ಹೆಂಡತಿ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್ ಮೇಲ್ ಮಾಡಿದ ವ್ಯಕ್ತಿಯ ಹತ್ಯೆ: ಮೂವರು ಅರೆಸ್ಟ್
Team Udayavani, Jul 12, 2022, 7:05 PM IST
ಮಹದೇವಪುರ: ವ್ಯಕ್ತಿಯನ್ನು ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಚರಂಡಿಯಲ್ಲಿ ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಭಾರತದ ಮೂಲದ ವಿಶಾಲ್ ಪ್ರಜಾಪತಿ(25 ) ರುಬಿ ಪ್ರಜಾಪತಿ(23), ಗುಂಜಾದೇವಿ ಬಂಧಿತ ಆರೋಪಿಗಳು.
ಬಿಹಾರ ಮೂಲದ ಓಂನಾಥ್ ಸಿಂಗ್ (45) ಕೊಲೆಯಾದ ವ್ಯಕ್ತಿ. ಈತ ಅಂಗಡಿಗಳಿಗೆ ಗುಟ್ಕಾ ಪ್ಯಾಕೇಟ್ ಸರಬರಾಜು ಮಾಡುವ ಕೆಲಸ ಮಾಡುತ್ತಿದ್ದ.
ಘಟನೆಯ ವಿವರ: ಓಂನಾಥ್ ಸಿಂಗ್ ಬೆಳತ್ತೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇದೇ ಕಟ್ಟಡದಲ್ಲಿ ಉತ್ತರ ಭಾರತದ ಮೂಲದ ರುಬಿ ಪ್ರಜಾಪತಿ ಎನ್ನುವವಳ ಮೇಲೆ ಓಂನಾಥ್ ಕಣ್ಣು ಹಾಕಿದ್ದ. ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಒಂದು ದಿನ ಓಂನಾಥ್ ರುಬಿ ಪ್ರಜಾಪತಿ ಗಂಡ ಮನೆಯಲ್ಲಿ ಇಲ್ಲದ ವೇಳೆ ರುಬಿ ಟೀಯಲ್ಲಿ ನಿದ್ದೆ ಮಾತ್ರೆ ಹಾಕಿ ದೌರ್ಜನ್ಯದಿಂದ ಆಕೆಯ ಮೇಲೆ ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿದ್ದ. ಇದೇ ವಿಡಿಯೋ ಇಟ್ಕೊಂಡು ಆಕೆಗೆ ಬ್ಲಾಕ್‌ಮೇಲ್ ಮಾಡುತ್ತಿದ್ದ.
ಇದನ್ನೂ ಓದಿ:ಕುಷ್ಟಗಿ : ತಾಲೂಕಿನ 23 ಕೆರೆಗಳನ್ನು ಅಮೃತ ಸರೋವರವಾಗಿ ರೂಪಿಸಲು ಯೋಜನೆ
ರುಬಿ ಗಂಡನಿಂದಲೇ ಹತ್ಯೆಗೆ ಪ್ಲ್ಯಾನ್: ಓಂನಾಥ್ ಕಿರುಕುಳ ಹೆಚ್ಚಾಗುತ್ತಿದ್ದಂತೆ, ರುಬಿ ತನ್ನ ಗಂಡನ ಬಳಿ ಎಲ್ಲಾ ವಿಷಯವನ್ನು ಹೇಳಿದ್ದಾಳೆ. ಇದರಿಂದ ರೊಚ್ಚಿಗೆದ್ದ ವಿಶಾಲ್ ಪ್ರಜಾಪತಿ ಪಕ್ಕಾ ಪ್ಲ್ಯಾನ್ ಮಾಡಿ ಜುಲೈ 4ರಂದು ಓಂನಾಥ್ ಸಿಂಗ್ ನನ್ನು ಮನೆಗೆ ಕರೆಸಿ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಹತ್ಯೆ ಮಾಡಿದ್ದಾರೆ.
ಹತ್ಯೆಯ ಬಳಿಕ ಸಾಕ್ಷಿ ನಾಶಪಡಿಸಲು ಮೃತದೇಹವನ್ನು ಮೂಟೆ ಕಟ್ಟಿ ಬೆಳತ್ತೂರು ರಸ್ತೆಯ ಚರಂಡಿಯಲ್ಲಿ ಶವ ಎಸೆದು, ಮಂಗಳೂರಿನಲ್ಲಿ ತಲೆಮಾರಿಸಿಕೊಂಡಿದ್ದರು.
ಸ್ಥಳೀಯರ ವಿಚಾರಣೆ ವೇಳೆ ಶವದ ಗುರುತು ಪತ್ತೆ ಮಾಡಿದ ಕಾಡುಗೋಡಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ಪೋಸ್ಟ್ ಮಾರ್ಟಂ ವೇಳೆ ಅದು ಕೊಲೆ ಅನ್ನೋದು ಧೃಡಪಡಿಸಿಕೊಂಡಿದ್ದಾರೆ.
ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.