ಸಾವಿರ ಮೆ.ವ್ಯಾ. ವಿದ್ಯುತ್‌ ಖರೀದಿಗೆ ನಿರ್ಧಾರ

Team Udayavani, Jul 13, 2017, 2:45 AM IST

dk.jpg

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಭಾವ, ಜೊತೆಗೆ ಕಲ್ಲಿದ್ದಲು ಕೊರತೆ ವಿದ್ಯುತ್‌ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಒಂಬತ್ತು ತಿಂಗಳ ಅವಧಿಗೆ 1,000 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಬೇಡಿಕೆ ಇರುವಷ್ಟು ವಿದ್ಯುತ್‌ ಉತ್ಪಾದನೆಯಾಗುತ್ತಿದೆಯಾದರೂ ಮೂರು ತಿಂಗಳ ಬಳಿಕ ಉತ್ಪಾದನೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ವಿದ್ಯುತ್‌ ಖರೀದಿ ಸಂಬಂಧ ಸದ್ಯದಲ್ಲೇ ಟೆಂಡರ್‌ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ “ವಿದ್ಯುತ್‌ ಸ್ಥಿತಿಗತಿ’ ಪರಾಮರ್ಶೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್‌, ಪ್ರಸಕ್ತ ವರ್ಷದಲ್ಲಿ ಈವರೆಗಿನ ಮಳೆಯ ಪ್ರಮಾಣ ಕಳೆದ 3 ವರ್ಷಗಳಲ್ಲಿ ಇದೇ ಅವಧಿಯಲ್ಲಿನ ಮಳೆಯ ಪ್ರಮಾಣಕ್ಕಿಂತ ಕಡಿಮೆ ಇದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತುರ್ತು ನಿರ್ವಹಣೆ ಉದ್ದೇಶಕ್ಕಾಗಿ 1,000 ಮೆ.ವ್ಯಾ. ಅಲ್ಪಾವಧಿ ವಿದ್ಯುತ್‌ ಖರೀದಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಳಕೆಯಾಗುವ ವಿದ್ಯುತ್‌ನಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಶೇ.39ರಷ್ಟು ವಿದ್ಯುತ್‌ ಪೂರೈಸಲಾಗುತ್ತಿದ್ದು, ಇದಕ್ಕಾಗಿ ಸುಮಾರು 10,000 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ಬಳ್ಳಾರಿಯ ಬಿಟಿಪಿಎಸ್‌ ಘಟಕವು ನೀರಿನ
ಕೊರತೆಯಿಂದ ಉತ್ಪಾದನೆ ಸ್ಥಗಿತಗೊಳಿಸಿದೆ. ರಾಜ್ಯದ ಜಲಾಶಯಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ನೀರು
ಸಂಗ್ರಹವಾಗಿಲ್ಲ. ದೂರದ ಪ್ರದೇಶದಿಂದ ಕಲ್ಲಿದ್ದಲು ತರಬೇಕಿದ್ದು, ಉತ್ಪಾದನೆಯಲ್ಲಿ ವ್ಯತ್ಯಯಗಳಾಗುತ್ತಿವೆ ಎಂದು ಅವರು ವಿಷಾದಿಸಿದರು.

ಸದ್ಯದ ಸ್ಥಿತಿಗತಿ: ಕಳೆದ ಬೇಸಿಗೆಯಲ್ಲಿ 10,000 ಮೆ. ವ್ಯಾ.ವರೆಗೆ ಬೇಡಿಕೆ ಏರಿಕೆಯಾಗಿತ್ತು. ಸದ್ಯ 8,300 ರಿಂದ 8,500 ಮೆ.ವ್ಯಾ.ನಷ್ಟು ಬೇಡಿಕೆಯಿದೆ. ಆದರೆ, ಪೂರೈಕೆ ಪ್ರಮಾಣ 9,375 ಮೆ.ವ್ಯಾ.ನಷ್ಟಿದೆ. ಮೂರು ತಿಂಗಳ ಬಳಿಕ ಪೂರೈಕೆ ಪ್ರಮಾಣ ತಗ್ಗಲಿದ್ದು, ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಜಲವಿದ್ಯುತ್‌ ಘಟಕಗಳಿಂದ ನಿತ್ಯ ಸುಮಾರು 1,200 ಮೆ.ವ್ಯಾ. ವಿದ್ಯುತ್‌ ಪೂರೈಕೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ಖರೀದಿಗೆ ನಿರ್ಧರಿಸಲಾಗಿದೆ. ವರ್ಷದೊಳಗೆ ಸೌರಘಟಕಗಳಿಂದ 1,000 ಮೆಗಾವ್ಯಾಟ್‌ ವಿದ್ಯುತ್‌ ಸೇರ್ಪಡೆಯಾಗಲಿದೆ ಎಂದು ಸಚಿವರು ತಿಳಿಸಿದರು. ಛತ್ತೀಸ್‌ಗಢದ ಗೋದ್ನಾ ಗಣಿಯಿಂದ ಕಲ್ಲಿದ್ದಲು ಸಾಗಣೆಗೆ ಲಿಂಕೇಜ್‌ ಸಿಕ್ಕಿದ್ದು, ಯಾವ ಘಟಕಕ್ಕಾದರೂ ಬಳಸಲು ಅವಕಾಶವಿದೆ. ಇದರಿಂದ ಅಗತ್ಯವಿರುವ ಕಡೆ ಕಲ್ಲಿದ್ದಲು ಬಳಸಲು ಅನುಕೂಲವಾಗಲಿದೆ. ಹೊರ ರಾಜ್ಯದಲ್ಲಿ ಕಲ್ಲಿದ್ದಲು
ಗಣಿಗಾರಿಕೆ ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ವಾರ್ಷಿಕವಾಗಿ 600 ಕೋಟಿ
ರೂ.ನಷ್ಟವಾಗುತ್ತಿದೆ ಎಂದು ಅವರು ಹೇಳಿದರು. 

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.