ದಲಿತ ಮಹಿಳೆಯರ ಅಭಿವೃದ್ಧಿಗೆ ಸಮ್ಮಾನ್; ರಾಜ್ಯ ಸರಕಾರದಿಂದ ಹೊಸ ಯೋಜನೆ ಜಾರಿಗೆ ಚಿಂತನೆ
Team Udayavani, Apr 11, 2022, 7:25 AM IST
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಉಳಿಸಿ ಕೊಳ್ಳುವುದಕ್ಕಾಗಿ ಬಿಜೆಪಿ ಈಗಾಗಲೇ ಹಲವಾರು ಕಾರ್ಯ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದೇ ಹಿನ್ನೆಲೆಯಲ್ಲಿ ಹಿಂದೂ ಮತಗಳನ್ನು ಒಗ್ಗೂಡಿಸಲು ಪ್ರಯತ್ನ ನಡೆಸಿದೆ. ಇದರ ಜತೆಗೆ ಕಾಂಗ್ರೆಸ್ ನಂಬಿಕೊಂಡಿರುವ ದಲಿತ ಮತಗಳನ್ನು ಸೆಳೆಯಲು ಯೋಜನೆ ರೂಪಿಸುತ್ತಿದೆ.
ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ಮಾದರಿಯಲ್ಲೇ “ದಲಿತ ಮಹಿಳಾ ಸಮ್ಮಾನ್’ ಯೋಜನೆ ಜಾರಿಗೆ ತರಬೇಕೆಂಬ ಇರಾದೆ ರಾಜ್ಯ ಬಿಜೆಪಿ ನಾಯಕರಲ್ಲಿದೆ.
ದಲಿತ ಮಹಿಳಾ ಸಮ್ಮಾನ್ ಯೋಜನೆ
ಕಿಸಾನ್ ಸಮ್ಮಾನ್ ಮಾದರಿಯಲ್ಲಿ ರಾಜ್ಯದಲ್ಲಿ ತುಳಿತ ಕ್ಕೊಳಗಾಗಿರುವ ಮತ್ತು ಅತ್ಯಂತ ಹಿಂದುಳಿದಿರುವ ದಲಿತ ಮಹಿಳೆಯರ ಶ್ರೇಯೋಭಿವೃದ್ಧಿಗೆ ದಲಿತ ಮಹಿಳಾ ಸಮ್ಮಾನ್ ಯೋಜನೆ ಜಾರಿಗೆ ತರಬೇಕು ಎಂದು ಪಕ್ಷದ ವ್ಯಾಪ್ತಿಯಲ್ಲಿ ಚರ್ಚೆ ಆರಂಭವಾಗಿದೆ. ಬಿಜೆಪಿಯ ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ಕೆಲವು ಯುವ ಶಾಸಕರು ಬಜೆಟ್ ಸಂದರ್ಭದಲ್ಲಿ ಸರಕಾರ ಮತ್ತು ಪಕ್ಷಕ್ಕೆ ಈ ಬಗ್ಗೆ ಸಲಹೆ ನೀಡಿದ್ದಾರೆ.
ಏನಿದು ಯೋಜನೆ?
ರಾಜ್ಯ ಸರಕಾರವು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ ಪ್ರತೀ ವರ್ಷ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಜನಸಂಖ್ಯೆಗೆ ಅನು ಗುಣ ವಾಗಿ ರಾಜ್ಯದ ಒಟ್ಟು ಬಜೆಟ್ ಗಾತ್ರದ ಶೇ. 24.01ರಷ್ಟು ಅನುದಾನವನ್ನು ಈ ಸಮುದಾಯಗಳಿಗೆ ಪ್ರತ್ಯೇಕವಾಗಿ ಇರಿಸ ಲಾಗಿದೆ. 2022-23ನೇ ಸಾಲಿನ ಬಜೆಟ್‌ನಲ್ಲಿ ಈ ಯೋಜನೆ ಅಡಿ 28, 307 ಕೋಟಿ ರೂ. ಮೀಸಲಿಡಲಾಗಿದೆ.
