ನಾಳೆಯಿಂದ Lock Down ಇಲ್ಲ: ನೈಟ್ ಕರ್ಫ್ಯೂ, ಸಂಡೇ ಫುಲ್ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಕೆ

ತರಕಾರಿ ಮಾರುಕಟ್ಟೆಗಳು ವಿಶಾಲ ಪ್ರದೇಶಕ್ಕೆ ಸ್ಥಳಾಂತರ ; ಉದ್ಯಾನವನಗಳಲ್ಲಿ ಜಿಮ್ ಸಲಕರಣೆ, ಬೆಂಚ್ ಬಳಕೆಗೆ ನಿರ್ಬಂಧ

Team Udayavani, Jul 21, 2020, 9:36 PM IST

ನಾಳೆಯಿಂದ Lock Down ಇಲ್ಲ: ನೈಟ್ ಕರ್ಫ್ಯೂ, ಸಂಡೇ ಫುಲ್ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಮರು ಜಾರಿಗೊಳಿಸಲಾಗಿತ್ತು.

ಆದರೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಫೇಸ್ಬುಕ್ ಲೈವ್ ಮೂಲಕ ಮಾತನಾಡಿ ರಾಜ್ಯದಲ್ಲಿ ಇನ್ನು ಲಾಕ್ ಡೌನ್ ನಿಯಮಗಳು ಕಂಟೈನ್ಮೆಂಟ್ ಹೊರತಾದ ಭಾಗಗಳಲ್ಲಿ ಜಾರಿಯಲ್ಲಿರುವುದಿಲ್ಲ ಎಂದು ಹೇಳಿದ್ದರು.

ಇದಕ್ಕೆ ಅನುಗುಣವಾಗಿ ರಾಜ್ಯ ಸರಕಾರ ಇದೀಗ ಕೆಲವೊಂದು ಮಾರ್ಪಾಡುಗಳೊಂದಿಗೆ ಜೂನ್ 30ರಂದು ತನ್ನ ಆದೇಶದಲ್ಲಿ ಕೆಲವೊಂದು ಅಂಶಗಳನ್ನು ಪರಿಷ್ಕರಿಸಿ ರಾಜ್ಯಾದ್ಯಂತ ಅನ್ ಲಾಕ್ ಪ್ರಕ್ರಿಯೆಯನ್ನು ಮರು ಜಾರಿಗೊಳಿಸಿದೆ.
ಇದರ ಪ್ರಕಾರ ಬೆಂಗಳೂರು ಪ್ರದೇಶದಲ್ಲಿ ಜುಲೈ 14ರ ರಾತ್ರಿ 8.00 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 5 ಗಂಟೆಗಳವರೆಗೆ ಜಾರಿಯಲ್ಲಿದ್ದ ಲಾಕ್ ಡೌನ್ ನಾಳೆ ಬೆಳಿಗ್ಗೆಗೆ ಮುಕ್ತಾಯಗೊಳ್ಳಲಿದೆ. ಮತ್ತು ಈ  ವ್ಯವಸ್ಥೆ ಜುಲೈ 30ರವರೆಗೆ ಹೀಗೆಯೇ ಮುಂದುವರಿಯಲಿದೆ ಎಂದು ರಾಜ್ಯ ಸರಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಜು.23) ಬೆಳಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.

ಮಾರ್ಪಾಡುಗೊಂಡ ಅನ್ ಲಾಕ್ 2.0 ಮಾರ್ಗಸೂಚಿಗಳ ಪ್ರಕಾರ ರಾಜ್ಯಾದ್ಯಂತ ರಾತ್ರಿ 9.00 ಗಂಟೆಯಿಂದ ಬೆಳಗ್ಗೆ 5.00 ಗಂಟೆಯವರೆಗೆ ಕರ್ಫ್ಯೂ ಸ್ಥಿತಿ ಜಾರಿಯಲ್ಲಿರುತ್ತದೆ. ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವಂತೆ ಪ್ರತೀ ಭಾನುವಾರದ ಲಾಕ್ ಡೌನ್ ಮುಂದುವರಿಯಲಿದೆ.

ಮತ್ತು ಈ ನಿಯಮಗಳಿಗೆ ಪೂರಕವಾಗಿ ಜನಸಂದಣಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಗಳಲ್ಲಿ ತರಕಾರಿ ಮಾರುಕಟ್ಟೆಗಳನ್ನು ಎ.ಪಿ.ಎಂ.ಸಿ. ಅಥವಾ ಸೂಕ್ತ ವಿಶಾಲ ಪ್ರದೇಶಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದು.

ಉದ್ಯಾನವನಗಳಲ್ಲಿ ಜಿಮ್ ಸಲಕರಣೆಗಳು ಹಾಗೂ ಕುಳಿತುಕೊಳ್ಳುವ ಬೆಂಚ್ ಗಳನ್ನು ಸಾರ್ವಜನಿಕರು ಬಳಸದಂತೆ ನಿಗಾ ವಹಿಸುವುದು.

ಇವುಗಳೊಂದಿಗೆ ಆಯಾ ಜಿಲ್ಲಾಡಳಿತಗಳ ಪ್ರತ್ಯೇಕ ಮಾರ್ಗಸೂಚಿಗಳು ಪ್ರಕಟಗೊಳ್ಳುವವರೆಗೂ ಅನ್ ಲಾಕ್ 2.0ರ ಮಾರ್ಗಸೂಚಿಯು ಈ ಮೇಲಿನ ಬದಲಾವಣೆಗಳೊಂದಿಗೆ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಟಾಪ್ ನ್ಯೂಸ್

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

School bag

ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.