![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 6, 2021, 5:40 PM IST
ಬೆಂಗಳೂರು: ನಾಯಕತ್ವ ಬದಲಾವಣೆ ಬಿಜೆಪಿಯಲ್ಲಿಲ್ಲ, ಕಾಂಗ್ರೆಸ್ ನಲ್ಲಿ ಇರಬಹುದು. ಶಾಸಕರು ಯಾವುದೇ ನೋವು, ಗೊಂದಲ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿಯವರಲ್ಲಿ ಅಥವಾ ಕೇಂದ್ರದ ನಾಯಕರಲ್ಲಿ ಹೇಳಿಕೊಳ್ಳಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮಾಡುವುದಿದ್ದರೆ ಮಾಧ್ಯಮಕ್ಕೆ ಮಾಹಿತಿ ನೀಡಿಯೇ ಮಾಡ್ತುತ್ತೇವೆ. ಆದರೆ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ ಎಂದರು.
ಯಾವುದೇ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಒಬ್ಬರು ಅಥವಾ ಇಬ್ಬರು ಹೇಳಿಕೆ ಕೊಡುತ್ತಿದ್ದಾರೆ. ಆ ಬಗ್ಗೆ ರಾಜ್ಯಾಕ್ಷರು ಹಾಗೂ ಸಂಬಂಧಿಸಿದ ನಾಯಕರು ಗಮನ ಹರಿಸಿದ್ದಾರೆ ಎಂದರು.
ಇದನ್ನೂ ಓದಿ:ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ
ಕೃಷಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದ ಅವರು, ಕಾಯ್ದೆಯ ಯಾವ ಸೆಕ್ಷನ್ ನಲ್ಲಿ ಲೋಪ ಇದೆ ಎಂದು ಹೇಳಲಿ, ಅದನ್ನು ಸರಿಪಡಿಸಲು ಸಿದ್ಧರಿದ್ದೇವೆ. ಕಾಯ್ದೆ ಹಿಂಪಡೆಯಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಲ್ಲಿ ಉಳಿದುಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಕೇಂದ್ರ ಬಜೆಟ್ ಗೆ ಆ ರೀತಿ ಟೀಕೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಫೈಟ್ ಇದೆ. ದೇಶದಲ್ಲಿ ಕಾಂಗ್ರೆಸ್ ಗೆ ವಿಪಕ್ಷ ಸ್ಥಾನ ಶಾಶ್ವತ ಎಂದು ವಾಗ್ದಾಳಿ ನಡೆಸಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.