ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ಆಗಿಲ್ಲ
Team Udayavani, Jul 4, 2020, 7:11 AM IST
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಅಗತ್ಯವಾದ ಉಪಕರಣ ಹಾಗೂ ಔಷಧ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಭ್ರಷ್ಟಾಚಾರ ಆಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿ, ಸರ್ಕಾರ ಹಗಲು, ರಾತ್ರಿ ಕೋವಿಡ್ 19 ನಿಯಂತ್ರಣಕ್ಕೆ ಕೆಲಸ ಮಾಡುತ್ತಿರು ವಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇಂತಹ ಹೇಳಿಕೆ ನೀಡಿರುವುದು ನೋವಿನ ಸಂಗತಿ. ಇದರಿಂದ ರಾಜ್ಯಕ್ಕೆ ಒಳ್ಳೆಯ ಸಂದೇಶ ಹೋಗುವುದಿಲ್ಲ ಎಂದರು.
ಎಲ್ಲದಕ್ಕೂ ದಾಖಲೆಗಳಿವೆ, ನಾವ್ಯಾರೂ ಓಡಿ ಹೋಗಲ್ಲ. ಕೋವಿಡ್ ಪರಿಕರ, ಔಷಧ ಖರೀದಿಯಲ್ಲಿ ಯಾರಾ ದರೂ ಹಣ ಮಾಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರಲು ಅರ್ಹರಲ್ಲ. ನಾವು ಯಾವುದನ್ನೂ ಬಚ್ಚಿಟ್ಟುಕೊಂಡಿಲ್ಲ, ಈ ಸರ್ಕಾರಕ್ಕೆ ಬಚ್ಚಿಟ್ಟುಕೊಳ್ಳುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರಿಂದ ಇಂತಹ ಆರೋಪ ನಿರೀಕ್ಷೆ ಮಾಡಿರಲಿಲ್ಲ. ವೈದ್ಯಕೀಯ ಇಲಾಖೆ, ಆರೋಗ್ಯ ಇಲಾಖೆ ಅಥವಾ ಸರ್ಕಾರದಿಂದ ಏನೇ ಖರೀದಿಸಿದರೂ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಪಾರದರ್ಶಕ ವಾಗಿ ಕ್ರಮ ಕೈಗೊಳ್ಳಲಿದೆ. ಯಾವುದೇ ರೀತಿಯ ತನಿಖೆಗೂ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.