ಹಿಜಾಬ್ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ
Team Udayavani, Mar 23, 2022, 12:17 PM IST
ಬೆಂಗಳೂರು: ಹಿಜಾಬ್ ಕುರಿತು ತೀರ್ಪು ನೀಡಿದ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಮಿಳುನಾಡು ಪೊಲೀಸರಿಂದ ಬಂಧನಕ್ಕೊಳಗಾದ ತೌಹಿದ್ ಜಮಾದ್ ಮುಸ್ಲಿಂ ಸಂಘಟನೆ ಮುಖಂಡನನ್ನು ವಿಧಾನಸೌಧ ಠಾಣೆ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡಿನ ತಿರುಪತ್ತೂರು ಜೈಲಿನಿಂದ ಬಾಡಿ ವಾರೆಂಟ್ ಪಡೆದು ರೆಹಮತ್ ಉಲ್ಲಾನನ್ನು ಮಂಗಳವಾರ ನಗರಕ್ಕೆ ತಂದ ಪೊಲೀಸರು, 37ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿ 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ-ಕಾಲೇಜು ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಆದೇಶಿಸಿತ್ತು. ಅದರ ಬೆನ್ನಲ್ಲೇ ತಮಿಳುನಾಡಿನ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೌಹೀದ್ ಜಮಾದ್ ಮುಸ್ಲಿಂ ಸಂಘಟನೆ ಮುಖಂಡ ರೆಹಮತ್ ಉಲ್ಲಾ ಕರ್ನಾಟಕ ಹೈಕೋರ್ಟ್‌ನ ಹಿಜಾಬ್ ಕುರಿತು ತೀರ್ಪು ಉಲ್ಲೇಖೀಸಿ, ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಪರೋಕ್ಷವಾಗಿ ಬೇದರಿಕೆ ಹಾಕಿದ್ದ.
ಈ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೊ ಆಧರಿಸಿ ವಕೀಲ ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿತ್ತು. ನ್ಯಾಯಮೂರ್ತಿಗಳಿಗೆ ಬೆದರಿಕೆ ಸಂಬಂಧ ತಮಿಳುನಾಡು ಪೊಲೀಸರು ರೆಹಮತ್ ಉಲ್ಲಾನನ್ನು ಬಂಧಿಸಿ ತಿರುಪತ್ತೂರು ಜೈಲಿಗೆ ಕಳುಹಿಸಿದ್ದರು. ಹೀಗಾಗಿ ವಿಧಾನಸೌಧ ಠಾಣೆ ಪೊಲೀಸರು, ಬಾಡಿ ವಾರೆಂಟ್ ಪಡೆದು ಆರೋಪಿಯನ್ನು ನಗರಕ್ಕೆ ಕರೆತಂದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.