ಹಿರಿಯ ಇತಿಹಾಸಕಾರ ಷ.ಶೆಟ್ಟರ್ ಇನ್ನಿಲ್ಲ
Team Udayavani, Feb 29, 2020, 3:05 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಇತಿಹಾಸಕಾರ ಮತ್ತು ಸಂಶೋಧಕ ಷ.ಶೆಟ್ಟರ್ (85) ಅವರು ಶುಕ್ರವಾರ ಕೊನೆಯುಸಿರೆಳೆದರು. ಉಸಿರಾಟದ ತೊಂದರೆಯಿಂದಾಗಿ ಕೆಲ ದಿನಗಳ ಹಿಂದೆಷ್ಟೇ ಷ.ಶೆಟ್ಟರ್ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶುಕ್ರವಾರ ಮುಂಜಾನೆ 3.15ರ ವೇಳೆ ಹೃದಯಘಾತದಿಂದ ನಿಧನರಾದರು.
ಪತ್ನಿ, ಇಬ್ಬರು ಪುತ್ರಿಯರು ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಶೆಟ್ಟರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಭೂಪಸಂದ್ರದ ಸ್ವಗೃಹದಲ್ಲಿ ಇರಿಸಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವು ಗಣ್ಯರು ಶೆಟ್ಟರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಷ.ಶೆಟ್ಟರ್ ಅವರ ಅಳಿಯಂದಿರು ಮತ್ತು ಮೊಮ್ಮಕ್ಕಳು ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಅವರು ಬಂದ ನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಲೂರು ತಾಲೂಕಿನ ಆಲಹಳ್ಳಿಯಲ್ಲಿ ಲಿಂಗಾಯಿತ ಸಂಪ್ರದಾಯದ ರೀತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಶೆಟ್ಟರ್ ಅವರ ಆಪ್ತರಾದ ವೈ.ಎನ್.ಕೋದಂಡರಾಮ ತಿಳಿಸಿದ್ದಾರೆ.
ಹಂಪಸಾಗರದಲ್ಲಿ ಜನನ: ಇತಿಹಾಸ ಸಂಶೋಧನೆ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದವರೆಗೆ ಹೆಸರು ಮಾಡಿದ್ದ ಷ.ಶೆಟ್ಟರ್ ಅವರು 1935ರ ಡಿಸೆಂಬರ್ 11ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲೂಕಿನ ಹಂಪಸಾಗರದಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಳ್ಳಾರಿಯಲ್ಲಿ ಪೂರೈಸಿ ಆ ನಂತರ ಮೈಸೂರು, ಧಾರವಾಡ ಮತ್ತು ಕೇಂಬ್ರಿಡ್ಜ್ನಲ್ಲಿ ಉನ್ನತ ಶಿಕ್ಷಣ ಪಡೆದರು.
ಹಳೆಗನ್ನಡ ಸಾಹಿತ್ಯದ ಬಗ್ಗೆ ಹೆಚ್ಚಿನ ಅಭಿರುಚಿ ಹೊಂದಿದ್ದ ಅವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕಾವ್ಯ ಕುರಿತು ಸುಮಾರು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಹೆಸರಾಂತ ವಿಶ್ವವಿದ್ಯಾಲಯಗಳಾದ ಕೇಂಬ್ರಿಡ್ಜ್, ಹಾರ್ವಡ್, ಹೈಡಲ್‌ಬರ್ಗ್, ಮಾಸ್ಕೋ ಯೂನಿವರ್ಸಿಟಿಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು.
2018ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಶ್ರವಣ ಬೆಳಗೊಳದಲ್ಲಿ ಹಮ್ಮಿಕೊಂಡಿದ್ದ “ಪ್ರಥಮ ಹಳೆಗನ್ನಡ ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿದ್ದರು. ಇತಿಹಾಸ ಹಾಗೂ ಪ್ರಾಚೀನ ಲಿಪಿಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ್ದ ಅವರು “ಶ್ರವಣಬೆಳಗೊಳ, “ಸಾವಿಗೆ ಆಹ್ವಾನ,” ಶಂಗಂ ತಮಿಳಗಂ ಮತ್ತು ಕನ್ನಡ ನಾಡು-ನುಡಿ,”ಬಾದಾಮಿ ಚಾಲುಕ್ಯರ ಶಾಸನ ಸಾಹಿತ್ಯ,” ಸಾವನ್ನು ಅರಸಿ,
“ಹಳಗನ್ನಡ – ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ,”ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ,” ಪ್ರಾಕೃತ ಜಗದ್ವಲಯ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಷ.ಶೆಟ್ಟರ್ ಅವರು, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಪಂಪ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.
ಗಣ್ಯರಿಂದ ಕಂಬನಿ: ಷ.ಶೆಟ್ಟರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಕನ್ನಡಪರ ಹೋರಾಟಗಾರ ರಾ.ನಂ.ಚಂದ್ರಶೇಖರ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.