ಮೂರು ಉತ್ಸವಕ್ಕೆ ರಾಷ್ಟ್ರೀಯ ಮಾನ್ಯತೆ ನೀಡಲು ಚಿಂತನೆ
Team Udayavani, Mar 7, 2020, 3:04 AM IST
ವಿಧಾನಪರಿಷತ್: ನಾಡಹಬ್ಬ ದಸರಾ, ಹಂಪಿ ಉತ್ಸವ ಹಾಗೂ ಬೆಂಗಳೂರು ಹಬ್ಬವನ್ನು ರಾಷ್ಟ್ರೀಯ ಉತ್ಸವದ ಮಾದರಿಯಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಹಂಪಿ ಉತ್ಸವಕ್ಕೆ ಸಂಬಂಧಿಸಿದಂತೆ ಸದಸ್ಯರಾದ ಅಲ್ಲಂ ವೀರಭದ್ರಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ದಸರಾ, ಹಂಪಿ ಉತ್ಸವ ಹಾಗೂ ಬೆಂಗಳೂರು ಹಬ್ಬವನ್ನು ರಾಷ್ಟ್ರೀಯ ಉತ್ಸವದ ರೀತಿಯಲ್ಲಿ ನಡೆಸಲು ಮುಂದಾಗಿದ್ದೇವೆ.
ಹಂಪಿ ಉತ್ಸವ ಅನೇಕ ವರ್ಷದಿಂದ ನಡೆಯುತ್ತಿದೆಯಾದರೂ ನಿಗದಿತ ದಿನಾಂಕದಂದು ನಡೆ ಯುತ್ತಿರಲಿಲ್ಲ. ಕೆಲವು ವರ್ಷ ನಡೆಯದ ನಿದರ್ಶನವೂ ಇದೆ. ಹೀಗಾಗಿ ಪ್ರತಿ ವರ್ಷ ಕೃಷ್ಣದೇವರಾಯನ ಪಟ್ಟಾಭಿ ಷೇಕವಾದ ದಿನ ಜ.10ರಿಂದ 3 ದಿನ ಹಂಪಿ ಉತ್ಸವ ನಡೆ ಸಲು ನಿರ್ಧರ ಮಾಡಿದ್ದೇವೆಂದರು.
ಹಾಗೆಯೇ ರಾಜ್ಯದ ಪ್ರಮುಖ ಮಹಾರಾಜ ಸಂಸ್ಥಾನಗಳಾದ ಕಲ್ಯಾಣ ಚಾಲುಕ್ಯರು, ಬಾದಾಮಿ ಚಾಲುಕ್ಯರು, ಕದಂಬರು, ಚಿತ್ರದುರ್ಗ ನಾಯಕರು ಸೇರಿದಂತೆ 9 ರಾಜ್ಯ ಉತ್ಸವ ನಡೆಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಹಂಪಿಯಲ್ಲಿ ರೋಪ್ ವೇ ಅಥವಾ ಇತರೆ ಅಭಿವೃದ್ಧಿ ಕಾರ್ಯಕ್ಕೆ ಜಾಗತಿಕ ಮಟ್ಟದ ಅನುಮತಿ ಅಗತ್ಯವಿರುವು ದರಿಂದ ವಿಶ್ವ ಪ್ರಸಿದ್ಧ ತಾಣವಾಗಿದ್ದರಿಂದ ಅನುಮತಿ ಸಿಕ್ಕ ನಂತರ ಈ ಬಗ್ಗೆ ಚಿಂತನೆ ನಡೆಸಲಿದ್ದೇವೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.