ಡ್ರಗ್ಸ್ ಮಾಫೀಯಾದಲ್ಲಿ ಭಾಗಿಯಾಗಿದವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಡಾ.ಕೆ.ಸುಧಾಕರ್

Team Udayavani, Sep 12, 2020, 8:30 PM IST

sudghakar

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಡ್ರಗ್ಸ್ ಮಾಫೀಯಾನನ್ನು ಬುಡಸಮೇತ ಕಿತ್ತು ಹಾಕಲು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಇದರಲ್ಲಿ ಯಾರನ್ನು ಸಹ ರಕ್ಷಿಸುವ ಪ್ರಶ್ನೆ ಉದ್ಭವಿಸುವುದಿಲ್ಲವೆಂದು ವೈದ್ಯಕೀಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡ್ರಗ್ಸ್ ಪ್ರಕರಣದಲ್ಲಿ ಯಾರೇ ಪ್ರಭಾವಿಗಳಾದರು ಸಹ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ತಮ್ಮ ಜವಾಬ್ದಾರಿಯಿಂದ ನೊಣಚಿಕೊಳ್ಳದೆ ರಾಜ್ಯದ ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಣೆ ಮಾಡಲು ಸರ್ಕಾರಕ್ಕೆ ಸಹಕರಿಸಿ. ಯಾರನ್ನು ಸಹ ರಕ್ಷಣೆ ಮಾಡುವ ಕೆಲಸಕ್ಕೆ ಕೈಹಾಕಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುಧ್ಧ ಅಸಮಾಧಾನ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರಗಳು ಡ್ರಗ್ಸ್ ಪ್ರಕರಣಗಳ ಬಗ್ಗೆ ಯಾಕೆ ಗಮನ ನೀಡಿಲ್ಲವೆಂದು ಪ್ರಶ್ನಿಸಿದ ಸಚಿವರು ರಾಜ್ಯ ಬಿಜೆಪಿ ಸರ್ಕಾರ ಯಾಕೆ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಜ್ಯದ ಜನರಿಗೆ ಅರಿವು ಇದೇ ಯುವಕರು ಮತ್ತು ಜನಸಾಮಾನ್ಯರ ಹಿತದೃಷ್ಠಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾರೇ ಪ್ರಭಾವಿಗಳಾದರು ಸಹ ಅವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವರು ಈ ವಿಚಾರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದರು.

ರಾಜ್ಯದಲ್ಲಿ ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಣೆ ಮಾಡಲು ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ರಕ್ಷಣೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕಾಂಗ್ರೆಸ್ ನಾಯಕರು ಡ್ರಗ್ಸ್ ಪ್ರಕರಣವನ್ನು ಲಘುವಾಗಿ ಕಾಣುತ್ತಿದ್ದಾರೆ ಇದು ಲಘು ಪ್ರಕರಣಗಳು ಅಲ್ಲ ಸಮಾಜದ ಸ್ವಾಸ್ಥ ಹಾಳು ಮಾಡುವಂತಹ ಕೆಲಸ ಎಂದರು.

ಜಮೀರ್ ವಿರುಧ್ಧ ವಾಗ್ದಾಳಿ: ಜಾತಿಯ ಹೆಸರನ್ನು ಅಡ್ಡಯಿಟ್ಟುಕೊಂಡು ರಕ್ಷಣೆ ಪಡೆಯಬಹುದೆಂದು ಕೆಲವರು ಭ್ರಮೆಯಲ್ಲಿದ್ದಾರೆ. ಅಲ್ಪಸಂಖ್ಯಾತ ಎಂದು ಹೇಳಿ ಅನುಕಂಪ ಗಿಟ್ಟಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಪಸಂಖ್ಯಾತ ಎಂದಾಗಕ್ಷಣ ಅದು ರಕ್ಷಣೆಗೆ ಟ್ಯಾಗ್ ಅಲ್ಲ ಐಡಿನಾ ಅದು ವ್ಯಂಗ್ಯವಾಡಿದ ಸಚಿವರು ನಾನು ನನ್ನ ಜಾತಿ ಹೇಳಿಕೊಂಡು ರಕ್ಷಣೆಗೆ ಐಡಿ ಇಟ್ಟುಕೊಳ್ಳಬೇಕಾ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ವಿರುಧ್ಧ ವಾಗ್ದಾಳಿ ನಡೆಸಿದರು.

ಡ್ರಗ್ಸ್ ಮಾಫೀಯಾದಲ್ಲಿ ತಪ್ಪಿತಸ್ಥರು ಯಾರೇ ಇರಲಿ ಯಾವ ಜನಾಂಗದವರು ಇರಲಿ,ಯಾವ ಭಾಷಿಗರಿಲಿ,ಶ್ರೀಮಂತರು–ಬಡವರು ಇರಲಿ ಪಕ್ಷಾತೀತವಾಗಿ,ಜಾತ್ಯಾತೀತವಾಗಿ ನಮ್ಮ ಬಿಜೆಪಿ ಸರ್ಕಾರ ತನಿಖೆ ನಡೆಸಿ ಕ್ರಮ ಜರುಗಿಸುತ್ತದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹೊಸ ಪದ್ದತಿಗಳಿಂದ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಮೇಲೆ ಬೀರುವ ಪರಿಣಾಮಗಳ ಕುರಿತು ಕಾಲೇಜಿನಲ್ಲಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಗಮನಹರಿಸುತ್ತಿದ್ದಾರೆ. ಗಡಿ ಭಾಗಗಳಲ್ಲಿ 20 ಕಡೆ ದಾಳಿ ನಡೆಸಿ 20 ಜನರನ್ನು ಬಂಧಿಸಿ 65 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ(ಚಿನ್ನಿ),ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಒ ಫೌಝೀಯಾ ತರುನ್ನುಮ್,ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.