ಇದು ನನ್ನ ರಾಜಕೀಯದ ಕೊನೇ ಘಟ್ಟ’

Team Udayavani, Jul 29, 2019, 5:22 AM IST

Ramesh-Kumar-750-B

ಬೆಂಗಳೂರು: ಶಾಸಕರ ಅನರ್ಹತೆ ಪ್ರಕರಣದ ತೀರ್ಪು ನೀಡುವ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಜೈ ಪಾಲ್ ರೆಡ್ಡಿ ಅವರನ್ನು ನೆನೆದು ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಕಣ್ಣೀರು ಹಾಕಿದರು.ರಮೇಶ್‌ ಕುಮಾರ್‌,ವಿಧಾನಸಭೆ ಕಲಾಪ,ಅನರ್ಹ ಶಾಸಕರು

ಪತ್ರಿಕಾಗೋಷ್ಠಿ ಆರಂಭದದಲ್ಲಿಯೇ ಜೈಪಾಲ್ ರೆಡ್ಡಿ ಕುರಿತು ಪ್ರಸ್ತಾಪಿಸಿದ ಅವರು, ಜೈಪಾಲ್ ರೆಡ್ಡಿಯವರು 69 ರಿಂದ 84 ವರೆಗೆ ಆಂಧ್ರಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದರು. ಐದು ಬಾರಿ ಲೋಕಸಭೆ ಸದಸ್ಯರಾಗಿ ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಕೇಂದ್ರ ಸಚಿವರಾಗಿ ಒಳ್ಳೆಯ ಆಡಳಿತ ನೀಡಿದ್ದರೆಂದು ಭಾವುಕರಾಗಿ ಹೇಳಿದರು. ಅವರು ನನ್ನ ಹಿರಿಯ ಸಹೋದರನ ರೀತಿ ಮಾರ್ಗದರ್ಶನ ನೀಡುತ್ತಿದ್ದರು. ಉತ್ತಮ ಸಂಸದೀಯ ಪಟುವಾಗಿದ್ದ ಅವರು ಇಂದು ನಿಧನರಾಗಿದ್ದಾರೆ. ಇಂದು ನನಗೆ ಅತ್ಯಂತ ದುಃಖದ ದಿನ. ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಜೈಪಾಲ್ ರೆಡ್ಡಿ ಪಕ್ಷಾಂತ ನಿಷೇಧ ಕಾಯ್ದೆ ವಿಷಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದರು ಎಂದು ದುಃಖದಲ್ಲಿಯೇ ಹೇಳಿದರು. ಇದೇ ವೇಳೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿಬಸು, ಸೋಮನಾಥ ಚಟರ್ಜಿ, ಮೋಹನ್‌ಕುಮಾರ್‌ ಮಂಗಳಂ, ಇಂದ್ರಜಿತ್‌ ಗುಪ್ತಾ, ಚಂದ್ರಜಿತ್‌ ಯಾದವ್‌, ಮಧು ಲಿØಮೆ, ಜಾರ್ಜ್‌ ಫ‌ರ್ನಾಂಡಿಸ್‌, ಮಧು ದಂಡವತೆ ಅವರನ್ನು ನೆನೆದು, ಈ ವ್ಯಕ್ತಿಗಳೆಲ್ಲ ನಮ್ಮ ಸಂಸತ್ತಿನಲ್ಲಿ ಇದ್ದರಾ? ಈಗ ನಾವೆಲ್ಲಿದ್ದೇವೆ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ರಾಜ್ಯದಲ್ಲಿಯೂ ತುಳಸಿದಾಸ್‌ ದಾಸಪ್ಪ, ಅಬ್ದುಲ್ ನಜೀರ್‌ ಸಾಬ್‌, ಬಿ.ಎ. ಮೊಯಿದ್ದೀನ್‌, ಎ.ಕೆ.ಸುಬ್ಬಯ್ಯ, ಎಂ.ಸಿ ನಾಣಯ್ಯರಂತಹ ಪ್ರತಿಭಾವಂತರು ಸಾರ್ವಜನಿಕ ವಿಷಯದಲ್ಲಿ ಯಾವುದಕ್ಕೂ ಮಣಿದಿರಲಿಲ್ಲ. ಅವರ ಪ್ರಭಾವ ನನ್ನ ಮೇಲಾಗಿದೆ. ಇದು ನನ್ನ ನಾಲ್ಕು ದಶಕಗಳ ರಾಜಕೀಯ ಜೀವನದ ಕೊನೆಯ ಘಟ್ಟ ಆಗಬಹುದು. ವಿಧಾನಸಭಾಧ್ಯಕ್ಷನಾಗಿ ನಾನು ಒತ್ತಡಕ್ಕೆ ಒಳಗಾಗದೇ, ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ಈ ತೀರ್ಪು ನೀಡಲು ಮುಂದಾಗಿದ್ದೇನೆ ಎಂದು 14 ಜನ ಶಾಸಕರ ಅನರ್ಹತೆಯ ತೀರ್ಪು ಪ್ರಕಟಿಸಿದರು.

