ಆರೇಳು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಸಾಧ್ಯತೆ
Team Udayavani, Feb 3, 2017, 3:45 AM IST
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅವಧಿ ಪೂರೈಸುವುದಿಲ್ಲ ಎಂದು ಭವಿಷ್ಯ ನುಡಿದಿರುವ ಮಾಜಿ ಸಿಎಂ ಎಚ್
.ಡಿ.ಕುಮಾರಸ್ವಾಮಿ, ಗುಜರಾತ್ ವಿಧಾನಸಭೆ ಚುನಾವಣೆ ಜತೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆದರೂ ಆಶ್ಚರ್ಯವಿಲ್ಲವೆಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಆರೇಳು ತಿಂಗಳಲ್ಲಿ ವಿಧಾನಸಭೆ ಚುನಾವಣೆಯಾಗುವ ಲಕ್ಷಣಗಳಿವೆ. ಆಡಳಿತಾರೂಢ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ಯಾವ ಹಂತ ಮುಟ್ಟುತ್ತೋ ಕಾದು ನೋಡಿ ಎಂದು ಹೇಳಿದರು. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಎರಡು ತಿಂಗಳು ಬಾಕಿಯಿದೆ. ಅಕ್ಟೋಬರ್-ನವೆಂಬರ್ ವೇಳೆಗೆ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅದೇ ವೇಳೆ ನಮ್ಮ ರಾಜ್ಯದ್ದೂ ಚುನಾವಣೆ ನಡೆಯಬಹುದು ಎಂದರು.
ಕಾಂಗ್ರೆಸ್ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಅಷ್ಟು ದೊಡ್ಡ ಪಕ್ಷಕ್ಕೆ ನಂಜನಗೂಡಿನಲ್ಲಿ ಸ್ಪರ್ಧಿಸಲು ಅಭ್ಯರ್ಥಿಯಿಲ್ಲ.
ಜೆಡಿಎಸ್ ಅಭ್ಯರ್ಥಿ ಕೈ ಕಾಲು ಹಿಡಿದು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಒಂದೊಮ್ಮೆ ಅವರು ಹೋದರೂ ಜೆಡಿಎಸ್ಗೆ ನಷ್ಟವಿಲ್ಲ ಎಂದರು.
ಬಿಜೆಪಿಗೆ ದಯನೀಯ ಸ್ಥಿತಿ: ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಬಂದರೆ ಆನೆಬಲ ಬಂದಂತಾಗುತ್ತದೆ ಎಂದು ಶೋಭಾ ಕರಂದ್ಲಾಜೆ ಮತ್ತು ಸಿ.ಟಿ.ರವಿ ಹೇಳಿದ್ದಾರೆ. ಆದರೆ, ಬಿಜೆಪಿಯನ್ನು ಕಟ್ಟಿ ಬೆಳೆಸಿ ಇಂದು ಅಧಿಕಾರ ಪಡೆಯುವ ಸ್ಥಿತಿಗೆ ತಂದು ನಿಲ್ಲಿಸಿದ ಅಡ್ವಾಣಿ ಅವರನ್ನು ಇವರೇನು ಮಾಡಿದ್ದಾರೆ ಎಂದು ಎಚಿxಕೆ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.