ಸಿದ್ದು-ಡಿಕೆಶಿ ಬಣ ಇರೋದು ನಿಜ: ಸತೀಶ
Team Udayavani, Mar 14, 2020, 3:04 AM IST
ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಮತ್ತು ಡಿ.ಕೆ.ಶಿವಕುಮಾರ ಬಣ ಇರುವುದು ಸತ್ಯ. ಆದರೆ, ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಬಣಗಳಿರುವುದು ಸತ್ಯ.
ಹಾಗೆಂದು ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಇಬ್ಬರೂ ಪ್ರಭಾವಿ ನಾಯಕರು. ಅವರ ನಡುವೆ ಭಿನ್ನಾಭಿಪ್ರಾಯವಿಲ್ಲ. ಎಲ್ಲರ ಸಮ್ಮುಖದಲ್ಲಿಯೇ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಪಕ್ಷವನ್ನು ಮುನ್ನಡೆಸುತ್ತೇವೆ. ಮನೆ ಎಂದ ಮೇಲೆ ಕೆಲವರಲ್ಲಿ ವೈಮನಸ್ಸು ಇರುವುದು ಸಹಜ. ಚುನಾವಣೆ ಸಂದರ್ಭ ಟಿಕೆಟ್‌ಗಾಗಿ ಗುಂಪುಗಾರಿಕೆ ನಡೆಯುತ್ತದೆ.
ಇದು ಎಲ್ಲಾ ಪಕ್ಷದಲ್ಲೂ ಇದೆ. ವಿಧಾನಸಭೆ ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಅಲ್ಲಿಯವರೆಗೆ ಪಕ್ಷವನ್ನು ಸಂಘಟಿಸಿ ಮರಳಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದರು.ಡಿ.ಕೆ.ಶಿವಕುಮಾರ ಅವರಲ್ಲಿ ಉತ್ಸಾಹ ಇದೆ. ಬರುವ ವಿಧಾನಸಭೆ ಚುನಾವಣೆ ಯನ್ನು ಗಮನದಲ್ಲಿಟ್ಟುಕೊಂಡು ಮೂವರು ಕಾರ್ಯಾಧ್ಯಕ್ಷರು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ.
ದಲಿತ ಸಮುದಾಯದ ನಾಯಕರೊಬ್ಬರು ಕಾರ್ಯಾಧ್ಯಕ್ಷರಾಗ ಬೇಕು ಎಂಬ ಬೇಡಿಕೆ ಇದೆ. ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದರು. ಇದೇ ವೇಳೆ, ತಮಗೆ ಈ ಹುದ್ದೆ ನೀಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರಿಗೆ ಅವರು ಧನ್ಯವಾದ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.