ತಂತ್ರಾಂಶ ಪರಿಣತ ಈ ಕನ್ನಡ ಸಂಜಾತ


Team Udayavani, Nov 26, 2017, 11:17 AM IST

KANNADA-26.jpg

ಈ ಹೆಸರು ಜನಸಮಾನ್ಯರಿಗೆ ಅಷ್ಟೇನೂ ಪರಿಚಿತವಲ್ಲ. ಆದರೆ, ಇವರು ಸಿದ್ಧಪಡಿಸಿರುವ ತಂತ್ರಜಾnನವನ್ನು ಮಾತ್ರ ನಾವೆಲ್ಲರೂ ಉಪಯೋಗಿಸುತ್ತಿದ್ದೇವೆ. ಪುರಾಣಿಕ್‌ ಅವರು ಅಮೆರಿಕಾದ ಐಬಿಎಂ ಸಂಸ್ಥೆಯಲ್ಲಿ ತಂತ್ರಜ್ಞರಾಗಿದ್ದಾರೆ. ಮಾಹಿತಿ ತಂತ್ರಜಾnನ ಕ್ಷೇತ್ರದಲ್ಲಿ 26 ವರ್ಷಗಳ ಅನುಭವವಿದೆ.

ನೂರಾರು ವರ್ಷಗಳ ಹಿಂದಿನ ಕನ್ನಡ ಹಸ್ತಪ್ರತಿಗಳು, ಅಪರೂಪದ ಪುಸ್ತಕಗಳು, ತಾಳೆಗರಿಯ ಗ್ರಂಥಗಳು, ತಾಮ್ರ ಶಾಸನ, ಶಿಲಾಶಾಸನಗಳು ಮೊದಲಾದ ಮಾಧ್ಯಮಗಳಲ್ಲಿರುವ ಮಾಹಿತಿಯನ್ನು ಮೂಲಪ್ರತಿಗೆ ಧಕ್ಕೆಯಾಗದಂತೆ ಡಿಜಿಟಲ್‌ ರೂಪಕ್ಕೆ ತರಲು ಕೋಲ್ಡ್‌ ಸ್ಕ್ಯಾನಿಂಗ್‌ ತಂತ್ರಜಾnನವನ್ನು ಇವರು ಅಭಿವೃದ್ಧಿಪಡಿಸಿದ್ದು,

ಅದನ್ನು ಕೆಲವು ಪ್ರಮುಖ ವಸ್ತು ಸಂಗ್ರಹಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಗ್ರಂಥಾಲಯಗಳು ಯಶಸ್ವಿಯಾಗಿ ಬಳಸುತ್ತಿವೆ. ಮಾಹಿತಿ ತಂತ್ರಜಾnನ ಕ್ಷೇತ್ರದಲ್ಲಿ ಕನ್ನಡವನ್ನು ಬಳಸಲು ಇವರು ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. 

ದೂರದರ್ಶನದಲ್ಲಿ ಕನ್ನಡ ಬಳಸಲು ಅಗತ್ಯವಾದ ತಂತ್ರಾಂಶ, ಸಹಕಾರಿ ಬ್ಯಾಂಕ್‌ಗಳಲ್ಲಿ ಕನ್ನಡ ಬ್ಯಾಂಕಿಂಗ್‌ ತಂತ್ರಾಂಶ, ಎಟಿಎಂಗಳಲ್ಲಿ ಕನ್ನಡ, ಮೊಬೈಲ್‌ ಬ್ಯಾಂಕಿಂಗ್‌ ಮತ್ತು ವ್ಯಾಲೆಟ್‌ಗಳಲ್ಲಿ ಕನ್ನಡ ಬಳಸಲು ಅಗತ್ಯವಾದ ತಂತ್ರಾಂಶ, ಮೊಬೈಲ್‌ ಸೇವೆ ನೀಡುವ ಸಂಸ್ಥೆಗಳು ಗ್ರಾಹಕರಿಗೆ ನೀಡುವ ಬಿಲ್‌ ಮತ್ತು ಗ್ರಾಹಕ ಸೇವಾ ಕೇಂದ್ರದಲ್ಲಿ ಕನ್ನಡ ಬಳಸಲು ಅಗತ್ಯವಾದ ಕನ್ನಡ ತಂತ್ರಾಂಶ ಹೀಗೆ ಹಲವಾರು ಕನ್ನಡ ತಂತ್ರಾಂಶಗಳನ್ನು ಅಭಿವೃದ್ಧಿಪಡಿಸಿದ್ದಾರೆ.

