ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಸಮಾಧಿ
Team Udayavani, Jan 1, 2020, 3:00 AM IST
ಕಲಬುರಗಿ: ಶೈಕ್ಷಣಿಕ ಕ್ಯಾಂಪ್‌ಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಕಮಲಾಪುರ ತಾಲೂಕಿನ ಬೆಳಕೋಟಾ ಡ್ಯಾಂ ಬಳಿಯ ಹಿನ್ನೀರಿನಲ್ಲಿ ಈಜಲು ಹೋಗಿ ಜಲಸಮಾಧಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿಯ ಸತ್ಯಸಾಯಿ ಪ್ರೇಮ ನಿಕೇತನ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಇಂಡಿಯ ಮಂಜುನಾಥ ಚನ್ನು ಯಾದವಾಡ (15), ವಿಜಯಪುರದ ಶುಭಂ ಶರಣು ಹೊಸೂರ (15), ದೇವರ ಹಿಪ್ಪರಗಿಯ ಲಕ್ಷ್ಮಣ ಭೀಮರಾಯ ಡೊಣ್ಣೂರ (14) ಮೃತರು.
ಅಂಜುಟಗಿಯಿಂದ ಡಿ.25ರಂದು ಶೈಕ್ಷಣಿಕ ಕ್ಯಾಂಪ್‌ಗಾಗಿ ಕಮಲಾಪುರ ಬಳಿಯ ನವನಿಹಾಳದ ಸತ್ಯಸಾಯಿ ವಿವಿಗೆ 96 ವಿದ್ಯಾರ್ಥಿಗಳು ಬಂದಿದ್ದರು. ಮಂಗಳವಾರ ಮಧ್ಯಾಹ್ನ 2ಕ್ಕೆ ಬೆಳಕೋಟಾ ಡ್ಯಾಂ ನೋಡಲು ವಿದ್ಯಾರ್ಥಿಗಳೊಂದಿಗೆ ನಾಲ್ವರು ಶಿಕ್ಷಕರೂ ಜತೆಗಿದ್ದರು.
ಈ ವೇಳೆ ಮೂವರು ವಿದ್ಯಾರ್ಥಿಗಳು, ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಈಜುಗಾರರು ವಿದ್ಯಾರ್ಥಿಗಳನ್ನು ಬದುಕಿಸಲು ಸಾಕಷ್ಟು ಯತ್ನಿಸಿದರೂ ಸಫಲವಾಗಿಲ್ಲ. ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್‌ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.