![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 9, 2021, 11:46 AM IST
ಬೆಂಗಳೂರು: ಕಲಬುರಗಿ ಪಾಲಿಕೆ ಅಧಿಕಾರದ ವಿಚಾರವಾಗು ಪ್ರಾರಂಭಿಕ ಹಂತದಲ್ಲಿ ಮಾತ್ರ ಚರ್ಚೆಯಾಗ್ತಿದೆ. ಆದರೆ ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಎಲ್ಲ ಸಚಿವರ ಭೇಟಿ ಯಶಸ್ವಿಯಾಗಿದೆ. ರಿಂಗ್ ರೋಡ್ ದಾಬಸ್ ಪೇಟೆಯಿಂದ ಮೈಸೂರು ರೋಡ್ ಯೋಜನೆ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದಿತ್ತು, ಅದನ್ನು ಕ್ಲಿಯರ್ ಮಾಡಿಸಿ ಮುಂದುವರೆಯಲಿದೆ. 5 -6 ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ರಾಜ್ಯದ ನಾಲ್ಕೈದು ಹೈವೆಗಳಿಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದರು.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಗ್ರಾಮೀಣ ಕನೆಕ್ಟಿಟಿವಿಟಿಗೆ ವಿಶೇಷ ಯೋಜನೆ ಮಾಡುವ ಬಗ್ಗೆ ಚರ್ಚೆಯಾಗಿದೆ. ಡಿಜಿಟಲೈಜೇಷನ್ ಅಫ್ ರೂರಲ್ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಗೂಡಿ ಮುಂದುವರೆಯಲಿದೆ ಎಂದರು.
ಇದನ್ನೂ ಓದಿ:6ನೇ ಸೆಮಿಸ್ಟರ್‌ಗೆ ಮೊದಲ ಆದ್ಯತೆ; ಶೀಘ್ರ ಪರೀಕ್ಷೆ
ಬೆಂಗಳೂರು ಮತ್ತು ಕೋಲಾರದ ನಡುವೆ ಹಾರ್ಡ್ ವೇರ್ ಪಾರ್ಕ್ ಮಾಡುವ ಬಗ್ಗೆಯೂ ಚರ್ಚೆಯಾಗಿದೆ. ಸ್ಕಿಲ್ ಯೂನಿವರ್ಸಿಟಿ ಮಾಡಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದಾರೆ. ಅದನ್ನು ನಾವೆಲ್ಲ ಸೇರಿ ಪರಿಶೀಲನೆ ಮಾಡುತ್ತೇವೆಂದು ಹೇಳಿದ್ದೇನೆ. ಸಬ್ ಅರ್ಬನ್ ರೈಲ್ವೇ ಸೇರಿದಂತೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಿಫಾ ವೈರಸ್ ವಿಚಾರವಾಗಿ ಮಾತಾನಾಡಿದ ಸಿಎಂ, ನಿಫಾ ವೈರಸ್ ಬಗ್ಗೆ ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕೇರಳದಿಂದ ನಮಗೆ ಏನೂ ಸಮಸ್ಯೆ ಆಗಬಹುದು. ಅದನ್ನ ಹೇಗೆ ತಡೆಯಬಹುದೆಂದು ಚರ್ಚೆಯಾಗಿದೆ. ಇಂದು ಸಂಜೆ ಮತ್ತೆ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಕ್ಯಾಬಿನೆಟ್ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಕ್ಯಾಬಿನೆಟ್ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡಲು ಸೂಚನೆ ನೀಡಿದ್ದಾರೆ. ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.