ರಾಜೀನಾಮೆ ಸುಳಿವು ನೀಡಿದ ಸ್ಫೀಕರ್‌
ಬೆಂಗಳೂರು: ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಸೋಮವಾರದ ವಿಧಾನಸಭೆಯ ಕಲಾಪದ ನಂತರ ರಾಜೀನಾಮೆ ಸಲ್ಲಿಸುತ್ತಾರಾ? ಸ್ವತ: ರಮೇಶ್‌ಕುಮಾರ್‌ ಅವರೇ ಈ ಬಗ್ಗೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ವಿರುದ್ಧವೂ ಅವರ ಪಕ್ಷದ ಸದಸ್ಯರು ದೂರು ಸಲ್ಲಿಸಿದ್ದಾರೆ. ಶನಿವಾರ ದೂರು ಸಲ್ಲಿಕೆಯಾಗಿದ್ದು, ಈ ಬಗ್ಗೆ ಮುಂದೆ ಬರುವವರು ನೋಡಿಕೊಳ್ಳುತ್ತಾರೆ ಎನ್ನುವ ಮೂಲಕ ಯಡಿಯೂರಪ್ಪ ಅವರ ವಿಶ್ವಾಸಮತ ಯಾಚನೆ ಹಾಗೂ ನಂತರ ನಡೆಯುವ ಧನ ವಿನಿಯೋಗ ವಿಧೇಯಕ ಅಂಗೀಕಾರವಾದ ಮೇಲೆ ತಾವು ಸ್ಪೀಕರ್‌ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಿಜೆಪಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೂ ಮೊದಲೇ ರಮೇಶ್‌ ಕುಮಾರ್‌ ಗೌರವಯುತವಾಗಿ ತಮ್ಮ ಹುದ್ದೆಯಿಂದ ನಿರ್ಗಮಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸೋಮವಾರದ ವಿಶ್ವಾಸಮತಯಾಚನೆ ಹಾಗೂ ಧನ ವಿನಿಯೋಗ ವಿಧೇಯಕ ಅಂಗೀಕಾರದ ನಂತರ ಸ್ವಯಂ ಪ್ರೇರಿತರಾಗಿ ರಾಜೀನಾಮೆ ಸಲ್ಲಿಸಿ, ಸ್ಪೀಕರ್‌ ಹುದ್ದೆಯ ವಿದಾಯ ಭಾಷಣ ಮಾಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತೀರ್ಪಿನಲ್ಲಿ ಪಕ್ಷಪಾತ ಮಾಡಿಲ್ಲ

ಬೆಂಗಳೂರು: ‘ನಾನು ತೀರ್ಪು ನೀಡುವಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ. ಹಿಂದಿನ ಎಲ್ಲ ಚರಿತ್ರಾರ್ಹ ತೀರ್ಪು, ಆಯಾಮಗಳನ್ನು ಗಮನಿಸಿ ಈ ತೀರ್ಪು ನೀಡಿದ್ದೇನೆ’ ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಪಕ್ಷಾಂತರ ನಿಷೇಧದ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಸ್ಪೀಕರ್‌ಗಳು ತೆಗೆದುಕೊಂಡ ತೀರ್ಮಾನ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶರದ್‌ ಯಾದವ್‌ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಪು, ರವಿ ನಾಯ್ಕ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿನ ತೀರ್ಪು ಹಾಗೂ ತಮಿಳುನಾಡಿನಲ್ಲಿ ಎಐಎಡಿಎಂಕೆ ಶಾಸಕರು ರಾಜೀನಾಮೆ ಸಲ್ಲಿಸಿ ರಾಜ್ಯಪಾಲರ ಬಳಿ ತೆರಳಿದ ನಂತರ ಅಲ್ಲಿನ ಸ್ಪೀಕರ್‌ ತೆಗೆದುಕೊಂಡ ತೀರ್ಪು ಆಧರಿಸಿ 14 ಶಾಸಕರನ್ನು ಅನರ್ಹಗೊಳಿಸುವುದಾಗಿ ಹೇಳಿದರು.

ಅನರ್ಹಗೊಂಡ ಶಾಸಕರದ್ದು ಏನಾದರೂ ಆಕ್ಷೇಪಗಳಿದ್ದರೆ, ಅವರು ಕೋರ್ಟ್‌ ಮುಂದೆ ತಮ್ಮ ವಾದ ಮಾಡಲು ಅವಕಾಶವಿದೆ. ನನಗಿರುವ ಅಧಿಕಾರ ಹಾಗೂ ಕಾನೂನಿನ ಮಾಹಿತಿಯಡಿಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಅವರ ಮುಂದಿನ ಹೋರಾಟದ ಬಗ್ಗೆ ನಾನು ಮಾತನಾಡುವುದಿಲ್ಲ. ಅದಕ್ಕೆ ಕೋರ್ಟ್‌ಗಳಿವೆ ಎಂದರು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.