ಅಕ್ರಮ ಆಸ್ತಿ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು
ಎಸಿಬಿಯ 370 ಕೇಸ್‌ಗಳೂ ವಾರದೊಳಗೆ ಲೋಕಾ ಪೊಲೀಸ್ ವಿಭಾಗಕ್ಕೆ ವರ್ಗಾವಣೆ
Team Udayavani, Oct 18, 2022, 6:30 AM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದಾಗಿ ಒಂದೂವರೆ ತಿಂಗಳು ಕಳೆಯುತ್ತಾ ಬಂದಿದ್ದು, ಭ್ರಷ್ಟರ ಅಕ್ರಮ ಆಸ್ತಿಗೆ (ಡಿಎ ಕೇಸ್) ಸಂಬಂಧಿಸಿದ ಮಾಹಿತಿ ಕಲೆ ಹಾಕುವಲ್ಲಿ ಲೋಕಾಯುಕ್ತ ಪೊಲೀಸರು ನಿರತರಾಗಿದ್ದಾರೆ.
ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಭ್ರಷ್ಟಾಚಾರದ ಮೂಲಕ ಕೋಟ್ಯಂತರ ರೂ. ಅಕ್ರಮ ಆಸ್ತಿ ಸಂಪಾದಿಸಿರುವ ಅಧಿಕಾರಿಗಳ ಮಾಹಿತಿ ಕಲೆ ಹಾಕುವ ಕೆಲಸಗಳು ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ ನಡೆಯುತ್ತಿದೆ. ಈಗಾಗಲೇ 15ಕ್ಕೂ ಹೆಚ್ಚಿನ ಅಧಿಕಾರಿಗಳ ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಲೋಕಾಯುಕ್ತ ಪೊಲೀಸರ ಕೈ ಸೇರಿದ್ದು, ಸದ್ಯದಲ್ಲೇ ದೊಡ್ಡ ಮಟ್ಟದ ದಾಳಿಗೆ ಪೊಲೀಸರು ಸಜ್ಜಾಗಿದ್ದಾರೆ. ಆದರೆ ದಾಳಿ ನಡೆಸುವ ಮುನ್ನ ಭ್ರಷ್ಟಾಚಾರ ಎಸಗಿರುವುದಕ್ಕೆ ಸಂಬಂಧಿಸಿ ಮೂಲ ಸಾಕ್ಷ್ಯಗಳನ್ನು ಕಲೆ ಹಾಕುವುದೇ ಸವಾಲಾಗಿದೆ ಎಂದು ಲೋಕಾಯುಕ್ತ ಉನ್ನತ ಮೂಲಗಳು ತಿಳಿಸಿವೆ.
ವಾರದೊಳಗೆ 370 ಕೇಸ್‌ಗಳೂ ವರ್ಗ
ಮತ್ತೊಂದೆಡೆ ಒಂದು ವಾರದೊಳಗೆ ಬೆಂಗಳೂರು ನಗರ ವ್ಯಾಪ್ತಿಗೆ ಸಂಬಂಧಿಸಿದ 370 ಪ್ರಕರಣಗಳೂ ಎಸಿಬಿಯಿಂದ ಲೋಕಾಯುಕ್ತ ಅಂಗಳಕ್ಕೆ ವರ್ಗಾವಣೆ ಆಗಲಿವೆ. ಈ ಪೈಕಿ 120 ಪ್ರಕರಣ ನ್ಯಾಯಾಲಯದಲ್ಲಿ ವಿವಿಧ ವಿಚಾರಣೆ ಹಂತದಲ್ಲಿ ಹಾಗೂ 150 ಕೇಸ್‌ಗಳು ತನಿಖಾ ಹಂತದಲ್ಲಿವೆ.
ಪ್ರಕರಣಗಳು ವರ್ಗಾವಣೆಯಾಗುತ್ತಿರುವ ಜತೆ ಜತೆಗೆ ಎಸಿಬಿಯಲ್ಲಿರುವ ಅಧಿಕಾರಿಗಳೂ ಲೋಕಾಯುಕ್ತಕ್ಕೆ ವರ್ಗಾವಣೆ ಆಗುತ್ತಿದ್ದಾರೆ. ಹೀಗಾಗಿ ಎಸಿಬಿಯಲ್ಲಿ ಕೆಲ ಪ್ರಕರಣಗಳ ತನಿಖೆ ನಡೆಸಿರುವ ತನಿಖಾಧಿಕಾರಿಗಳೇ ಲೋಕಾಯುಕ್ತದಲ್ಲಿ ತನಿಖೆ ಮುಂದುವರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ನಗರ ಪೊಲೀಸ್ ವಿಭಾಗದಲ್ಲಿ ಈವರೆಗೆ ಸಣ್ಣಪುಟ್ಟ ಟ್ರ್ಯಾಪ್ ಕೇಸ್‌ಗಳಿಗೆ ಸಂಬಂಧಿಸಿ 5 ಎಫ್ಐಆರ್‌ಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.