ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಸುಲಿಗೆಕೋರರು
Team Udayavani, Oct 31, 2017, 8:00 AM IST
ಬೆಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಜಾಲಹಳ್ಳಿಯ ಬಿಇಎಲ್ ವೃತ್ತದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಬೈಕ್ನಲ್ಲಿ ಬಂದಿದ್ದ ನಾಲ್ಲರು ಸಲಿಗೆಕೋರರು ರಸ್ತೆ ಬದಿ ಕ್ಯಾಬ್ ನಿಲ್ಲಸಿ ಮಲಗಿದ್ದ ಇಬ್ಬರು ಚಾಲಕರನ್ನು ಸುಲಿಗೆ ಮಾಡಿದ್ದಾರೆ. ಲಾಂಗ್, ಚಾಕು ತೊರಿಸಿ ಅವರ ಪರ್ಸ್, ಮೊಬೈಲ್, ಹಣವನ್ನು ದೋಚಿದ್ದರು. ಕೂಡಲೇ ಕ್ಯಾಬ್ ಚಾಲಕರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿದ್ದರು.
ವಿಷಯ ತಿಳಿದು ಅಲ್ಲಿಯೇ ಹೊಯ್ಸಳ ಗಾಡಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಸುಲಿಗೆಕೋರರನ್ನು ಹಿಡಿಯಲೆತ್ನಿಸಿದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಡಿಯಲೆತ್ನಿಸಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಹನುಮಂತಪ್ಪ ರಾಜು ಎಂಬ ಹೋಮ್ಗಾರ್ಡ್ಗೆ ಲಾಂಗ್ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಳು ಹೋಮ್ಗಾರ್ಡ್ನ್ನು ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.