“ಪಿಎಂ ನರೇಂದ್ರ ಮೋದಿ’ತಡೆ ಕೋರಿದ್ದ ಅರ್ಜಿ ವಜಾ
Team Udayavani, Apr 4, 2019, 6:20 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ “ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ತುಮಕೂರು ಮೂಲದ ವಕೀಲರ ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ಬಂದಿತ್ತು.
ಪ್ರಾಥಮಿಕ ವಾದ ಆಲಿಸಿದ ನ್ಯಾಯಪೀಠ, ಈ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮಾತ್ರ ಕ್ರಮ ಕೈಗೊಳ್ಳಬಹುದು. ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಪ್ರಸ್ತುತ 17ನೇ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಪಿಎಂ ನರೇಂದ್ರ ಮೋದಿ ಚಿತ್ರವನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆಗೊಳಿಸಿದಂತೆ ಮುಂಬೈನ ಬ್ಲೂ ಲೋಟಸ್ ಪ್ರೊಡಕ್ಷನ್‌ನ ಲಿಜೆಂಡ್ ಗ್ಲೋಬಲ್ ಸ್ಟುಡಿಯೋ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.