ಮೈಸೂರು ವಿ.ವಿ.  14 ಸಂಪುಟಗಳ ಕನ್ನಡ ವಿಶ್ವಕೋಶ, ಕನ್ನಡ ಸಾಹಿತ್ಯ ಪರಿಷತ್ತಿನ ನಿಘಂಟು ಮೊದಲಾದ ಹಲವು ಡಿಜಿಟಲ್‌ ಯೋಜನೆಗಳಿಗೂ ಇವರು ಕೊಡುಗೆ ನೀಡಿದ್ದಾರೆ. ಇವರ ಪ್ರಯತ್ನದಿಂದಾಗಿ ಏರಟೆಲ್‌, ವೋಡಾಫೋನ್‌ ಮೊದಲಾದ ಮೊಬೈಲ್‌ ಸೇವಾ ಸಂಸ್ಥೆಗಳು, ಅಮೆಜಾನ್‌ ಮೊದಲಾದ ಬಹುರಾಷ್ಟ್ರೀಯ ಸಂಸ್ಥೆಗಳು ಕಾಲ್‌ಸೆಂಟರ್‌ಗಳಲ್ಲಿ ಕನ್ನಡ ತಂತ್ರಾಂಶವನ್ನು ಬಳಸುತ್ತಿವೆ.

ಇದರಿಂದ ಕನ್ನಡಿಗರಿಗೆ ಉದ್ಯೋಗವೂ ಸೃಷ್ಟಿಯಾದಂತಾಗಿದೆ. ಕನ್ನಡ ನಾಡು-ನುಡಿಯ ಹಿರಿಮೆ ಸಾರುವಂಥ ವೆಬ್‌ ಪೋರ್ಟಲ್‌ (www.karnatakainfo.com)ನ್ನು ಕನ್ನಡದಲ್ಲಿ ಅಭಿವೃದ್ಧಿ ಪಡಿಸಿ, ಮೂರು ವರ್ಷಗಳವರೆಗೆ ಯಶಸ್ವಿಯಾಗಿ ನಡೆಸಿದ್ದಾರೆ.  1000 ವಚನಗಳನ್ನು, ಕುವೆಂಪುರವರ 100 ಕವನಗಳನ್ನು, 2 ಆತ್ಮಚರಿತ್ರಗಳನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಇವರು,

ಇದನ್ನು ಚೀನಿ, ಫ್ರೆಂಚ್‌ ಮೊದಲಾದ ಭಾಷೆಗಳಲ್ಲಿ ದೊರೆಯುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.  ಅಲೆಕ್ಸಾ, ವಾಟ್ಸನ್‌, ಸಿರಿ ಮೊದಲಾದ ಆಧುನಿಕ ತಂತ್ರಜಾnನದಲ್ಲಿ ಕನ್ನಡ ಸೌಲಭ್ಯ ದೊರೆಯಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಅಂದಹಾಗೆ ಇವರು ಹಿರಿಯ ಗಾಂಧೀವಾದಿ, ಸ್ವಾತಂತ್ರ ಹೋರಾಟಗಾರ, ಕರ್ನಾಟಕ ಏಕೀಕರಣ ಹೋರಾಟಗಾರ, ಸಾಹಿತ್ಯರತ್ನ ದಿ. ಅನ್ನದಾನಯ್ಯ ಪುರಾಣಿಕ್‌ ಅವರ ಮಗ.
– ಅಮೃತಾ ಮೆಹಂದಳೆ

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

vidhana-Soudha

Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ

Nikhil-JDS

New Office Bearers: ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷ ಜತೆಗೆ ಮೂರು ಕಾರ್ಯಾಧ್ಯಕ್ಷ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.