ಎಸ್‌ಡಿಪಿಐ-ಪಿಎಫ್‌ಐ ಶಾಶ್ವತ ನಿಷೇಧಕ್ಕೆ ಚಿಂತನೆ
Team Udayavani, Jan 19, 2020, 3:05 AM IST
ಶಿವಮೊಗ್ಗ: ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಯ ಶಾಶ್ವತ ನಿಷೇಧಕ್ಕೆ ಮೊದಲಿನಿಂದಲೂ ಚಿಂತನೆ ನಡೆದಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್‌ಡಿಪಿಐ ಮತ್ತು ಪಿಎಫ್‌ಐ ದೇಶದ್ರೋಹಿ ಸಂಘಟನೆಗಳು ಎಂದು ಮತ್ತೂಮ್ಮೆ ರುಜುವಾತಾಗಿದೆ ಎಂದರು.
ಈ ಸಂಘಟನೆಗಳಿಗೆ ಸೇರಿದವರು ಸಂಸದ ತೇಜಸ್ವಿ ಸೂರ್ಯ ಮತ್ತು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಕೊಲೆಗೆ ಸಂಚು ರೂಪಿಸಿದ್ದರು. ಮಡಿಕೇರಿಯಲ್ಲಿ ಕುಟ್ಟಪ್ಪನವರ ಕೊಲೆಯಾದಾಗಿನಿಂದ ಈ ಸಂಘಟನೆಗಳನ್ನು ಬಿಜೆಪಿ ವಿರೋ ಧಿಸುತ್ತಾ ಬಂದಿದೆ. ಬೆಂಗಳೂರಿನಲ್ಲಿ ರುದ್ರೇಶ್ ಕೊಲೆಯಾದಾಗಲೂ ಎಸ್‌ಡಿಪಿಐ ಕೈವಾಡವಿದೆ ಎಂದು ಹೇಳಲಾಗಿತ್ತು.
ಈಗ ಇದು ಮತ್ತೂಮ್ಮೆ ರುಜುವಾತಾಗಿದೆ. ಹಾಗಾಗಿ ದೇಶದ್ರೋಹಿ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿ ಸುವ ಅಗತ್ಯವಿದೆ ಎಂದು ಹೇಳಿದರು. ಪಠ್ಯ-ಪುಸ್ತಕದಿಂದ ಟಿಪ್ಪು ವಿಷಯ ಕೈಬಿಡುವ ಕುರಿತು ಡಿಎಸ್‌ಇಆರ್‌ಟಿ ಮತ್ತು ಇತಿಹಾಸ ತಜ್ಞರ ಸಮಿತಿ ವರದಿ ನೀಡಿದೆ. ಭಾನುವಾರ ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಪ್ರತಿ ವರ್ಷ ಆಗಸ್ಟ್-ಸೆಪ್ಟಂಬರ್ ಹೊತ್ತಿಗೆ ಶಾಲೆಗಳಲ್ಲಿ ಪಠ್ಯ ಪುಸ್ತಕ ಲಭಿಸುವಂತಾಗುತ್ತಿತ್ತು. ಆದರೆ ಈ ಬಾರಿ ಈಗಾಗಲೇ ಪಠ್ಯಪುಸ್ತಕ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. 2020-21ನೇ ಸಾಲಿನ ಪಠ್ಯಪುಸ್ತಕ ತಯಾರಿಕೆಗೆ ಟೆಂಡರ್ ಕರೆದಾಗಿದೆ. ಶೈಕ್ಷಣಿಕ ವರ್ಷದ ಶಾಲಾರಂಭದ ಮೊದಲ ದಿನ ಮಕ್ಕಳು ಶಾಲೆಗೆ ಬಂದಾಗ ಅವರಿಗೆ ಪಠ್ಯಪುಸ್ತಕ ಮತ್ತು ಯೂನಿಫಾರಂ ಅನ್ನು ನೀಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.