ಬಿಎಸ್ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರುದಾರೆ ಸಾವು
Team Udayavani, May 28, 2024, 11:00 PM IST
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಅಪ್ರಾಪ್ತ ಪುತ್ರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ 53 ವರ್ಷದ ಮಹಿಳೆ ಆರೋಗ್ಯದಲ್ಲಿ ಭಾನುವಾರ ಸಂಜೆ ಏರುಪೇರು ಕಂಡುಬಂದಿದೆ. ಕೂಡಲೇ ಮಕ್ಕಳು, ಸಂಬಂಧಿಕರು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾತ್ರಿ 9.30 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮಹಿಳೆ ನೀಡಿದ್ದ ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಮಾ.14ರಂದು ಸದಾಶಿವನಗರ ಠಾಣೆ ಪೊಲೀಸರು ಪೋಕೊÕà ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ನಂತರ ತಮಗೆ ಜೀವ ಬೆದರಿಕೆ ಇರುವುದಾಗಿ ದೂರುದಾರ ಮಹಿಳೆ ಆರೋಪಿಸಿದ್ದರು. ಹೀಗಾಗಿ, ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಈ ಮಧ್ಯೆ ಮಹಿಳೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಅವರ ಸಾವಿನ ಬಗ್ಗೆ ಮಾಹಿತಿ ಮಾತ್ರ ಸಂಗ್ರಹಿಸಲಾಗಿದೆ. ಮಕ್ಕಳು, ಸಂಬಂಧಿಕರಾಗಲಿ, ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿ ಯಾವುದೇ ದೂರು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಮಹಿಳೆ ಸಾವಿನ ಬಗ್ಗೆ ಪ್ರತಿಕ್ರಿಯೆ ಪಡೆಯಲು ಆಕೆಯ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.