ಸ್ಥ. ಸಂಸ್ಥೆ: ಚುನಾವಣೆ ಸದ್ಯ ಇಲ್ಲ
Team Udayavani, Apr 1, 2022, 7:00 AM IST
ಬೆಂಗಳೂರು: ತಾ.ಪಂ., ಜಿ.ಪಂ. ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಆ ಸಮುದಾಯಗಳು ಹೊಂದಿರುವ ರಾಜಕೀಯ ಪ್ರಾತಿನಿಧ್ಯದ ವಾಸ್ತವ ಸ್ಥಿತಿಗತಿ ತಿಳಿಯುವುದಕ್ಕಾಗಿ ಪ್ರತ್ಯೇಕ ಆಯೋಗವೊಂದನ್ನು ರಚಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸದನ ನಾಯಕರ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಆಯೋಗದ ವರದಿ ಬರುವವರೆಗೆ ಜಿಲ್ಲಾ, ತಾಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆ ನಡೆಸದಿರಲು ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಗಣತಿಯನ್ನು ಪರಿಗಣಿಸಿ ಒಬಿಸಿ ಮೀಸಲಾತಿ ನೀಡಬಹುದು ಎಂದು ವಿಪಕ್ಷ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಮೀಕ್ಷೆಯಲ್ಲಿ ರಾಜಕೀಯ ಪ್ರಾತಿನಿಧ್ಯದ ಮಾಹಿತಿ ಇಲ್ಲ. ಹೀಗಾಗಿ ಹೊಸದಾಗಿ ರಾಜಕೀಯ ಪ್ರಾತಿನಿಧ್ಯ ತಿಳಿಯಲು ಮತ್ತೂಂದು ಆಯೋಗದ ಮೂಲಕ ಸಮೀಕ್ಷೆ ನಡೆಸಲು ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಿ ಚುನಾವಣೆ ನಡೆಸಬೇಕೆಂಬ ಅಭಿಪ್ರಾಯ ಎಲ್ಲ ಪಕ್ಷಗಳಿಂದ ವ್ಯಕ್ತವಾಗಿದೆ. ಹಾಗಾಗಿ ಆಯೋಗ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಆದಷ್ಟು ಬೇಗನೆ ಆಯೋಗ ರಚನೆ ಮಾಡಲಾಗುವುದು.
ಆಯೋಗದ ವರದಿ ಅನ್ವಯ ಚುನಾವಣೆ ನಡೆಸಲಾಗುತ್ತದೆ ಎಂದು ಸಭೆಯ ಅನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಭೆಯ ಅನಂತರ ಸುದ್ದಿಗಾರರಿಗೆ ತಿಳಿಸಿದರು.
ಪತ್ರ ಬರೆಯಲಾಗಿತ್ತು:
ಗ್ರಾ.ಪಂ. ಚುನಾವಣೆ ಮುಗಿಯುತ್ತಿದ್ದಂತೆ ತಾಲೂಕು ಮತ್ತು ಜಿ.ಪಂ. ಚುನಾವಣೆ ನಡೆಸಲು ನಾವು ಸಿದ್ಧ ಎಂದು ಚುನಾವಣ ಆಯೋಗಕ್ಕೆ ಪತ್ರ ಬರೆದಿದ್ದೆವು. ಆಯೋಗ ಮಾಡಿದ್ದ ಕ್ಷೇತ್ರ ಪುನರ್ ವಿಂಗಡನೆ ಮತ್ತು ಮೀಸಲಾತಿ ಹಂಚಿಕೆಯಲ್ಲಿ ತಪ್ಪುಗಳಾಗಿವೆ ಎಂದು 2,600ಕ್ಕೂ ಹೆಚ್ಚು ಆಕ್ಷೇಪಗಳು ಬಂದಿದ್ದವು. ಆಯೋಗ ಅವುಗಳನ್ನು ಪರಿಗಣಿಸದೆ ಚುನಾವಣೆ ನಡೆಸಲು ಮುಂದಾಗಿತ್ತು. ಹೀಗಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಲಾಗಿತ್ತು. ಅದರ ಮಾಹಿತಿ ಪಡೆದು ವರದಿ ಕೊಡುವ ಸಮಯದಲ್ಲಿ ಒಬಿಸಿ ಮೀಸಲಾತಿ ಖಚಿತ ಪಡಿಸುವ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು. ಹೀಗಾಗಿ ಆಯೋಗ ರಚನೆ ತೀರ್ಮಾನ ಮಾಡಲಾಗಿದೆ. ಆದಷ್ಟು ಶೀಘ್ರ ಆಯೋಗ ರಚಿಸಿ ರಾಜಕೀಯ ಮೀಸಲಾತಿ ಬಗ್ಗೆ ಅಭಿಪ್ರಾಯ ಪಡೆದು ಚುನಾವಣೆ ನಡೆಸಲಾಗುವುದು ಎಂದರು. ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶಂಪೂರ್, ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ್ ಇದ್ದರು.
ಸಿದ್ದರಾಮಯ್ಯ ಸಹಮತ :
ಮೀಸಲು ಸೌಲಭ್ಯ ಕಲ್ಪಿಸದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂ. ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂ. ವರ್ಗಗಳಿಗೆ ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದಿನ ಆಯೋಗದ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮತ್ತೂಂದು ಆಯೋಗ ರಚಿಸಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯ ವರೆಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಬಾರದು ಎಂದರು.
ಒಬಿಸಿಗೆ ಮೀಸಲಾತಿ ಕಲ್ಪಿಸಲು ವರದಿ ನೀಡಲು ಆಯೋಗ ರಚನೆಗೆ ನಿರ್ಧರಿಸಲಾಗಿದೆ. ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆ ಬಗ್ಗೆ ವರದಿ ಪಡೆದು ಕಾನೂನು ಮಿತಿಯೊಳಗೆ ಕ್ರಮ ಕೈಗೊಳ್ಳಲಾಗುವುದು.– ಜೆ.ಸಿ. ಮಾಧುಸ್ವಾಮಿ, ಕಾನೂನು ಸಚಿವ
ಯಾವುದೇ ಕಾರಣಕ್ಕೂ ಒಬಿಸಿಗೆ ಅನ್ಯಾಯವಾಗಬಾರದು. ಸರಕಾರ ಆಯೋಗ ರಚನೆ ಮಾಡಲು ನಮ್ಮ ಸಹಮತವಿದೆ. ಸರಕಾರ ಹಿಂದುಳಿದ ವರ್ಗಗಳ ಹಿತ ಕಾಪಾಡಬೇಕು. ಒಬಿಸಿ ಮೀಸಲಾತಿ ನೀಡದೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬಾರದು.-ಬಂಡೆಪ್ಪ ಕಾಶಂಪೂರ್, ವಿಧಾನಸಭೆಯ ಜೆಡಿಎಸ್ ಉಪ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.