ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

Team Udayavani, Nov 26, 2018, 12:56 PM IST

antima-mandya.jpg

ಬೆಂಗಳೂರು/ಮಂಡ್ಯ: ನೆಚ್ಚಿನ ನಾಯಕ, ಹೃದಯ ಸಾಮ್ರಾಟ ಅಂಬರೀಶ್‌ ನಿಧನ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿತ್ತು. ಅಂಬರೀಶ್‌ ನಿಧನದ ಸುದ್ದಿ ತಿಳಿದು ಶೋಕಸಾಗರದಲ್ಲಿ ಮುಳುಗಿದ್ದ ಅಭಿಮಾನಿಗಳು ಅವರ ಪಾರ್ಥಿವ ಶರೀರ ಕಂಡ ಕೂಡಲೇ ದುಃಖದ ಕಟ್ಟೆ ಒಡೆದು ಮಂಡ್ಯ ಅಕ್ಷರಶಃ ಕಣ್ಣೀರ ಕಡಲಾಯಿತು.

ಬೆಂಗಳೂರಿನಿಂದ ರಕ್ಷಣಾ ಹೆಲಿಕಾಪ್ಟರ್‌ನಲ್ಲಿ ಅಂಬರೀಶ್‌ ಪಾರ್ಥಿವ ಶರೀರವನ್ನು ಸಂಜೆ 4.58ರ ವೇಳೆಗೆ ಮಂಡ್ಯದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಕರೆತರಲಾಯಿತು. ಪಾರ್ಥಿವ ಶರೀರದ ಜತೆ ಮುಖ್ಯಮಂತ್ರಿ ಕುಮಾಸ್ವಾಮಿ, ಅಂಬರೀಶ್‌ ಪತ್ನಿ ಸುಮಲತಾ, ಪುತ್ರ ಅಭಿಷೇಕ್‌, ನಟ ನಿಖೀಲ್‌ ಕುಮಾರಸ್ವಾಮಿ ಹಾಗೂ ಸಚಿವ ಸಾ.ರಾ.ಮಹೇಶ್‌ ಆಗಮಿಸಿದರು. ಮತ್ತೂಂದು ಹೆಲಿಕಾಪ್ಟರ್‌ ತೂಬಿನಕೆರೆ ಹೆಲಿಪ್ಯಾಡ್‌ನ‌ಲ್ಲಿ ಇಳಿಯಿತು.

ಅದರಲ್ಲಿ ಸುಮಲತಾ ಸಂಬಂಧಿಕರು ಆಗಮಿಸಿ, ಅಲ್ಲಿಂದ ಕಾರುಗಳ ಮೂಲಕ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಆಗಮಿಸಿದರು. ಕ್ರೀಡಾಂಗಣದ ಧ್ವಜ ಕಟ್ಟೆ ಎದುರು ನಿರ್ಮಿಸಲಾಗಿದ್ದ ಪುಷ್ಪಗಳಿಂದ ಅಲಂಕರಿಸಿದ ಮಂಟಪದಲ್ಲಿ ಅಂಬರೀಶ್‌ ಪಾರ್ಥಿವ ಶರೀರ ಇಡಲಾಯಿತು. ಈ ಮಂಟಪಕ್ಕೆ ಸುಂದರವಾದ ವಿದ್ಯುತ್‌ ಬೆಳಕಿನ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕ ದರ್ಶನಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಂಡ ಬಳಿಕ 5.18ರ ವೇಳೆಗೆ ಅವರನ್ನು ಕ್ರೀಡಾಂಗಣದ ಒಳಗೆ ಬಿಡಲಾಯಿತು. 

