84 ಕೆರೆಗಳಿಗೆ ಪುನಶ್ಚೇತನ ಭಾಗ್ಯ, ಅವಲಂಬಿತರಿಗೆ “ಜಲ ಪ್ರಸಾದ’
Team Udayavani, Jun 20, 2017, 2:12 PM IST
ಹುಬ್ಬಳ್ಳಿ: ರಾಜ್ಯಾದ್ಯಂತ ಕೆರೆಗಳ ಪುನಶ್ಚೇತನಕ್ಕೆ ಕಂಕಣ ತೊಟ್ಟಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2016-17ನೇ ಸಾಲಿನಲ್ಲಿ ಸುಮಾರು 84 ಕೆರೆಗಳ ಹೂಳೆತ್ತಿ ಅಭಿವೃದ್ಧಿ ಮಾಡುವ ಮೂಲಕ ಸುಮಾರು 6.60 ಲಕ್ಷ ಕೆರೆ ನೀರು ಅವಲಂಬಿತರಿಗೆ “ಜಲ ಪ್ರಸಾದ’ ವ್ಯವಸ್ಥೆ ಮಾಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮತ್ತೆ 126 ಕೆರೆಗಳ ಪುನಶ್ಚೇತನಕ್ಕೆ ಮುಂದಡಿ ಇರಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರ ಆಶಯದೊಂದಿಗೆ ಗ್ರಾಮಾಭಿವೃದ್ಧಿ ಯೋಜನೆ
ತನ್ನ ಕಾರ್ಯಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ತಾಲೂಕಿಗೆ ಒಂದು-ಎರಡರಂತೆ ನಮ್ಮೂರು ನಮ್ಮ ಕೆರೆ ಯೋಜನೆಯಡಿ 2016-17ನೇ ಸಾಲಿನಲ್ಲಿ ಅಂದಾಜು 30 ಕೋಟಿ ರೂ. ವೆಚ್ಚದಲ್ಲಿ ಸುಮಾರು 100 ಕೆರೆಗಳ ಪುನಶ್ಚೇತನಕ್ಕೆ ಮುಂದಾಗಿದ್ದು, ಇದರಲ್ಲಿ ಪ್ರಸ್ತುತ ಸುಮಾರು 84 ಕೆರೆಗಳಲ್ಲಿ ಬಹುತೇಕ ಪೂರ್ಣಗೊಂಡಿವೆ.
ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಒಟ್ಟು ಆರು ಪ್ರಾದೇಶಿಕ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿ ಕಾರ್ಯ ನಡೆದಿದ್ದು, ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯಲ್ಲಿ ಅತಿ ಹೆಚ್ಚು 24 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.
ಕೆರೆಗಳ ಆಯ್ಕೆ ಹೇಗೆ?: ಕೆರೆಗಳ ಅಭಿವೃದ್ಧಿ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರತಿ ತಾಲೂಕಿಗೆ 1- 2 ಕೆರೆಗಳ ಪುನಶ್ಚೇತನ ಕೈಗೆತ್ತಿಕೊಳ್ಳುತ್ತಿದೆ. ಕುಡಿಯುವ ನೀರಿನ ತೊಂದರೆಯಿರುವ, ಕೆರೆಯ ಮೇಲೆಯೇ ಅವಲಂಬಿತವಾದ ಗ್ರಾಮ ಹಾಗೂ ಜನರ ಸಕ್ರಿಯ ಸಹಭಾಗಿತ್ವ ಇನ್ನಿತರ ಮಾಹಿತಿಯ ಸಮೀಕ್ಷೆ ನಡೆಸಿ ಕೆರೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಕೆರೆ ಪುನಶ್ಚೇತನ ಸ್ಥಳೀಯ ಸಮಿತಿ ರಚಿಸಲಾಗುತ್ತದೆ.
