ರಾಜ್ಯ ಕೇಳಿದಷ್ಟು ಬರದ ಪರಿಹಾರ


Team Udayavani, Jun 30, 2017, 3:35 AM IST

29-STATE-10.jpg

ಬೆಂಗಳೂರು: ಕೇಳಿದ್ದು 3,310 ಕೋಟಿ ರೂ. ಆದರೆ ಕೊಟ್ಟದ್ದು ಮಾತ್ರ 795 ಕೋಟಿ ರೂ.! ಕಳೆದ ಸಾಲಿನ ಹಿಂಗಾರಿನ ವೈಫ‌ಲ್ಯದ ಹಿನ್ನೆಲೆಯಲ್ಲಿ ಬೆಳೆ ನಷ್ಟದ ಪರಿಹಾರವಾಗಿ ರಾಜ್ಯ ಸರ್ಕಾರ ಕೇಳಿದ್ದ ಮೂರು ಸಾವಿರ ಕೋಟಿಯಲ್ಲಿ, ಕೇವಲ 795 ಕೋಟಿ ರೂ.ಗಳನ್ನು ಮಾತ್ರ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು, ಗುರುವಾರ ದೆಹಲಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಉಸ್ತುವಾರಿಯಾಗಿರುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರನ್ನು
ಭೇಟಿ ಮಾಡಿ ಕೂಡಲೇ ಹಿಂಗಾರು ಬೆಳೆ ನಷ್ಟ ಪರಿಹಾರ ವಿತರಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ರಾಜನಾಥ ಸಿಂಗ್‌ ಅವರು ಹಿಂಗಾರು ಬೆಳೆ ನಷ್ಟಕ್ಕೆ 795 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದ್ದಾರೆ.

ಮಾತುಕತೆ ಬಳಿಕ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಕೃಷ್ಣ ಬೈರೇಗೌಡ, “ರಾಜ್ಯದಲ್ಲಿ ತಲೆ ದೋರಿದ್ದ ತೀವ್ರ ಬರದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ 3,310 ಕೋಟಿ ರೂ. ಪರಿಹಾರ ಕೋರಿ ಪ್ರಸ್ತಾವ ಸಲ್ಲಿಸಲಾಗಿತ್ತು.
ಕೇಂದ್ರ ಸರ್ಕಾರದಿಂದ ಸುಮಾರು 1,200 ಕೋಟಿ ರೂ. ಪರಿಹಾರ ಸಿಗುವ ನಿರೀಕ್ಷೆಯಿತ್ತು. ಆದರೆ 795 ಕೋಟಿ ರೂ. ಮಾತ್ರ ನೀಡಲು ಒಪ್ಪಿರು ವುದರಿಂದ ನಿರಾಸೆಯಾಗಿದೆ ಎಂದರು. ಮುಂಗಾರು ಬೆಳೆನಷ್ಟಕ್ಕೆ ಪ್ರಸ್ತಾವ ಸಲ್ಲಿಸಿದಾಗಲೂ ಕೋರಿದ್ದ ಮೊತ್ತಕ್ಕಿಂತ ಕಡಿಮೆ ಪರಿಹಾರವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ಹಿಂಗಾರು ಬೆಳೆ ನಷ್ಟಕ್ಕೆ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿತ್ತು. ಆದರೆ ಆ ಭರವಸೆಯ ಮಾತನ್ನು ಮರೆತಂತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ 795 ಕೋಟಿ ರೂ. ಪರಿಹಾರ ಮಂಜೂರು ಮಾಡಿದ್ದು,
ಅದು ಯಾವಾಗ ಬಿಡುಗಡೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ  ಕಳೆದ ಜನವರಿ 4ರಂದು ಕೇಂದ್ರ ಸರ್ಕಾರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಘೋಷಿಸಿತ್ತು.

ಆದರೆ ಹಣ ಬಿಡುಗಡೆಯಾಗಿದ್ದು, ಮಾರ್ಚ್‌ 28ರಂದು. ಇದೀಗ ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆಯೂ ಮನವಿ ಮಾಡಲಾಗಿದೆ. ಹಿಂಗಾರು ಬೆಳೆ ನಷ್ಟ ಪರಿಹಾರ ನಿರೀಕ್ಷಿತ ಪ್ರಮಾಣದಲ್ಲಿ ಸಿಗದ ಕಾರಣ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಲು ಸಾಧ್ಯವಾಗದು ಎಂದು ಹೇಳಿದರು. ರಾಜ್ಯದಲ್ಲಿ ಭೀಕರ ಬರ ತಲೆದೋರಿದ್ದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ನಷ್ಟ ಸುಮಾರು 7097 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಬಳಿಕ ಎನ್‌ ಡಿಆರ್‌ಎಫ್ ನಿಯಮಾವಳಿಯಂತೆ 3,310 ಕೋಟಿ ರೂ. ಪರಿಹಾರಕ್ಕೆ ರಾಜ್ಯ ಸರ್ಕಾರ ತಿಂಗಳ ಹಿಂದೆ ಪ್ರಸ್ತಾವ 
ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಸಚಿವರು, 
ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿ ಗುರುವಾರ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಈ ಹಿಂದೆ ಮುಂಗಾರು ಹಂಗಾಮಿನಲ್ಲೂ 17,193 ಕೋಟಿ ರೂ. ಬೆಳೆ ನಷ್ಟ ಉಂಟಾಗಿತ್ತು. ಆದರೆ ಎನ್‌ ಡಿಆರ್‌ಎಫ್ ನಿಯಮಾವಳಿಯಂತೆ 7,402 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರವು
1782 ಕೋಟಿ ರೂ. ಪರಿಹಾರ ಮಂಜೂರು ಮಾಡಿತ್ತು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.