ಶಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ
Team Udayavani, Dec 6, 2017, 9:33 AM IST
ಬೆಂಗಳೂರು: ಲಾಠಿ ಪ್ರಹಾರ, ಅಶ್ರುವಾಯು ಸೆಲ್ ಸಿಡಿಯುವಂತೆ ಉಗ್ರ ಪ್ರತಿಭಟನೆ ಮಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಆಧರಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ. ಕೂಡಲೇ ಅವರ
ವಿರುದ್ಧ ಕೊಲೆ ಯತ್ನ ಆರೋಪದ ಪ್ರಕರಣ ದಾಖಲಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಂಸದ ವಿರುದ್ಧ ದೂರು
ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಲೈಂಗಿಕ ಕಿರುಕುಳ: ತನಿಖೆ ಪ್ರಾರಂಭಿಸಿಲ್ಲ
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಸಚಿವಾಲಯದ ಮಹಿಳಾ ಅಧಿಕಾರಿ, ಸಾಂದರ್ಭಿಕ ಸಾಕ್ಷ್ಯಗಳೊಂದಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ
ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಗೆ ಇನ್ನೂ ದೂರು ನೀಡಿಲ್ಲ ಎಂದು ಸಮಿತಿ ಅಧ್ಯಕ್ಷ ವಿ. ಎಸ್.ಉಗ್ರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಅಧಿಕಾರಿ ಇನ್ನೂ ಸರಿಯಾದ ರೀತಿಯಲ್ಲಿ ಸಾಂದರ್ಭಿಕ ಸಾಕ್ಷ್ಯಗಳೊಂದಿಗೆ ದೂರು ನೀಡದ ಕಾರಣ ಸಮಿತಿ ಪ್ರಕರಣದ ವಿಚಾರಣೆ ಆರಂಭಿಸಿಲ್ಲ ಎಂದರು. ಆದರೂ ಈ ಬಗ್ಗೆ ವಿಧಾನಸಭೆ
ಕಾರ್ಯದರ್ಶಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿವರ ಕೇಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
MUST WATCH
ಹೊಸ ಸೇರ್ಪಡೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Lalbag: ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂಡಗಳ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.