ಕೊಪ್ಪಳ : ಬಾಗಿಲು ಹಾಕಿಕೊಂಡೇ ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲೀಕರು
Team Udayavani, May 4, 2021, 8:52 AM IST
ಗಂಗಾವತಿ : ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ ಪಾಜಿಟೀವ್ ಸಂಖ್ಯೆ ನಿತ್ಯವೂ ಹೆಚ್ಚಾಗುತ್ತಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ನಿತ್ಯ ಬೆಳಗಿನ 6-10 ಗಂಟೆ ಸಮಯದಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಜನಜಂಗುಳಿ ಕಂಡು ಬರುತ್ತಿದೆ.
ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಜನರು ಅನಗತ್ಯವಾಗಿ ಅಲ್ಲಲ್ಲಿ ಕುಳಿತು ಕೊಳ್ಳುವುದು ಮದುವೆ ಹಬ್ಬ ಹರಿದಿನ ಎಂದು ಖರೀದಿಗೆ ನಗರಕ್ಕೆ ಆಗಮಿಸುತ್ತಿದ್ದಾರೆ. ಕೆಲವು ವ್ಯಾಪಾರಿಗಳು ಶೆಟರ್ ಹಾಕಿಕೊಂಡು ಭರ್ಜರಿ ವ್ಯಾಪಾರ ಮಾಡುತ್ತಿರುವುದು ಕಂಡು ಬರುತ್ತಿದೆ.
ಇನ್ನೂ ಕೆಲ ವ್ಯಾಪಾರಿಗಳು ಮನೆಯಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ತರಕಾರಿ ಹಣ್ಣು ಹಂಪಲು ಮಾರಾಟಕ್ಕೆ ಅವಕಾಶ ನೀಡಿದ್ದರೂ ವ್ಯಾಪಾರಿಗಳು ಮನೆಮನೆಗೆ ತೆರಳಿ ವ್ಯಾಪಾರ ಮಾಡದೇ ಒಂದೇ ಕಡೆ ನಿಲ್ಲುವುದರಿಂದ ಜನಜಂಗುಳಿ ಉಂಟಾಗುತ್ತಿದೆ.
ಸಾಮಾಜಿಕ ಅಂತರ ಮರೆತ ಜನರು : ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳ್ಳಿಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಜನರು ಮಾತ್ರ ಕೋವಿಡ್ ರೋಗದ ಬಗ್ಗೆ ನಿರ್ಲಕ್ಷ್ಯ ವಹಿಸಿ ಸಾಮಾಜಿಕ ಅಂತರ ಕಾಡುತ್ತಿಲ್ಲ. ಮಾಸ್ಕ್ ಧರಿಸದೇ ನಗರದಲ್ಲಿ ಸಂಚಾರ ಮಾಡುತ್ತಿದ್ದಾರೆ. ಅಂಗಡಿಯವರು ನಾಮಕಾವಸ್ತೆಗಾಗಿ ಸ್ಯಾನಿಟೈಜರ್ ಇಟ್ಟಿದ್ದು ಹಚ್ಚಿಕೊಳ್ಳುವಂತೆ ಕಡ್ಡಾಯವಾಗಿ ಗ್ರಾಹಕರಿಗೆ ಹೇಳುತ್ತಿಲ್ಲ.
ಮಾಸ್ಕ್ ಧರಿಸದೇ ಸಂಚಾರ ಮಾಡುವವರಿಗೆ ನಗರಸಭೆ ಮತ್ತು ಪೊಲೀಸರು ದಂಡ ಹಾಕುತ್ತಿಲ್ಲ. ಬೈಕ್ ಸವಾರರನ್ನು ಮಾತ್ರ ಹಿಡಿದು ದಂಡ ಹಾಕುವುದನ್ನು ಮಾಡುತ್ತಿದ್ದಾರೆ. ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.