾ ಬಲದಲ್ಲಿ ಬಹುಮತ ಸಾಬೀತಿಗೆ ಅಗತ್ಯವಿರುವ 113 ಶಾಸಕರ ಬೆಂಬಲದ ಪಟ್ಟಿಯನ್ನು ರಾಜ್ಯಪಾಲರಿಗೆ ತೋರಿಸಬೇಕಾದ ಅನಿವಾರ್ಯತೆ ಇದೆ ಎಂಬ ಬಗ್ಗೆ ತಾಂತ್ರಿಕ ಜಿಜ್ಞಾಸೆ ಈಗ ಉಂಟಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಯಾವುದೇ ಪಕ್ಷಕ್ಕೂ ಸ್ವಷ್ಪ ಬಹುಮತ ಇಲ್ಲದಿರುವುದರಿಂದ ಅತಿ ಹೆಚ್ಚು ಸ್ಥಾನ ಪಡೆದ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡಲು ರಾಜ್ಯಪಾಲರಿಗೆ ಮನವರಿಕೆಯಾಗಬೇಕು. ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯವೂ ರಾಜ್ಯಪಾಲರ ನಡೆಯ ಮೇಲೆ ನಿಂತಿದ್ದು, ಈಗಾಗಲೇ ಒಂದು ಬಾರಿ ರಾಜ್ಯಪಾಲರು ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದಾಗ ಅವರು ಬಹುಮತ ಸಾಬೀತು ಪಡಿಸದೇ ವಿಫಲರಾಗಿರುವುದರಿಂದ ರಾಜ್ಯಪಾಲರು ಈ ಬಾರಿ ಅವರಿಗೆ ಸ್ಪಷ್ಟ ಸಂಖ್ಯಾ ಬಲ ತೋರಿಸದೇ ಅವಕಾಶ ನೀಡುವ ಬಗ್ಗೆ ಯೋಚಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹಾಲಿ ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರ ಸಂಖ್ಯಾ ಬಲ ಹೊಂದಿದ್ದು, ಇಬ್ಬರು ಪಕ್ಷೇತರರ ಬೆಂಬಲ ವ್ಯಕ್ತವಾದರೂ 107ಕ್ಕೆ ಏರಿಕೆಯಾಗಲಿದೆ. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹದಿನೈದು ಜನ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗದೇ ಉಳಿದಿರುವುದರಿಂದ, ಅವರ ರಾಜೀನಾಮೆ ಪ್ರಕರಣಗಳನ್ನು ಸ್ಪೀಕರ್ ಇತ್ಯರ್ಥಗೊಳಿಸುವವರೆಗೂ ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದಂತಾಗುತ್ತದೆ.
ಹೀಗಾಗಿ, ರಾಜ್ಯಪಾಲರೂ ಶಾಸಕರ ರಾಜೀನಾಮೆ ಪ್ರಕರಣಗಳು ಇತ್ಯರ್ಥವಾಗುವವರೆಗೂ ಬಿಜೆಪಿಗೆ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಆಹ್ವಾನ ನೀಡುವುದು ಅನುಮಾನ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಆದರೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಪೂರ್ಣ ವಿವರ ರಾಜ್ಯಪಾಲರ ಬಳಿ ಇದೆ. ಅಲ್ಲದೆ, ಅತಿ ದೊಡ್ಡ ಪಕ್ಷವನ್ನು ಬಹುಮತ ಸಾಬೀತು ಪಡಿಸಲು ಆಹ್ವಾನಿಸುವ ಅಧಿಕಾರವೂ ಅವರಿಗಿದೆ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಿ ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಲೂ ಬಹುದು ಎನ್ನಲಾಗಿದೆ.
ಅವರಿಗೆಲ್ಲಿದೆ ಬಹುಮತ?: ರಾಜ್ಯಪಾಲ ವಜುಭಾಯಿ ವಾಲಾ ಅವರು ಸದ್ಯದ ಕರ್ನಾಟಕ ವಿಧಾನಸಭೆಯ ಸಂಖ್ಯಾ ಬಲದ ಆಧಾರದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲ ಎನ್ನುವ ಅಭಿಪ್ರಾಯವನ್ನು ಮಂಗಳವಾರ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆಯೇ? ಹಾಗೆಂದು ಮೂಲಗಳು ಹೇಳುತ್ತಿವೆ. ಬಿಜೆಪಿಯವರನ್ನು ಯಾವಾಗ ಸರ್ಕಾರ ರಚನೆಗೆ ಆಹ್ವಾನಿಸುತ್ತೀರಿ ಎಂದು ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಲು ತೆರಳಿದಾಗ ನಿಯೋಗದಲ್ಲಿದವರು ರಾಜ್ಯಪಾಲರನ್ನು ಕೇಳಿದರು. ಆಗ ಅವರಿಗೂ ಎಲ್ಲಿದೆ ಬಹುಮತ ಎಂದು ಅವರು ಮರು ಪ್ರಶ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಡಿಯೂರಪ್ಪ ಈಗಾಗಲೇ ಒಂದು ಬಾರಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿರುವುದರಿಂದ ರಾಜ್ಯಪಾಲರು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡುವುದು ಅನುಮಾನ. ಹಾಲಿ ಸಂಖ್ಯಾ ಬಲದಲ್ಲಿ ಬಹುಮತ ಸಾಬೀತು ಪಡಿಸಲು 113 ಶಾಸಕರ ಬೆಂಬಲದ ಪಟ್ಟಿಯನ್ನು ರಾಜ್ಯಪಾಲರಿಗೆ ತೋರಿಸಿ ಮನವರಿಕೆ ಮಾಡಿಕೊಟ್ಟರೆ, ಸರ್ಕಾರ ರಚನೆಗೆ ಅವಕಾಶ ನೀಡಬಹುದು.
-ಪ್ರೊ.ರವಿವರ್ಮಕುಮಾರ್, ಮಾಜಿ ಅಡ್ವೋಕೇಟ್ ಜನರಲ್
ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಪಕ್ಷದ ನಾಯಕನಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಲು ರಾಜ್ಯಪಾಲರು ಅವಕಾಶ ನೀಡಬಹುದು. ಆದರೆ, ಅವರಿಗೆ ಆ ನಾಯಕನಿಗೆ ಬಹುಮತ ಸಾಬೀತು ಪಡಿಸುವಷ್ಟು ಶಾಸಕರ ಸಂಖ್ಯಾಬಲ ಇದೆ ಎನ್ನುವುದು ಮನವರಿಕೆಯಾಗಬೇಕು. ಆಗ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಿ, ನಿರ್ಧಿಷ್ಟ ಸಮಯದಲ್ಲಿ ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಬಹುದು.
-ಬಿ.ವಿ.ಆಚಾರ್ಯ, ಮಾಜಿ ಅಡ್ವೋಕೇಟ್ ಜನರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.