ಪಂಚನಾಮೆ: ಸೊರಕೆ ಲಾಡ್ಜ್ ಭೇಟಿಗೆ ಅವಕಾಶ ನೀಡದ ಪೊಲೀಸರು


Team Udayavani, Apr 13, 2022, 12:47 PM IST

8sorake

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಲಾಡ್ಜ್ ಆವರಣಕ್ಕೆ ಮಾಜಿ ಸಚಿವ ವಿನಯಕುಮಾರ ಸೊರಕೆ ಅವರು ಆಗಮಿಸಿದ್ದು, ಪಂಚನಾಮೆ ಪ್ರಗತಿಯಲ್ಲಿರುವುದರಿಂದ ಪೊಲೀಸರು ಅವಕಾಶ ನಿರಾಕರಿಸಿದ್ದು, ಪಂಚನಾಮೆ ಮುಗಿದ ಬಳಿಕ ಭೇಟಿಗೆ ಅವಕಾಶ ನೀಡಲಾಗುವುದು ಎಂದು  ಪೊಲೀಸರು ತಿಳಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶವ ಇನ್ನೂ ತೆಗೆಯುವ ಕೆಲಸ ಆಗಿಲ್ಲ. ಕುಟುಂಬ ಭೇಟಿಗೆ ಬಂದರೂ ಸಾಧ್ಯವಾಗಿಲ್ಲ. ಇದೊಂದು ‌ದೊಡ್ಡ ದುರಂತ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ. ಶೆ. 40 ಕಮಿಷನ್ ಗಾಗಿ ಆತ್ಮಹತ್ಯೆ ದೇಶದಲ್ಲೇ ಪ್ರಥಮವಾಗಿದೆ ಎಂದರು.

ಆಡಳಿತ ಸರಕಾರ, ಈಶ್ವರಪ್ಪ ಈ ಮೂಲಕ ಪ್ರಸಿದ್ದಿ ಪಡೆದಂತಾಗಿದೆ. ಈ ಹಿಂದೆ ನೋಟು ಲೆಕ್ಕ ಮಾಡುವ ಮಿಷನ್ ಬಳಸಿ ಪ್ರಸಿದ್ಧರಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಕೇವಲ ಸಂತೋಷ್ ಪಾಟೀಲ್ ಗೆ ಮಾತ್ರ ಅಲ್ಲ. ಅನೇಕರು ಆದೇಶ ಇಲ್ಲದೆ ಗುತ್ತಿಗೆ ಕೆಲಸ ಮಾಡಿದ್ದಾರೆ. ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತೋಷ್ ಪಾಟೀಲ್ ಹೊಸದಿಲ್ಲಿಗೆ ಹೋದರೂ ನ್ಯಾಯ ಸಿಗಲಿಲ್ಲ. ಪ್ರಧಾನಿ, ಶಾ ಭೇಟಿಗೂ ಪ್ರಯತ್ನ‌ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆಂದು ಭರವಸೆ ನೀಡಿರುವ ಪಕ್ಷ ಬಿಜೆಪಿ. ಆದರೆ ಈಗ ಭ್ರಷ್ಟಾಚಾರದ ಕಾರಣಕ್ಕೆ ಆತ್ಮಹತ್ಯೆಯಾಗುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮಾನಾಥ ರೈ

ಹಿಜಾಬ್ ಸಮಸ್ಯೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಮುಟ್ಟಿತು. ವಿದ್ಯಾಭ್ಯಾಸದಲ್ಲಿ ಪ್ರಥಮ‌ ಇದ್ದ ಉಡುಪಿ ಜಿಲ್ಲೆಯಲ್ಲಿ ನಿರಂತರ ವಿವಾದ, ದುರಂತ ಸಂಭವಿಸುತ್ತಿದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ಮತ್ತು ಅದರ ಕಾರ್ಯಕರ್ತರೇ ಕೊಲ್ಲುತ್ತಿದ್ದಾರೆ. ಕೋಟದಲ್ಲಿ ಡಬ್ಬಲ್  ಮರ್ಡರ್ ಆಯಿತು. ಅವರ ಪಕ್ಷದವರನ್ನು ಅವರ ಪಕ್ಷದವರೇ ಕೊಲ್ಲುತ್ತಾರೆ. ಈಗ ಆತ್ಮಹತ್ಯೆಗೂ ಅವರದೇ ಪಕ್ಷ ಕಾರಣವಾಗಿದೆ ಎಂದರು.

ಈ ಹಿಂದೆ ಕಾಂಗ್ರೆಸ್ ಪಕ್ಷದ ಜಾರ್ಜ್ ಮೇಲೆ ಆರೋಪ ಬಂದಾಗ ಅವರು ರಾಜಿನಾಮೆ ನೀಡಿದ್ದರು. ಈಶ್ಚರಪ್ಪ ರಾಜಿನಾಮೆ ಕೊಟ್ಟು ಘನಸ್ತಿಕೆ ಉಳಿಸಿಕೊಳ್ಳಲಿ. ಬಹಳಷ್ಟು‌ ಮಂದಿ ಗುತ್ತಿಗೆದಾರರು  ಬಿಲ್ ಆಗದೆ ಕಾಯುತ್ತಿದ್ದಾರೆ. ಇನ್ನೆಷ್ಟು ಆತ್ಮಹತ್ಯೆ ಆಗಬೇಕು. ಮುಚ್ಚಿ ಹಾಕುತ್ತೀರಾ? ಸತ್ಯ ಬೆಳಕಿಗೆ ಬರುತ್ತಾ? ಇದಕ್ಕಿಂತ ಇನ್ಯಾವ ದಾಖಲೆ ಬೇಕು, ತಕ್ಷಣ ಈಶ್ವರಪ್ಪ ಅವರನ್ನು‌ ಬಂಧಿಸಬೇಕು ಎಂದರು.

ಸಿಎಂ ಅವರು ಈಶ್ವರಪ್ಪಗೆ ಹೆದರಬೇಡ ಅಂತಾರೆ. ತಡ ಮಾಡಬೇಡದೆ ತಕ್ಷಣ ರಾಜಿನಾಮೆ ಕೊಡಿ. ಇಲ್ಲದಿದ್ದರೆ ಜನರೇ ರೊಚ್ಚಿಗೆದ್ದು ರಾಜಿನಾಮೆ ಕೊಡಿಸುತ್ತಾರೆ. ರಾಜಿನಾಮೆ ಕೊಡದಿದ್ದರೆ ಪ್ರಕರಣ ತಿರಿಚುವ ಸಾಧ್ಯತೆ ಇದೆ ಎಂದರು.

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.