ಕೆರೆ ಹೂಳೆತ್ತಲು ಜೆಸಿಬಿ ಹಾಗೂ ಅಗತ್ಯ ವೆಚ್ಚವನ್ನು ಗ್ರಾಮಾಭಿವೃದ್ಧಿ ಯೋಜನೆ ಭರಿಸುತ್ತಿದೆ. ಕೆರೆಯ ಹೂಳು ಪಡೆಯಲು ಮುಂದಾಗುವ ರೈತರಿಗೆ ಶುಲ್ಕ ವಿಧಿಸುತ್ತಿದ್ದು, ಇದರಿಂದ ಸಂಗ್ರಹವಾಗುವ ಹಣವನ್ನು ಇದೇ ಕೆರೆಯ ಪುನಶ್ಚೇತನಕ್ಕೆ ಬಳಕೆ ಮಾಡುತ್ತದೆ. ಜತೆಗೆ ಗ್ರಾಮಸ್ಥರಿಂದ ಕಡಿಮೆ ಬಾಡಿಗೆಗೆ ಅಥವಾ ಉಚಿತವಾಗಿ ಟ್ರ್ಯಾಕ್ಟರ್ ಸೇವೆ ಪಡೆದು ಹೂಳೆತ್ತುವ ಕಾರ್ಯ ಕೈಗೊಳ್ಳಲಾಗುತ್ತದೆ.
84 ಕೆರೆಗಳಿಗೆ ಪುನಶ್ಚೇತನ ಭಾಗ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2016- 17ನೇ ಸಾಲಿಗೆ ಒಟ್ಟು 100 ಕೆರೆಗಳಲ್ಲಿ 84 ಕೆರೆಗಳ ಕಾಮಗಾರಿ ಕೈಗೊಂಡಿದ್ದು, ಇದರಲ್ಲಿ 76 ಕೆರೆಗಳು ಪೂರ್ಣಗೊಂಡಿದ್ದು, ಇನ್ನು 8 ಕೆರೆಗಳ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ.
ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಗದಗ ಜಿಲ್ಲೆಯಲ್ಲಿ 3, ಬಾಗಲಕೋಟೆ 1, ಕೊಪ್ಪಳದಲ್ಲಿ 2, ಧಾರವಾಡ ಪ್ರಾದೇಶಿಕ ವ್ಯಾಪ್ತಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 1, ಹಾವೇರಿ-3, ಚಿತ್ರದುರ್ಗ-2, ಧಾರವಾಡ-4, ಬೆಳಗಾವಿ-5, ಕಲಬುರಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ 8, ಬೀದರ-7, ವಿಜಯಪುರ-4 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.
ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯಲ್ಲಿ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ತಲಾ
5, ತುಮಕೂರು-10, ಚಿಕ್ಕಬಳ್ಳಾಪುರ-4. ಮೈಸೂರು ಪ್ರಾದೇಶಿಕ ವ್ಯಾಪ್ತಿಯಲ್ಲಿ ಚಾಮರಾಜನಗರ, ಮೈಸೂರು, ಹಾಸನ
ಜಿಲ್ಲೆಗಳಲ್ಲಿ ತಲಾ 1, ಮಂಡ್ಯ-2, ಉಡುಪಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 8, ಚಿಕ್ಕಮಗಳೂರು-3, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 2, ಕೊಡಗು ಜಿಲ್ಲೆಯಲ್ಲಿ 1 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ.
ಐತಿಹಾಸಿಕ ಕೆರೆಗಳಿಗೆ ಮತ್ತೆ ಗತವೈಭವ
ಕೆರೆಗಳ ಪುನಶ್ಚೇತನದೊಂದಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆಸರೆ ಜತೆಗೆ ಅಂತರ್ಜಲ ಮಟ್ಟ ಹೆಚ್ಚಳಕ್ಕೂ ಮಹತ್ವದ ಕೊಡುಗೆ ನೀಡಲಾಗುತ್ತದೆ. ಒಂದು ಕೆರೆ ಅಭಿವೃದ್ಧಿಗೊಂಡರೆ ಸುತ್ತಮುತ್ತಲಿನ ಒಂದೆರಡು ಕಿ.ಮೀ.ವ್ಯಾಪ್ತಿಯ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2017-18ನೇ ಸಾಲಿನಲ್ಲಿ ರಾಜ್ಯದಲ್ಲಿ ಸುಮಾರು 126 ಕೆರೆಗಳ ಹೂಳೆತ್ತುವ ಯೋಜನೆಗೆ ಮುಂದಾಗಿದ್ದು, ಅನೇಕ ಐತಿಹಾಸಿಕ ಹಿನ್ನೆಲೆಯ ಕೆರೆಗಳು ಸೇರಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೆರೆಗಳು ಮತ್ತೆ ತಮ್ಮ ಗತವೈಭವಕ್ಕೆ ಮರಳತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.