JDS ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ: ಜಮೀರ್
Team Udayavani, Nov 2, 2021, 1:34 PM IST
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ. ಕಾಂಗ್ರೆಸ್ ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಆಗಿದ್ದ ಮುಖಂಡನನ್ನು ಕರೆದುಕೊಂಡು ಹೋಗಿ ನಿಲ್ಲಿಸಿ ಆತನ ನಾಯಕತ್ವ ಹಾಳು ಮಾಡಿದರು ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಉಪ ಚುನಾವಣೆ ಫಲಿತಾಂಶದ ಕುರಿತಾಗಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ನಡೆಸಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಎಲ್ಲ ನಾಯಕರೂ ಶ್ರಮ ಹಾಕಿದರು ಎಂದರು.
ಇದನ್ನೂ ಓದಿ:ಮತದಾರ ಬದಲಾವಣೆ ಬಯಸಿದ್ದಾನೆ, ಉಪಚುನಾವಣೆ ಫಲಿತಾಂಶವೇ ಸಾಕ್ಷಿ: ಡಿಕೆ ಶಿವಕುಮಾರ್
ಸಿಂದಗಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ 40 ಸಾವಿರ ಮತ ಹೆಚ್ಚು ಪಡೆದಿದೆ. ಜೆಡಿಎಸ್ ಅಲ್ಲೂ ಅಲ್ಪಸಂಖ್ಯಾತ ಮಹಿಳೆಯನ್ನು ಬಲಿಪಶು ಮಾಡಿದೆ. ಜೆಡಿಎಸ್ ನಂಬಿದರೆ ಕಷ್ಟ ಎನ್ನುವುದು ಅರ್ಥವಾಗಿದೆ. ಅಲ್ಪಸಂಖ್ಯಾತ ಸಮುದಾಯ ಈ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದು ಜಮೀರ್ ಅಹಮದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.