ವಿಪಕ್ಷ ನಾಯಕನಿಲ್ಲದೇ ಆಯೋಗದ ಅಧ್ಯಕ್ಷರ ನೇಮಕವೂ ಇಲ್ಲ!

ಮಾನವ ಹಕ್ಕುಗಳ ಆಯೋಗಕ್ಕೂ ತಟ್ಟಿದ ಬಿಸಿ

Team Udayavani, Aug 22, 2023, 7:15 AM IST

ವಿಪಕ್ಷ ನಾಯಕನಿಲ್ಲದೇ ಆಯೋಗದ ಅಧ್ಯಕ್ಷರ ನೇಮಕವೂ ಇಲ್ಲ!

ಬೆಂಗಳೂರು: ರಾಜ್ಯದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದು ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವಂತೆಯೇ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನೇಮಕಾತಿಗೂ ಇದರ ಬಿಸಿ ತಟ್ಟಿದೆ.

ಈ ಕಾರಣದಿಂದಲೇ ಹೊಸ ಸರಕಾರ ಅಸ್ತಿತ್ವಕ್ಕೆ ಬಂದು 3 ತಿಂಗಳಾದರೂ ಆಯೋಗದ ಅಧ್ಯಕ್ಷರು, ಸದಸ್ಯರ ನೇಮಕವಾಗಿಲ್ಲ. ಸಾವಿರಾರು ಮಂದಿ ಅಮಾಯಕರಿಗೆ ನ್ಯಾಯ ಕೊಡಿಸುವ ಆಯೋಗದ ಕಾರ್ಯನಿರ್ವಹಣೆಗೂ ವಿಪಕ್ಷ ನಾಯಕನ ಅನುಪಸ್ಥಿತಿ ಕಾಡುತ್ತಿದೆ.

ಚುನಾವಣೆ ಪೂರ್ವದಲ್ಲೇ ಆಯೋಗದ ಅಧ್ಯಕ್ಷರು, ಇಬ್ಬರು ಸದಸ್ಯರು ನಿವೃತ್ತಿ ಹೊಂದಿದ್ದರು. ಆದರೆ ಅಂದಿನ ಸರಕಾರ ವಿಧಾನಸಭೆ ಚುನಾವಣೆಯಲ್ಲಿ ತಲ್ಲೀನವಾಗಿದ್ದರಿಂದ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಬಳಿಕ ಬಂದ ಸರಕಾರ ಕೂಡ ಆಯೋಗದ ಸದಸ್ಯರ ನೇಮಕ ಪ್ರಕ್ರಿಯೆ ಆರಂಭಿಸಿಲ್ಲ.

ಸರಕಾರದ ಧೋರಣೆಯನ್ನು ಪ್ರಶ್ನಿಸಿ ವಕೀಲರೊಬ್ಬರು ಹೈಕೋರ್ಟ್‌ ಮೊರೆ ಹೋಗಿದ್ದು, ಹೈಕೋರ್ಟ್‌ ವಿಳಂಬಕ್ಕೆ ಕಾರಣ ಕೇಳಿ ನೋಟಿಸ್‌ ನೀಡಿದೆ. ಆದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ಆಯ್ಕೆ ಸಮಿತಿಯಲ್ಲಿ ವಿಪಕ್ಷ ನಾಯಕ ಇರಲೇಬೇಕು. ಆದರೆ ವಿಪಕ್ಷ ನಾಯಕರಿಲ್ಲದ ಕಾರಣ ಸದಸ್ಯರ ನೇಮಕ ಸಾಧ್ಯವಿಲ್ಲ ಎಂದು ಹೇಳುತ್ತ ಮೂರು ತಿಂಗಳುಗಳಿಂದ ನೇಮಕ ಮಾಡದೆ ದಿನದೂಡುತ್ತಿದೆ.

5 ಸಾವಿರ ದೂರುಗಳು ಬಾಕಿ
ಅಕ್ರಮ ಬಂಧನ, ಬಾಲಕಾರ್ಮಿಕರು, ಅಪಹರಣ, ಲಾಕಪ್‌ ಡೆತ್‌, ದೌರ್ಜನ್ಯ ಸೇರಿ 2022ರಲ್ಲಿ ಆಯೋಗಕ್ಕೆ 15 ಸಾವಿರಕ್ಕೂ ಹೆಚ್ಚು ದೂರುಗಳು ಬಂದಿವೆ. ಈ ಪೈಕಿ 10 ಸಾವಿರ ಪ್ರಕರಣಗಳು ಇತ್ಯರ್ಥವಾಗಿದ್ದು, 5 ಸಾವಿರಕ್ಕೂ ಹೆಚ್ಚು ಬಾಕಿ ಇವೆ. ಈ ಮಧ್ಯೆ ಆಯೋಗದ ಸದಸ್ಯರು ನಿವೃತ್ತಿಗೊಂಡ ಬಳಿಕ 4 ಸಾವಿರ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಪೊಲೀಸರ ವಿರುದ್ಧವೇ ಹೆಚ್ಚಿನ ಪ್ರಮಾಣದಲ್ಲಿ ದೂರುಗಳು ಬಂದಿವೆ. ಆಯೋಗದಲ್ಲಿರುವ ಪೊಲೀಸ್‌ ಅಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ದೂರುಗಳನ್ನು ಸ್ವೀಕರಿಸಿ ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿ ಕೈತೊಳೆದುಕೊಂಡಿದ್ದಾರೆ.