ಕ್ರೀಡಾಂಗಣದ ಒಂದು ಗೇಟ್‌ನಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ಕಲ್ಪಿಸಲಾಯಿತು. ಒಮ್ಮೆಲೆ ನುಗ್ಗಿಬಂದ ಅಭಿಮಾನಿಗಳ ಪ್ರವಾಹವನ್ನು ನಿಯಂತ್ರಿಸಲು ಪೊಲೀಸರಿಂದ ಸಾಧ್ಯವಾಗಲಿಲ್ಲ. ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಅಭಿಮಾನಿಗಳು ಒಳನುಗ್ಗಿ ಪಾರ್ಥಿವ ಶರೀರದತ್ತ ದೌಡಾಯಿಸಿದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದರು. ಸ್ವಲ್ಪ ಸಮಯದ ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತಂದು ಸುಗಮವಾಗಿ ಪಾರ್ಥಿವ ಶರೀರದ ದರ್ಶನ ಪಡೆಯುವುದಕ್ಕೆ ಅವಕಾಶ ಮಾಡಿಕೊಡಲಾಯಿತು.

ಕಂಠೀರವದಲ್ಲೂ ಜನಸಾಗರ: ಇದಕ್ಕೂ ಮೊದಲು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯ ವಿವಿಧ ಭಾಗಗಳಿಂದ ಬಂದ ಸಾವಿರಾರು ಅಭಿಮಾನಿಗಳು ಅಂಬಿಯನ್ನು ಕಾಣಲು ಬೆಳಗ್ಗೆ 6.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಮುಂದೆ ಜಮಾಯಿಸಿದ್ದರು.

ಬೆಳಗ್ಗೆ 8 ಗಂಟೆಗೆ ದರ್ಶನಕ್ಕೆ ಅವಕಾಶ ನೀಡಿದ ಕೂಡಲೇ ಕೆರೆ ಕೋಡಿ ಹೊಡೆದು ನೀರು ಹರಿಯುವಂತೆ ನೂರಾರು ಜನರು ಕಲಿಯುಗದ ಕರ್ಣನನ್ನು ಕಾಣಲು ನುಗ್ಗಿದರು. ಅಂಬಿಯವರ ದೇಹವನ್ನು ಕಂಡು ಅಭಿಮಾನಿಗಳು ಕಣ್ಣೀರಿಡುತ್ತಾ, ಅಕ್ರಂದನದಲ್ಲಿಯೇ ಜೈಕಾರ ಹಾಕಿದ್ದು ಮನಕಲಕುವಂತಿತ್ತು. ಶೀಘ್ರ ದರ್ಶನ ಪಡೆಯಲು ನೂಕು-ನುಗ್ಗಲು ಆರಂಭವಾಗಿ ಸಾಲಿನಲ್ಲಿದ್ದವರಿಗೆ ಉಸಿರುಗಟ್ಟಿದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

ಅಂಬರೀಷ್‌ ಅವರ ಅಂತಿಮ ದರ್ಶನ ಪಡೆಯಲು ಬಂದ ಅಭಿಮಾನಿಗಳ ಪೈಕಿ ಒಬ್ಬರು ನಾಟಿ ಕೋಳಿ ಸಾರು, ಮುದ್ದೆ ತೆಗೆದುಕೊಂಡು ಬಂದಿದ್ದರು. ಪಾರ್ಥಿವ ಶರೀರದ ಬಳಿಗೆ ಬಂದ ಅವರು “ಅಣ್ಣ ನಿನ್ನಿಷ್ಟದ ನಾಟಿ ಕೋಳಿ ಸಾರು, ಮುದ್ದೆ ತಂದಿದ್ದೀನಿ ಎದ್ದೇಳಣ್ಣಾ ಎಂದು ಕಣ್ಣೀರು ಹಾಕುವ ಮೂಲಕ ಅಭಿಮಾನ ಪ್ರದರ್ಶಿಸಿದರು. ನೂರಾರು ಅಭಿಮಾನಿಗಳು ಬ್ಯಾರಿಕೇಡ್‌ ದಾಟಿ ದರ್ಶನ ಪಡೆಯಲು ಮುಂದಾಗುತ್ತಿದ್ದರು. ಇನ್ನು ಕೆಲ ಅಭಿಮಾನಿಗಳು ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬರುತ್ತಿದ್ದ ದೃಶ್ಯಗಳು ಕಂಡು ಬಂದವು. 

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.