ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ
Team Udayavani, Jul 9, 2020, 7:03 AM IST
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿದೆ.
ರಾಜ್ಯದಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನ ಏಪ್ರಿಲ್ 1 ರಿಂದ ಜುಲೈ 6 ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4.98 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, 4,35,700 ಮೆ.ಟನ್ ಸರಬರಾಜಾಗಿದ್ದು 2,06,750 ಮೆ.ಟನ್ ದಾಸ್ತಾನಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದೆ.
ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು 2,06, 740 ಟನ್ ದಾಸ್ತಾನಿದೆ. ಮೇ, ಜೂನ್ ಅವಧಿಯಲ್ಲಿ ರಾಜ್ಯಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದರೂ ಇಲಾಖೆ ಪೂರೈಸಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.