ಜಯಂತಿಗಳ ವಿಲೀನಕ್ಕೆ ಚಿಂತನೆ
Team Udayavani, Jun 21, 2019, 5:09 AM IST
ಬೆಂಗಳೂರು: ಸಾರ್ವಜನಿಕರಿಂದ ನಿರಾಸಕ್ತಿಗೊಳಗಾಗಿರುವ ಸರ್ವಜ್ಞ ಜಯಂತಿ, ಮಹಾವೀರ ಜಯಂತಿ, ಅಕ್ಕಮಹಾದೇವಿ ಜಯಂತಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ, ವಿಶ್ವಮಾನವ ಜಯಂತಿ, ಕಾಯಕ ಶರಣರ ಜಯಂತಿಗಳನ್ನು ಒಗ್ಗೂಡಿಸಿ ಒಂದೇ ದಿನ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಂತನೆ ನಡೆಸಿದೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ಗುರುವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿಲುವು ವ್ಯಕ್ತವಾಗಿದೆ.
ಮಹಾಪುರುಷರ ಜಯಂತಿ ಆಚರಣೆ ಸಂದರ್ಭದಲ್ಲಿ ಆಯಾ ಸಮುದಾಯ ಹಾಗೂ ಸಾರ್ವಜನಿಕರು ನಿರುತ್ಸಾಹ ತೋರುತ್ತಿರುವ ಹಿನ್ನೆಲೆಯಲ್ಲಿ ಏಳು ಮಹಾನುಭಾವರ ಜಯಂತಿಗಳನ್ನು ಒಂದೇ ದಿನ ಆಚರಿಸುವ ಸಂಬಂಧ ಎಲ್ಲ ಶಾಸಕರು, ಚಿಂತಕರು, ಸಾಹಿತಿಗಳು, ಗಣ್ಯರು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
ಈ ಕಾರ್ಯಕ್ರಮಗಳಿಗೆ ಬೆರಳೆಣಿಕೆ ಮಂದಿಯೂ ಬಾರದೇ ಜಯಂತಿಗೆ ಮೀಸಲಾದ ಸಾರ್ವಜನಿಕ ಹಣ ಪೋಲಾ ಗುತ್ತಿರುವ ಹಿನ್ನೆಲೆ ಎಲ್ಲ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಅಲ್ಲಿನ ಶಾಲಾ-ಕಾಲೇಜುಗಳಲ್ಲಿ ಆ ಮಹಾನುಭಾವರ ಬಗ್ಗೆ ಪ್ರಬಂಧ, ಚರ್ಚಾಕೂಟ, ನಾಟಕ ಸ್ಪರ್ಧೆಗಳನ್ನು ಏರ್ಪಡಿಸಿ, ಅವರ ಬಗ್ಗೆ ಮತ್ತಷ್ಟು ಪ್ರಚುರಪಡಿಸುವ ಉದ್ದೇಶ ಹೊಂದಲಾಗಿದೆ. ಈ ಕಾರ್ಯಕ್ರಮಗಳಿಗೆ ನಿಗದಿ ಆಗಿರುವ ಹಣವನ್ನು ಅದೇ ಉದ್ದೇಶಕ್ಕೆ ಪರಿಣಾಮಕಾರಿಯಾಗಿ ಬಳಸಲು ಯೋಚನೆ ಇಲಾಖೆ ಚಿಂತನೆ ನಡೆಸಿದೆ.
ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ನಾನಾ ಕ್ಷೇತ್ರಗಳ ಅಯಾ ಜಿಲ್ಲೆಯ ಪ್ರಾಕಾರಗಳಲ್ಲಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸಲು ವೇದಿಕೆ ಕಲ್ಪಿಸುವ ಉದ್ದೇಶದೊಂದಿಗೆ ‘ಕರ್ನಾಟಕ ಸಂಸ್ಕೃತಿ’ ಎಂಬ ನೂತನ ಕಾರ್ಯಕ್ರಮವನ್ನು ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ವಿಧಾನಸಭೆ ಕ್ಷೇತ್ರದ ಮಟ್ಟದಲ್ಲಿ ಕನ್ನಡ ಸಂಸ್ಕೃತಿ, ನಾಟಕ, ಕಲೆ, ಸಂಗೀತ, ನಾಟ್ಯ ಮತ್ತಿತರ ರಂಗಗಳ ಅಯಾ ಜಿಲ್ಲೆಯ ಪ್ರಾಕಾರಗಳಲ್ಲಿ 18 ವರ್ಷದ ಒಳಗೆ ಮತ್ತು ಮೇಲ್ಪಟ್ಟವರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡುವುದು. ಜತೆಗೆ, ಅಲ್ಲಿ ವಿಜೇತರಾದವರಿಗೆ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ, ಅಂತಿಮ ವಿಜೇತರನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಪರಿಗಣಿಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಸಚಿವರ ಸಂಸದೀಯ ಕಾರ್ಯದರ್ಶಿ ಗೋಪಾಲಸ್ವಾಮಿ, ಇಲಾಖೆ ನಿರ್ದೇಶಕಿ ಜಾನಕಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.