ಈ ಬಾರಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ: ಶಿಕ್ಷಣ ಇಲಾಖೆ
Team Udayavani, Nov 15, 2022, 6:25 AM IST
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಪ್ರಸಕ್ತ ವರ್ಷದಿಂದ ಪುನರಾರಂಭಿಸಲು ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆ ನವೀಕರಿಸಿಕೊಂಡಿರುವ ಖಾಸಗಿ ಶಾಲೆಗಳು ಮಾತ್ರ ಪ್ರವಾಸ ಕೈಗೊಳ್ಳಬಹುದಾಗಿದೆ. ಮಾನ್ಯತೆ ನವೀಕರಿಸಿಕೊಳ್ಳದ ಶಾಲೆಗಳಿಗೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲು ಅವಕಾಶ ನೀಡಲಿಲ್ಲ. ಪ್ರವಾಸದ ಸಮಯದಲ್ಲಿ ಅವಘಡ ಸಂಭವಿಸಿದರೆ ಶಾಲೆಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.
ಶಾಲಾ ದಿನಗಳಲ್ಲಿ ಪ್ರವಾಸ ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ದಿನ ಅಥವಾ ರವಿವಾರ ಶಾಲೆ ನಡೆಸಿ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸಬೇಕು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರುವ ಸ್ಥಳಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ್ ಬಳಿಕ ಶೈಕ್ಷಣಿಕ ಚಟುವಟಿಕೆಗಳತ್ತ ಗಮನಹರಿಸಬೇಕೆಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.