Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್
Team Udayavani, Apr 19, 2024, 11:42 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜೆಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರಕಾರದ ವಿರುದ್ಧ ಚಾರ್ಜ್ಶೀಟ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಇದೊಂದು ಕ್ರೂರ, ಹೃದಯಹೀನ ಸರಕಾರ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜೆಹಾದ್ ನಡೆಯುತ್ತಿದೆ. ಲವ್ ಜೆಹಾದ್ಗೆ ಕಾಂಗ್ರೆಸ್ ನಾಯಕರ ಕುಟುಂಬವೂ ಬಲಿಯಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಹಿಂದೂ ಯುವತಿ ಬರ್ಬರ ಹತ್ಯೆಯನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಜೆಹಾದಿಗಳು ಮಚ್ಚು, ಲಾಂಗ್ ಹಿಡಿದು ಓಡಾಡುತ್ತಿದ್ದರೂ ಸರಕಾರ ಸುಮ್ಮನಿದೆ ಎಂದು ಆರೋಪಿಸಿದರು.
ಇದನ್ನು ಪ್ರೇಮ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್ ಜೆಹಾದ್ ಎಂದು ಕಾಂಗ್ರೆಸ್ ಕಾರ್ಪೊರೇಟರ್ ಆಗಿರುವ ಯುವತಿಯ ತಂದೆ ಹೇಳುತ್ತಿ¨ªಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲವ್ ಜೆಹಾದ್ ಮಾಡುವವರಿಗೆ ಪಾಸ್ಪೋರ್ಟ್, ಕೊಲೆ, ಗಲಭೆ ಮಾಡುವವರಿಗೆ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆ ಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್ ಸ್ಫೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ಜೈ ಶ್ರೀರಾಮ್ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.