ಅಲ್ಲದೆ ಅನುಸೂಚಿತ ಜಾತಿಗಳ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಅನುಸೂಚಿತ ಬುಡಕಟ್ಟುಗಳ ಉಪ ಯೋಜನೆ (ಟಿಎಸ್‌ಪಿ) ಕಾಯ್ದೆ ಅಡಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದರೂ ಅತ್ಯಂತ ಕೆಳ ಸ್ತರದಲ್ಲಿರುವ ದಲಿತ ಮಹಿಳೆರಿಗೆ ಈ ಯೋಜನೆಗಳು ತಲುಪದೆ ಆ ವರ್ಗ ನಿರಂತರ ಅನ್ಯಾಯಕ್ಕೊಳಗಾಗುತ್ತಿದೆ ಎಂದು ಬಿಜೆಪಿ ಶಾಸಕರು ಕಂಡುಕೊಂಡಿದ್ದಾರೆ.
ಯಾಕೆ ಈ ಯೋಜನೆ?
ಬಿಜೆಪಿ ಶಾಸಕರ ಪ್ರಕಾರ ಈ ಯೋಜನೆ ಜಾರಿಯಿಂದ ಎರಡು ರೀತಿಯ ಅನುಕೂಲಗಳಿವೆ. ದಲಿತ ಮಹಿಳೆಗೆ ಆರ್ಥಿಕ ಶಕ್ತಿ ಇಲ್ಲದಿರುವುದು ಹಿಂದುಳಿಯುವಿಕೆಗೆ ಕಾರಣವಾಗಿದ್ದು, ಆರ್ಥಿಕ ಶಕ್ತಿ ನೀಡಿದರೆ ಅವರ ಜೀವನೋಪಾಯಕ್ಕೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ಅಲ್ಲದೆ ದಲಿತ ಮಹಿಳೆಯರಲ್ಲಿ ರಕ್ತಹೀನತೆ ಹೆಚ್ಚಿದ್ದು, ಅದನ್ನು ಕಡಿಮೆ ಮಾಡಲು,ದಲಿತ ಮಹಿಳೆಯರ ವಲಸೆಯನ್ನು ತಪ್ಪಿಸಲು ಈ ಯೋಜನೆಯಿಂದ ಅನುಕೂಲವಾಗ ಲಿದೆ ಎಂಬ ಅಭಿಪ್ರಾಯ ಇದೆ. ಆದರೆ ಬಿಜೆಪಿಯ ಒಂದು ವರ್ಗ ಈ ರೀತಿಯ ಉಚಿತ ಯೋಜನೆಗಳನ್ನು ನೀಡುವ ಬಗ್ಗೆ ಆಕ್ಷೇಪ ಹೊಂದಿದೆ ಎಂಬ ಮಾತಿದೆ.
ಸಮಾಜದಲ್ಲಿ ಹಿಂದುಳಿದಿರುವ ದಲಿತ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ನೇರ ನಗದು ಯೋಜನೆಯನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದೇನೆ. ಇದನ್ನು ಸಿಎಂ ಮತ್ತು ಸಮಾಜ ಕಲ್ಯಾಣ ಸಚಿವರ ಗಮನಕ್ಕೆ ತಂದಿದ್ದೇನೆ. ಪಕ್ಷ ಮತ್ತು ಸರಕಾರದ ಹಂತದಲ್ಲಿ ಚರ್ಚೆಯಾಗಿ ಅಂತಿಮ ತೀರ್ಮಾನವಾಗಲಿದೆ.
ಎ.ಎಸ್. ಪಾಟೀಲ್ ನಡಹಳ್ಳಿ, ಬಿಜೆಪಿ ಶಾಸಕ
ರಾಜಕೀಯ ಲಾಭ
ಕಾಂಗ್ರೆಸ್ ದಲಿತ ಪರ ಎಂದು ಹೇಳುತ್ತ ಬಂದಿದೆ. ಆದರೆ ಇದುವರೆಗೆ ದಲಿತ ಮಹಿಳೆ ಯ ರನ್ನು ಮುಖ್ಯವಾಹಿನಿಗೆ ತರಲು ಆಗಿಲ್ಲ. ಕಾರಣ ಅವರಿಗೆ ಸರಕಾರದ ಯೋಜನೆಗಳು ತಲುಪುತ್ತಿಲ್ಲ. ಈ ವರ್ಗಕ್ಕೆ ನೇರವಾಗಿ ಯೋಜನೆ ತಲುಪಿಸಿದರೆ ಅವರು ಬಿಜೆಪಿ ಬಗ್ಗೆ ಒಲವು ತೋರಿ, ಚುನಾವಣೆಗಳಲ್ಲಿ ಅನುಕೂಲವಾಗಬಹುದು ಎಂಬುದು ಬಿಜೆಪಿ ಆಲೋಚನೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.