ಪ್ರಮಾಣವಚನಕ್ಕೆ ರಾಜಭವನದಲ್ಲಿ ವೇದಿಕೆ ಸಿದ್ದ
Team Udayavani, May 17, 2018, 8:17 AM IST
ಬೆಂಗಳೂರು: 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜಭವನದಲ್ಲಿ ವೇದಿಕೆ ಸಜುವುಗೊಳ್ಳುತ್ತಿದೆ. 9 ಗಂಟೆಗೆ ಸರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಮಾಣವಚನವನ್ನು ಬೋದಿಸಲಿದ್ದಾರೆ.ಕೇಂದ್ರದ ನಾಯಕರಾದ ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರದಾನ್, ಕೆ. ಪಿ.ನಡ್ಡಾ ಹಾಗೂ ರಾಜ್ಯದ ಮುಖಂಡರು, ಕಾರ್ಯಕರ್ತರು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ವೇದಿಕೆಯನ್ನು ಹೂಗಳಿಂದ ಸಿಂಗರಿಸಲಾಗಿದ್ದು 1000ಕ್ಕೂ ಹೆಚ್ಚಿನ ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ. ಪಾಸ್ ಹೊಂದಿರುವ ಕಾರ್ಯಕರ್ತರಿಗೆ ಮಾತ್ರ ಈ ಸಮಾರಂಭಕ್ಕೆ ಅವಕಾಶ ನೀಡಲಾಗಿದೆ.
ಬಿಎಸ್ ವೈ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ :
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಈ ಮೂಲಕ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಪ್ರಮಾಣವಚನಕ್ಕೂ ಮೊದಲು ದೇವರ ದರ್ಶನ:
ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ಯಡಿಯೂರಪ್ಪ ಅವರು ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿದ್ದು ದೇವರ ದರ್ಶನವನ್ನು ಪಡೆದು ನಂತರ ರಾಜಭವನಕ್ಕೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.