ನಿವೃತ್ತ ಬ್ಯಾಂಕ್ ಮ್ಯಾನೇಜರ್ಗೆ 5 ವರ್ಷ ಜೈಲು, 50 ಲಕ್ಷ ದಂಡ
Team Udayavani, Apr 29, 2019, 3:00 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬ್ಯಾಂಕ್ನ ಮಾಜಿ ವ್ಯವಸ್ಥಾಪಕರೊಬ್ಬರಿಗೆ ಐದು ವರ್ಷ ಜೈಲು ಹಾಗೂ 50 ಲಕ್ಷ ರೂ.ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೆನರಾ ಬ್ಯಾಂಕ್ನ ನಿವೃತ್ತ ಮ್ಯಾನೇಜರ್ ಎಚ್.ಎಸ್ ಈಶ್ವರ್ ಶಿಕ್ಷೆಗೆ ಗುರಿಯಾದವರು. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಎಚ್.ಎಸ್.ಈಶ್ವರ್ ಅವರ ನಿವಾಸ ಮತ್ತು ಅವರ ಕಚೇರಿಗಳ ಮೇಲೆ 2014ರಲ್ಲಿ ದಾಳಿ ನಡೆಸಿ ದಾಖಲೆ ಸಂಗ್ರಹಿಸಿದ್ದ ಸಿಬಿಐ ಅಧಿಕಾರಿಗಳು, ತನಿಖೆ ನಡೆಸಿ 2016ರಲ್ಲಿ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಎಚ್ ಪುಷ್ಪಾಂಜಲಿ ದೇವಿ ಅವರು, ಈಶ್ವರ್ಗೆ ಐದು ವರ್ಷ ಜೈಲು ಹಾಗೂ 50 ಲಕ್ಷ ರೂ.ದಂಡ ವಿಧಿಸಿ ಶನಿವಾರ (ಏ.27) ಆದೇಶ ಹೊರಡಿಸಿದ್ದಾರೆ. ಜತೆಗೆ, ಆರೋಪಿ ಅಧಿಕಾರಿ ಅಕ್ರಮವಾಗಿ ಸಂಪಾದಿಸಿರುವ 4.90 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.