ಮೀಸಲು ಶೇ.70ಕ್ಕೆ ಏರಿಕೆ ಸಿಎಂ ಪೊಳ್ಳು ಭರವಸೆ
Team Udayavani, Oct 8, 2017, 11:57 AM IST
ಬೆಂಗಳೂರು: ಮೀಸಲು ಪ್ರಮಾಣ ಶೇ.50 ಮೀರಬಾರದೆಂದು ಸುಪ್ರೀಂಕೋರ್ಟ್‌ನ ಆದೇಶವಿದ್ದರೂ ಮೀಸಲಾತಿ ಪ್ರಮಾಣವನ್ನು ಶೇ. 70ಕ್ಕೆ ಹೆಚ್ಚಿಸುವ ಭರವಸೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನು ಮರುಳು ಮಾಡುವ ಯತ್ನಕ್ಕೆ ಕೈ ಹಾಕಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಟೀಕಿಸಿದ್ದಾರೆ.
ಮೀಸಲಾತಿ ಪ್ರಮಾಣ ಹೆಚ್ಚಿಸುವ ನಿಜವಾದ ಬದ್ಧತೆ ಸಿದ್ದರಾಮಯ್ಯನವರಿಗೆ ಇದ್ದಿದ್ದರೆ ಅಧಿಕಾರಕ್ಕೆ ಬಂದದಿನದಿಂದಲೇ ಪ್ರಯತ್ನಿಸಬೇಕಿತ್ತು. ಆದರೆ, ಚುನಾವಣೆ ಸಮಯದಲ್ಲಿ ಮೀಸಲಾತಿ ಪ್ರಮಾಣ ಶೇ.70ಕ್ಕೆ ಹೆಚ್ಚಿಸುವ
ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶನಿವಾರ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಮೀಸಲಾತಿ ಪ್ರಮಾಣ ಹೆಚ್ಚಿಸುವ ಪ್ರಯತ್ನವನ್ನು ನಾಲ್ಕು ವರ್ಷಗಳಿಂದ ಏಕೆ ಮಾಡಿಲ್ಲ? ಎಷ್ಟು ದಿನ ಜನರನ್ನು ಮರುಳು ಮಾಡುತ್ತೀರಾ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ ಯಡಿಯೂರಪ್ಪ, ಸುಪ್ರೀಂ ಆದೇಶಕ್ಕಿಂತಲೂ ಹೆಚ್ಚು ಅಧಿಕಾರವಿದೆ ಎಂಬ ಭ್ರಮೆಯಲ್ಲಿರುವ ಅವರು ಚುನಾವಣೆ ವರ್ಷದಲ್ಲಿ ಇಂತಹ ಸುಳ್ಳು ಭರವಸೆ ಕೊಡುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು
ವ್ಯಂಗ್ಯವಾಡಿದರು.
ಶ್ವೇತಪತ್ರಕ್ಕೆ ಆಗ್ರಹ: ಹಿಂದುಳಿದ ವರ್ಗದ ಜನರ ಸರದಾರ ಎಂದು ಜನರನ್ನು ಮರುಳು ಮಾಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಕಳೆದ ನಾಲ್ಕು ವರ್ಷಗಳಲ್ಲಿ ಈ ಸಮುದಾಯಕ್ಕಾಗಿ ಏನು ಮಾಡಿದ್ದಾರೆಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಅವರು ಇದೇ ವೇಳೆ ಆಗ್ರಹಿಸಿದರು. ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಮಾತನಾಡಿ, ಹಿಂದುಳಿದ ವರ್ಗದವರಿಗಾಗಿ ಮೀಸಲಿಟ್ಟ ಅನುದಾನದಲ್ಲಿ ಶೇ.40ರಷ್ಟನ್ನೂ ಖರ್ಚು ಮಾಡದೆ ವಂಚಿಸಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಡಿಯೂರಪ್ಪ ಸರ್ಕಾರ ನೀಡಿದ್ದಕ್ಕಿಂತ ಕಡಿಮೆ ಅನುದಾನ ನೀಡಿದೆ ಎಂದು ಆರೋಪಿಸಿದರು.
ಕೈಹಿಡಿದವರನ್ನೇ ತುಳಿದವರು: ಮೋರ್ಚಾದ ಪ್ರಭಾರಿ ಮತ್ತು ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ
ಮಾತನಾಡಿ, ತಮ್ಮನ್ನು ಕಾಂಗ್ರೆಸ್‌ಗೆ ಕರೆತಂದು ಮುಖ್ಯಮಂತ್ರಿಯನ್ನಾಗಿ ಮಾಡಿದ ಹಿಂದುಳಿದ ಸಮುದಾಯದ ಎಚ್.ವಿಶ್ವನಾಥ್‌ರಿಗೆ ಮತ ಹಾಕಬೇಡಿ ಎಂದು ಹಾಗೂ ಕಾಂಗ್ರೆಸ್‌ನ ನೇತೃತ್ವ ವಹಿಸುವಲ್ಲಿ ಸಹಕರಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವಂತೆ ಕುರುಬ ಸಮುದಾಯದವರಿಗೆ ಕರೆ ನೀಡಿದ್ದ ಸಿಎಂ ಸಿದ್ದರಾಮಯ್ಯರಿಂದ ಹಿಂದುಳಿದ ಸಮುದಾಯದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಮೋರ್ಚಾದ ಮುಖಂಡರಾದ ವರ್ತೂರು ಶ್ರೀಧರ್, ರಾಮರಾವ್ ರಾಯ್ಕರ್, ಲಕ್ಷ್ಮಣ್, ಮಾಜಿ ಶಾಸಕರಾದ ನೆ.ಲ.ನರೇಂದ್ರಬಾಬು, ಹುಲಿನಾಯ್ಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.