ರಾಜ್ಯದ ತಾಪ 50 ಡಿಗ್ರಿ ಮುಟ್ಟುವ ಅಪಾಯ!

ಬಿಸಿಲ ಬೇಗೆಯಲ್ಲಿ ಬೇಯುತ್ತಿರುವ ರಾಜ್ಯಕ್ಕೆ ಬಿಸಿಗಾಳಿಯ ಎಚ್ಚರಿಕೆ

Team Udayavani, Apr 2, 2024, 12:46 AM IST

bರಾಜ್ಯದ ತಾಪ 50 ಡಿಗ್ರಿ ಮುಟ್ಟುವ ಅಪಾಯ! ರಾಜ್ಯದ ತಾಪ 50 ಡಿಗ್ರಿ ಮುಟ್ಟುವ ಅಪಾಯ!

ಧಾರವಾಡ ಸಮೀಪದ ಅಂಬ್ಲಿಕೊಪ್ಪ ಸಮೀಪದ ಕೆರೆಯಲ್ಲಿ ಮೇಕೆಗಳು ನೀರಿಗಾಗಿ ಪರದಾಟ ನಡೆಸಿದವು.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳು ಬಿಸಿಲಿನ ಬೇಗೆಯಲ್ಲಿ ಬೆಂದಿದ್ದು ಹವಾಮಾನ ಇಲಾಖೆ ಈಗ ಶಾಖದ ಅಲೆಯ ಎಚ್ಚರಿಕೆ ನೀಡಿದೆ.

ಎ.2ರಿಂದ 5ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಶಾಖಾ ಸೂಚ್ಯಂಕ 40ರಿಂದ 50 ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ. ಉತ್ತರ ಒಳನಾಡಿನ ಪ್ರದೇಶಗಳಾದ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶಾಖ ಅಲೆಯ ಪರಿಸ್ಥಿತಿ ಹಾಗೆಯೇ ಮುಂದುವರಿಯುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ ಸೋಮವಾರ ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ಬೀದರ್‌, ಗದಗ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ‌, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಟ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡದ ವಾತಾವರಣ ರಾಜಧಾನಿ ಬೆಂಗಳೂರಿನಲ್ಲಿ 2023ರ ಮಾರ್ಚ್‌ 29ರಂದು 35.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು ಈ ವರ್ಷ ಮಾರ್ಚ್‌ 31ರಂದು 36.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. 2017 ಮಾರ್ಚ್‌ 26ರಂದು ಬೆಂಗಳೂರಿನಲ್ಲಿ 37.2 ತಾಪಮಾನ ದಾಖಲಾಗಿತ್ತು. ಇದಾದ ಬಳಿಕ 2019ರ ಮಾರ್ಚ್‌ 8ರಂದು 37.0 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಹವಾ ಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಭಾಗಶಃ ಮೋಡವಿರಲಿದ್ದು ಮಧ್ಯಾಹ್ನ ಮತ್ತು ಸಂಜೆ ನಿರ್ಮಲ ಆಕಾಶವಿರಲಿದೆ.

ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಿದೆ.

ವಾರಾಂತ್ಯದಲ್ಲಿ ಕೆಲವೆಡೆ ಮಳೆ ನಿರೀಕ್ಷೆ
ಎಪ್ರಿಲ್‌ 6ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆಯೂ ಇದ್ದು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದ ಕೆಲಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಏ.7ರಂದು ಕರಾವಳಿ ತೀರ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ. ಬೆಳಗಾವಿ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ನೀರಿಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.