![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 11, 2023, 5:55 AM IST
ವಿಧಾನ ಪರಿಷತ್ತು: ಯುಜಿಸಿ ನಿಯಮ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ದೂರ ಶಿಕ್ಷಣವು ಸಾಂಪ್ರದಾಯಿಕ ಶಿಕ್ಷಣ ಮಾದರಿಯಲ್ಲೇ ಇರಬೇಕು. ಇದನ್ನು ಅನುಸರಿಸುವುದು ಮುಕ್ತ ವಿವಿಯ ಕರ್ತವ್ಯ ಕೂಡ ಆಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ದೂರ ಶಿಕ್ಷಣದಲ್ಲಿ ಸೆಮಿಸ್ಟರ್ ಪದ್ಧತಿಯನ್ನು ವಾಪಸ್ ಪಡೆದು, ವಾರ್ಷಿಕ ಪರೀಕ್ಷಾ ಪದ್ಧತಿ ಅಳವಡಿಸಿಕೊಳ್ಳುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಯುಜಿಸಿ ನಿಯಮ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸಿಬಿಸಿಎಸ್ ಪದ್ಧತಿಯನ್ನೇ ಅನುಸರಿಸಬೇಕಾಗಿದ್ದು, ಅದರಂತೆ ದೂರ ಶಿಕ್ಷಣ ಕೂಡ ಸಾಂಪ್ರದಾಯಿಕ ಶಿಕ್ಷಣದ ಮಾದರಿಯಲ್ಲೇ ಇರಬೇಕು. ಅಲ್ಲದೆ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಹ ಚಾಲ್ತಿಯಲ್ಲಿರುವ ಶಿಕ್ಷಣ ಪದ್ಧತಿಯ ಅನುಸಾರ ಶಿಕ್ಷಣ ನೀಡುವುದು ರಾಜ್ಯ ಮುಕ್ತ ವಿವಿಯ ಕರ್ತವ್ಯ ಆಗಿದೆ ಎಂದು ಹೇಳಿದರು.
ಪ್ರಸ್ತುತ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ತಲಾ ನಾಲ್ಕು ವಿಷಯಗಳಲ್ಲಿ ವಾರ್ಷಿಕ ಪರೀಕ್ಷಾ ಪದ್ಧತಿ ಅನುಸರಿಸಲಾಗುತ್ತಿದೆ. ಅದೇ ರೀತಿ, ಸ್ನಾತಕ ಪದವಿಯ 5 ಮತ್ತು ಸ್ನಾತಕೋತ್ತರ ಪದವಿಯ 28 ವಿಷಯಗಳಲ್ಲಿ ಸೆಮಿಸ್ಟರ್ ಪದ್ಧತಿಯನ್ನು ಅನುಸರಿಸಲಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ಮಾಹಿತಿ ನೀಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.