H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್ ಗೆಲ್ಲುತ್ತಾರೆ
Team Udayavani, Oct 26, 2024, 12:34 AM IST
ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಸಹಿತ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ಚುನಾವಣೆಯಲ್ಲಿ ಕಾಂಗ್ರೆಸ್‌ನವರ ಕುತಂತ್ರದಿಂದ ನಿಖಿಲ್ ಸೋತಿದ್ದಾರೆ. ಈ ಬಾರಿ ಕುತಂತ್ರಿಗಳ ಮಾತು ಜನರು ಕೇಳುವುದಿಲ್ಲ. ಇದು ಕಾರ್ಯಕರ್ತರ ಚುನಾವಣೆ. ನಿಖೀಲ್ ಅವರನ್ನು ಗೆದ್ದೇ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಚ್.ಡಿ. ದೇವೇಗೌಡ ಮಾತನಾಡಿ, ನಮ್ಮ ಇಡೀ ವಂಶ ಭಗವಂತನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಇವತ್ತು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಮೊದಲು ಪೂಜಾ ಕೈಂಕರ್ಯಗಳನ್ನು ಸಲ್ಲಿಸಿ, ಭಗವಂತನ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.
ಜನ ಅವಕಾಶ ನೀಡುವರು: ನಿಖಿಲ್
ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಎನ್‌ಡಿಎ ಮೈತ್ರಿಕೂಟಕ್ಕೆ ತೊಂದರೆ ಆಗದಂತೆ ನಾವು ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸ ಉಳಿಸುವ ಕೆಲಸ ಮಾಡುತ್ತೇನೆ. ನನ್ನ ಪರವಾಗಿ ಎರಡು ಪಕ್ಷದ ಕಾರ್ಯಕರ್ತರು ಅತಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಒಬ್ಬ ಯುವಕನಿಗೆ ಕೆಲಸ ಮಾಡಲು ಜನರು ಅವಕಾಶ ನೀಡುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.