ಮಾನವ ಹಕ್ಕುಗಳ ಕಾಯ್ದೆ ಪ್ರಕಾರ ಆಯೋಗದ ಮುಖ್ಯಸ್ಥರು ಸೇರಿ ಐವರು ಸದಸ್ಯರನ್ನು ನೇಮಿಸಬೇಕು. ಅಧ್ಯಕ್ಷರಾಗಿ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಅಥವಾ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು, ಸದಸ್ಯರಾಗಿ ಹೈಕೋರ್ಟ್‌ ನ್ಯಾಯಮೂರ್ತಿಗಳು, ಕೆಳ ಹಂತದ ನ್ಯಾಯಾಧೀಶರು ಮತ್ತು ಇತರ ಇಬ್ಬರು ಸದಸ್ಯರು ಮಾನವ ಹಕ್ಕುಗಳ ಆಯ್ಕೆ ಬಗ್ಗೆ ಹೆಚ್ಚಿನ ಜ್ಞಾನವುಳ್ಳ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಈ ಸದಸ್ಯರ ಅಧಿಕಾರಾವಧಿ 3ರಿಂದ 5 ವರ್ಷಗಳು.

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಅಧ್ಯಕ್ಷರು ಸೇರಿ ಮೂವರು ಸದಸ್ಯರಿದ್ದರು. ಈ ಪೈಕಿ ಫೆ. 17ರಂದು ನಿವೃತ್ತ ನ್ಯಾಯಮೂರ್ತಿ ಕೆ.ಬಿ. ಚಂಗಪ್ಪ, ಫೆ. 24ರಂದು ನಿವೃತ್ತ ಐಪಿಎಸ್‌ ಅಧಿಕಾರಿ ಆರ್‌.ಕೆ.ದತ್ತಾ ಹಾಗೂ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾ| ಡಿ.ಎಚ್‌. ವಘೇಲಾ ಅವರು ಮಾ. 10ರಂದು ನಿವೃತ್ತಿಯಾಗಿದ್ದಾರೆ.

ವಿಪಕ್ಷ ನಾಯಕನಿಲ್ಲದ ಸಮಿತಿ
ಆಯೋಗದ ಸದಸ್ಯರ ಆಯ್ಕೆ ಸಮಿತಿಯಲ್ಲಿ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್‌, ವಿಧಾನ ಪರಿಷತ್‌ ಸಭಾಪತಿ, ವಿಪಕ್ಷ ನಾಯಕರು ಹಾಗೂ ಗೃಹ ಸಚಿವರು ಇರುತ್ತಾರೆ. ನಿಯಮ ಪ್ರಕಾರ ಈ ಸಮಿತಿ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರ ನಿವೃತ್ತಿಯ 2ರಿಂದ 3 ತಿಂಗಳು ಮೊದಲೇ ಆಯ್ಕೆ ಪ್ರಕ್ರಿಯೆ ಆರಂಭಿಸಬೇಕು. ಅನಂತರ ಆ ಆಯ್ಕೆಗೆ ಸಂಪುಟದ ಒಪ್ಪಿಗೆ ಪಡೆಯಬೇಕು. ಬಳಿಕ ರಾಜ್ಯಪಾಲರು ಅಂಗೀಕರಿಸಬೇಕು. ಆದರೆ ಆಯ್ಕೆ ಸಮಿತಿಯಲ್ಲಿ ವಿಪಕ್ಷದ ನಾಯಕರೇ ಇಲ್ಲ. ಒಂದು ವೇಳೆ ಕಾನೂನು ಸಲಹೆ ಪಡೆದುಕೊಂಡು ಆಯ್ಕೆ ಪ್ರಕ್ರಿಯೆ ಆರಂಭಿಸಿದರೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಗೊಂದಲದಲ್ಲಿ ಸರಕಾರ ಇದೆ ಎಂದು ಮೂಲಗಳು ತಿಳಿಸಿವೆ.

ವಿಪಕ್ಷದ ನಾಯಕರಿಲ್ಲದ ಆಯ್ಕೆ ಸಮಿತಿಯಿಂದ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನು ನೇಮಿಸಲು ಸಾಧ್ಯವಿಲ್ಲ. ಸಿಎಂ, ಉಭಯ ಸದನಗಳ ಅಧ್ಯಕ್ಷರು, ಗೃಹ ಸಚಿವರು ಹಾಗೂ ವಿಪಕ್ಷ ನಾಯಕ ಆಯ್ಕೆ ಸಮಿತಿಯಲ್ಲಿ ಇರಲೇಬೇಕು ಎಂದು ಮಾನವ ಹಕ್ಕುಗಳ ರಕ್ಷಣ ಕಾಯ್ದೆ ಹೇಳುತ್ತದೆ.
– ಎಸ್‌. ಉಮಾಪತಿ, ವಕೀಲರು

-ಮೋಹನ ಭದ್ರಾವತಿ

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.