ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಇಂದು ನಿರ್ಧಾರ ಸಾಧ್ಯತೆ

Team Udayavani, Jul 30, 2019, 3:00 AM IST

Udayavani Kannada Newspaper

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಅಧಿಕಾರ ಕಳೆದುಕೊಂಡು ಪ್ರತಿಪಕ್ಷದ ಸ್ಥಾನದಲ್ಲಿ ಕೂತಿರುವ ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆಯ ಕಸರತ್ತು ಆರಂಭವಾಗಿದೆ. ಸೋಮವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಕುಳಿತು ಸದನದ ಕಲಾಪಗಳಲ್ಲಿ ಪಾಲ್ಗೊಂಡಿದ್ದರು.

ಆದರೆ, ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕರನ್ನು ಬೇರೆ ಬೇರೆಯವರಿಗೆ ವಹಿಸಬೇಕೆಂಬ ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಿದ್ದರಾಮಯ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿರುವುದರಿಂದ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಬೇರೆಯವರನ್ನು ಆಯ್ಕೆ ಮಾಡುವ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಝಾದ್‌ ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಮಂಗಳವಾರ ಎರಡೂ ಸದನಗಳ ಪ್ರತಿಪಕ್ಷದ ನಾಯಕರ ಆಯ್ಕೆ ಕುರಿತು ರಾಜ್ಯದ ಹಿರಿಯ ಕಾಂಗ್ರೆಸ್‌ ನಾಯಕರ ಜೊತೆ ಗುಲಾಂ ನಬಿ ಆಝಾದ್‌ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹೊರತಾಗಿ ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ್‌, ಆರ್‌.ವಿ.ದೇಶಪಾಂಡೆ ಹಾಗೂ ಡಾ.ಜಿ.ಪರಮೇಶ್ವರ್‌ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ.

ಮೈತ್ರಿ ಸರ್ಕಾರದಲ್ಲಿ ಆರ್‌.ವಿ.ದೇಶಪಾಂಡೆ ಹಾಗೂ ಡಾ.ಜಿ.ಪರಮೇಶ್ವರ್‌ ಅವರು ಸಚಿವರಾಗಿ ಅಧಿಕಾರ ಅನುಭವಿಸಿದ್ದರಿಂದ ಎಚ್‌.ಕೆ. ಪಾಟೀಲ್‌ರಿಗೆ ಪ್ರತಿಪಕ್ಷದ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಇನ್ನು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕನ ಸ್ಥಾನ ಕುರಿತಂತೆಯೂ ಮಂಗಳವಾರ ನಡೆಯುವ ಸಭೆಯಲ್ಲಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮಾಜಿ ಸಚಿವ ಎಸ್‌.ಆರ್‌.ಪಾಟೀಲ್‌ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿ.ಎಂ. ಇಬ್ರಾಹಿಂ ಅವರನ್ನೂ ಮೇಲ್ಮನೆ ಪ್ರತಿಪಕ್ಷದ ನಾಯಕರನ್ನಾಗಿ ಮಾಡುವಂತೆ ಒತ್ತಡವೂ ಕೇಳಿ ಬರುತ್ತಿದೆ. ಇನ್ನು ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತರಾಗಿದ್ದ ಗಣೇಶ್‌ ಹುಕ್ಕೇರಿ ಅವರನ್ನೇ ಪ್ರತಿಪಕ್ಷದ ಮುಖ್ಯ ಸಚೇತಕರನ್ನಾಗಿ ಮುಂದುವರೆಸುವ ಸಾಧ್ಯತೆ ಇದೆ. ಮೇಲ್ಮನೆಗೆ ರಘು ಆಚಾರ್‌ ಅವರನ್ನು ಪ್ರತಿಪಕ್ಷದ ಸಚೇತಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.