Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
ಅಮಾಯಕನ ಫೋನ್ ಬಳಸಿಕೊಂಡಿದ್ದ ಸೊಹೇಲ್ ಪಾಷಾ... ಜನಪ್ರಿಯನಾಗಲು ಕೃತ್ಯ!!
Team Udayavani, Nov 13, 2024, 11:01 AM IST
ಮುಂಬಯಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿ 5 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಉದಯೋನ್ಮುಖ ಗೀತರಚನೆಕಾರನನ್ನು ರಾಯಚೂರಿನ ಮಾನ್ವಿಯಲ್ಲಿ ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಸೊಹೇಲ್ ಪಾಷಾ ಎಂಬಾತನಾಗಿದ್ದು, ಈತ ತಾನು ಬರೆದ ಹಾಡೊಂದು ಪ್ರಸಿದ್ಧಿಯಾಗಬೇಕೆಂದು ಬಯಸಿ ಈ ತಂತ್ರ ಬಳಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ನವೆಂಬರ್ 7 ರಂದು ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಸಂದೇಶಗಳನ್ನು ಕಳುಹಿಸಿದ್ದು, ಸಲ್ಮಾನ್ ಖಾನ್ 5 ಕೋಟಿ ರೂ. ಪಾವತಿಸದಿದ್ದರೆ ಅವರನ್ನು ಹತ್ಯೆ ಗೈಯಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು.ಮಾತ್ರವಲ್ಲದೆ “ಮೈ ಸಿಕಂದರ್ ಹೂ” ಹಾಡಿನ ಬರಹಗಾರನನ್ನು ಸಹ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಅಮಾಯಕನ ಫೋನ್ ಬಳಕೆ
ಮುಂಬೈ ಪೊಲೀಸರ ಅಪರಾಧ ವಿಭಾಗವು ರಾಯಚೂರಿನಿಂದ ಸಂದೇಶಗಳು ಬಂದ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ತಂಡ ರಾಯಚೂರಿಗೆ ಬಂದು ನಂಬರ್ ಹೊಂದಿರುವ ವೆಂಕಟೇಶ್ ನಾರಾಯಣ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ನಾರಾಯಣ್ ಅವರ ಮೊಬೈಲ್ ಫೋನ್‌ಗೆ ಇಂಟರ್ನೆಟ್ ಸೌಲಭ್ಯ ಇರಲಿಲ್ಲ.ಫೋನ್‌ಗೆ ವಾಟ್ಸಾಪ್ ಇನ್‌ಸ್ಟಾಲೇಶನ್ ಒಟಿಪಿ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದರು. ನವೆಂಬರ್ 3 ರಂದು ಮಾರುಕಟ್ಟೆಯೊಂದರಲ್ಲಿ ಅಪರಿಚಿತರು ತಮ್ಮ ಬಳಿಗೆ ಬಂದು ಕರೆ ಮಾಡಲು ಫೋನ್ ನೀಡಬಹುದೇ ಎಂದು ಕೇಳಿದ್ದರು ಎಂದು ನಾರಾಯಣ್ ಪೊಲೀಸರಿಗೆ ತಿಳಿಸಿದ್ದಾರೆ. ಒಟಿಪಿ ಪಡೆಯಲು ನಾರಾಯಣ್ ಅವರ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ವ್ಯಕ್ತಿ ತನ್ನ ಸ್ವಂತ ಮೊಬೈಲ್‌ನಲ್ಲಿ ವಾಟ್ಸಾಪ್ ಬಳಸಿಕೊಂಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಂತರ ಕಾರ್ಯಾಚರಣೆ ಮುಂದುವರಿಸಿ ಮಾನ್ವಿಯಲ್ಲಿ ಅಪರಾಧ ವಿಭಾಗದ ತಂಡ ಸೊಹೇಲ್ ಪಾಷಾನನ್ನು ಬಂಧಿಸಿ ಮುಂಬಯಿಯ ವರ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿ ಕರ್ನಾಟಕದಲ್ಲಿ ಬಂಧನಕ್ಕೆ ಒಳಗಾದ ಎರಡನೇ ಆರೋಪಿ ಈತನಾಗಿದ್ದು , ಈ ಹಿಂದೆ ಪ್ರತ್ಯೇಕವಾಗಿ ಬೆದರಿಕೆ ಹಾಕಿದ್ದ ರಾಜಸ್ಥಾನ ಮೂಲದ ಭಿಕಾರಾಂ ಜಲಾರಾಂ ಎಂಬಾತನ ಹಾವೇರಿಯಲ್ಲಿ ಮುಂಬೈ ಪೊಲೀಸರು ಬಂಧನ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.